“ಜ್ವರ ಲಕ್ಷಣವಿರುವ ರೋಗಿಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯ’
ಜಿಲ್ಲಾ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕುಂದುಕೊರತೆ ಸಭೆ
Team Udayavani, Dec 10, 2020, 5:06 AM IST
ಉಡುಪಿ: ಶೀತ, ಕೆಮ್ಮು, ಜ್ವರ, ಐ.ಎಲ್.ಐ ಚಿಕಿತ್ಸೆಗೆ ಬರುವ ರೋಗಿಗಳಿಗೆ ಕಡ್ಡಾಯವಾಗಿ ಕೋವಿಡ್ ಟೆಸ್ಟ್‌ಗಳನ್ನು ಮಾಡಿಸಬೇಕು. ತಪ್ಪಿದಲ್ಲಿ ಚಿಕಿತ್ಸೆ ನೀಡದ ಖಾಸಗಿ ಆಸ್ಪತ್ರೆಗಳ ನೋಂದಣಿ ರದ್ದು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು. ಅವರು ಬುಧವಾರ ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಖಾಸಗಿ ವೈದ್ಯಕೀಯ ಸಂಸ್ಥೆಗಳ ನೋಂದಣಿ ಪ್ರಾಧಿಕಾರದ ಕುಂದುಕೊರತೆ ನಿವಾರಣ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಜನರು ಕೋವಿಡ್ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಇದರಿಂದಾಗಿ ಎರಡನೇ ಅಲೆ ಪ್ರಾರಂಭವಾಗುವ ಸಾಧ್ಯತೆಗಳಿವೆ. ಇದಕ್ಕೆ ಕಡಿವಾಣ ಹಾಕಬೇಕು. ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಕೆಮ್ಮು, ಶೀತ, ಜ್ವರ ಹಾಗೂ ಐ.ಎಲ್.ಐ. ಚಿಕಿತ್ಸೆ ಪಡೆಯಲು ಬಂದಂತಹ ರೋಗಿಗಳಿಗೆ ತಪ್ಪದೇ ಕೋವಿಡ್ ಪರೀಕ್ಷೆ ಮಾಡಿಸಬೇಕು. ಖಾಸಗಿ ವೈದ್ಯಕೀಯ ಸಂಸ್ಥೆಗಳು ರೋಗಿಗಳ ಬಗ್ಗೆ ನಿಖರ ಮಾಹಿತಿ ನೀಡಬೇಕು ಎಂದರು.
ನೋಂದಣಿ ಕಡ್ಡಾಯ
ಜಿಲ್ಲೆಯಲ್ಲಿ ವೈದ್ಯಕೀಯ ವೃತ್ತಿಯನ್ನು ಪ್ರಾರಂಭಿಸುವ ಮುನ್ನ ಜಿಲ್ಲಾ ಮಟ್ಟದ ನೋಂದಣಿ ಪ್ರಾಧಿಕಾರದಲ್ಲಿ ನೋಂದಣಿ ಮಾಡಿಸಿ, ತಮ್ಮ ವೃತ್ತಿ ಯನ್ನು ಕೈಗೊಳ್ಳಬೇಕು. ನೋಂದಣಿ ಮಾಡದೇ ಚಿಕಿತ್ಸೆ ನೀಡಿದವರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ವಂಶ ಪಾರಂಪರ್ಯವಾಗಿ ವೈದ್ಯಕೀಯ ಚಿಕಿತ್ಸೆ ನೀಡುತ್ತಿದ್ದೇವೆ ಎಂಬ ಹೆಸರಿನಲ್ಲಿ ಔಷಧೋಪಚಾರಗಳನ್ನು ನೀಡುವಾಗ ಅಲೋಪತಿ ಔಷಧ ನೀಡುವುದು ಅಪರಾಧ. ಇಂತಹ ವೃತ್ತಿಗಳು ಕಂಡುಬಂದಲ್ಲಿ ಕಾನೂನಿಡಿಯಲ್ಲಿ ಸೂಕ್ತ ಕ್ರಮವನ್ನು ತೆಗೆದುಕೊಳ್ಳಬೇಕೆಂದು ತಾಲೂಕು ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರಾಧಿಕಾರಕ್ಕೆ ಅಗತ್ಯ ದಾಖಲೆ ಗಳೊಂದಿಗೆ ಕ್ಲಿನಿಕ್ ಅಥವಾ ನರ್ಸಿಂಗ್ ಹೋಮ್‌ಗಳನ್ನು ತೆರೆಯಲು ಅರ್ಜಿ ಸಲ್ಲಿಸಿದಾಗ ನಿಯಮಾನುಸಾರ ಅವರಿಗೆ ಶೀಘ್ರದಲ್ಲಿ ಲೈಸೆನ್ಸ್ ನೀಡಬೇಕೆಂದು ಜಿಲ್ಲಾಧಿಕಾರಿ ತಿಳಿಸಿದರು.
ಜಿಲ್ಲೆಯಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳ ಅನುಪಾತದಲ್ಲಿ ಅಸಮತೋಲನ ಉಂಟಾಗದಂತೆ ಎಚ್ಚರ ವಹಿಸಬೇಕು. ಪ್ರಸ್ತುತ 1000 ಗಂಡು ಮಕ್ಕಳಿಗೆ, 956 ಹೆಣ್ಣು ಮಕ್ಕಳಿದ್ದಾರೆ. ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಮಾಡುವುದು ಕಾನೂನು ಬಾಹಿರವಾಗಿದ್ದು ಅಂತಹ ಅಪರಾಧಕ್ಕೆ 3 ವರ್ಷ ಜೈಲು ಶಿಕ್ಷೆ ವಿಧಿಸಲಾಗುವುದು ಎಂದರು.
ಸ್ಕ್ಯಾನಿಂಗ್ ಸೆಂಟರ್‌ಗಳಲ್ಲಿ ಸರಕಾರದ ನಿಯಮಾನುಸಾರ ಕಾರ್ಯನಿರ್ವ ಹಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು. ಜತೆಗೆ ಜಿಲ್ಲಾ ಮಟ್ಟದ ಸಮಿತಿಗಳು ಆಗಿಂದಾಗ್ಗೆ ಅನಿರೀಕ್ಷಿತ ಭೇಟಿಗಳನ್ನು ನೀಡುವುದರೊಂದಿಗೆ ಅಲ್ಲಿನ ಚಟುವಟಿಕೆಗಳ ಮೇಲೆ ನಿಗಾ ವಹಿಸಬೇಕು ಎಂದರು.
ಸೂಕ್ತ ಬಯೋ ತ್ಯಾಜ್ಯ
ಆಸ್ಪತ್ರೆಗಳಲ್ಲಿನ ಬಯೋ- ಮೆಡಿಕಲ್ ತ್ಯಾಜ್ಯಗಳನ್ನು 48 ಗಂಟೆಗಳ ಒಳಗಾಗಿ ಶೇಖರಿಸುವುದರೊಂದಿಗೆ ವೈಜ್ಞಾನಿಕ ರೀತಿಯಲ್ಲಿ ಅವುಗಳನ್ನು ವಿಲೇವಾರಿ ಮಾಡಬೇಕು. ಅವುಗಳ ಶೇಖರಣೆಯ ಬಗ್ಗೆ ಬಾರ್‌ಕೋಡ್ ವ್ಯವಸ್ಥೆಯನ್ನು ಮಾಡುವುದು ಸೂಕ್ತ ಎಂದರು. ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವುದು ಸೇರಿದಂತೆ ಅಲ್ಲಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡಬೇಕೆಂದು ಸೂಚನೆ ನೀಡಿದರು. ವೈದ್ಯಕೀಯ ಚಿಕಿತ್ಸೆ ನೀಡುವಾಗ ನಿರ್ಲಕ್ಷದಿಂದ ತೊಂದರೆಗೊಳ ಗಾದವರಿಂದ ಬಂದ ದೂರುಗಳನ್ನು ವಿಳಂಬವಿಲ್ಲದೆ ಇತ್ಯರ್ಥ ಪಡಿಸಬೇಕೆಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ಸುಧೀರ್ ಚಂದ್ರ ಸೂಡ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಮರಾವ್, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ| ಪ್ರಶಾಂತ್ ಭಟ್, ಜಿಲ್ಲಾ ಸರ್ಜನ್ ಡಾ| ಮಧುಸೂದನ್ ನಾಯಕ್, ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್, ಮತ್ತಿತರ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.
ಭ್ರೂಣಲಿಂಗದ ಪತ್ತೆ: ಮಾಹಿತಿಗೆ ಬಹುಮಾನ
ಸಾರ್ವಜನಿಕರು ಯಾವುದೇ ಸ್ಕ್ಯಾನಿಂಗ್ ಸೆಂಟರ್‌ಗಳಲ್ಲಿ ಭ್ರೂಣಲಿಂಗದ ಪತ್ತೆಮಾಡಿ ಮಾಹಿತಿ ನೀಡುತ್ತಾರೆ ಎಂಬ ನಿಖರ ಮಾಹಿತಿ ಕೊಟ್ಟಲ್ಲಿ ಅಂತಹವರಿಗೆ 50,000 ರೂ. ಬಹುಮಾನ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಜಗದೀಶ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.