ಲಸಿಕಾ ಮಿತ್ರರ ಮೂಲಕ ಜಿಲ್ಲೆಯಲ್ಲಿ ಶೇ.100 ಲಸಿಕೆ ಗುರಿ
Team Udayavani, Nov 22, 2021, 1:02 PM IST
ಉಡುಪಿ: ಜಿಲ್ಲೆಯಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡಲು 9,99,000 ಗುರಿ ನಿಗದಿಪಡಿಸಿದ್ದು, ಇದುವರೆಗೆ 1ನೇ ಡೋಸ್ ಲಸಿಕೆಯನ್ನು 9,24,639 (ಶೇ. 92.56) ಜನರಿಗೆ ನೀಡಲಾಗಿದೆ ಹಾಗೂ ಇವರಲ್ಲಿ ಈಗಾಗಲೇ 6,11,569 (ಶೇ. 61.22) ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ.
ಕೋವಿಡ್ ಸಂಭಾವ್ಯ 3ನೇ ಅಲೆಯಲ್ಲಿ ಮಕ್ಕಳಿಗೆ ಹೆಚ್ಚು ಪರಿಣಾಮ ಉಂಟಾಗುವ ಸಾಧ್ಯತೆ ಇರುವುದರ ಜತೆ 18 ವರ್ಷ ಮೇಲ್ಪಟ್ಟವರಲ್ಲಿ ಲಸಿಕೆ ಪಡೆಯದವರಿಗೆ ಕೋವಿಡ್ ಕಾಯಿಲೆ ಬರುವ ಸಾಧ್ಯತೆ ಹೆಚ್ಚಾಗಿದೆ. ಈ ಎರಡನ್ನೂ ತಡೆಗಟ್ಟಲು 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡುವ ಉದ್ದೇಶದಿಂದ ಲಸಿಕಾ ಮಿತ್ರರು ನ. 22ರಿಂದ 30ರ ವರೆಗೆ ಜಿಲ್ಲೆಯ ಪ್ರತೀ ಮನೆಗಳನ್ನು ಭೇಟಿ ನೀಡುವ ಮೂಲಕ ಲಸಿಕೆ ಪಡೆದಿರುವ ಮತ್ತು ಪಡೆಯದಿರುವವರ ಬಗ್ಗೆ ಪರಿಶೀಲನೆ ನಡೆಸಲಿದ್ದು ಲಸಿಕೆ ಪಡೆಯದವರಿಗೆ ಲಸಿಕೆ ನೀಡುವುದರ ಮೂಲಕ ಶೇ.100 ಗುರಿ ಸಾಧಿಸಲು ಯೋಜನೆ ರೂಪಿಸಿದೆ.
ಗುರುತು ಹಚ್ಚುವ ಕ್ರಮ:
ಜಿಲ್ಲೆಯ ಮತದಾರರ ಪಟ್ಟಿಯನ್ನು ಬಳಸಿ ಪ್ರತೀ ಮನೆ ಸಮೀಕ್ಷೆ ಮಾಡಿ ಮನೆಯಲ್ಲಿರುವ 18 ವರ್ಷ ಮೇಲ್ಪಟ್ಟವರಲ್ಲಿ 2 ಡೋಸ್ ಲಸಿಕೆ ಪಡೆದ ಬಗ್ಗೆ ಖಚಿತಪಡಿಸಿಕೊಳ್ಳುತ್ತಾರೆ. ವೋಟರ್ ಲಿಸ್ಟ್‌ನಲ್ಲಿರುವ ಪ್ರತೀ ವ್ಯಕ್ತಿಯ ಹೆಸರಿನ ಪಕ್ಕದಲ್ಲಿ ಸೂಕ್ತ ಗುರುತು ಹಾಕಿಕೊಳ್ಳಲಾಗುತ್ತದೆ. ಲಸಿಕೆ ಪಡೆಯಲು ನಿರಾಕರಣೆ ಇದ್ದಲ್ಲಿ ಅವರ ಹೆಸರಿನ ಮುಂದೆ ನಿರಾಕರಣೆ ನಮೂದಿಸಿ ಮೊಬೈಲ್ ಸಂಖ್ಯೆ ದಾಖಲಿಸಲಾಗುವುದು. ಮತದಾರರ ಪಟ್ಟಿಯಲ್ಲಿರುವವರು ಮರಣ ಹೊಂದಿದ್ದಲ್ಲಿ ಹೆಸರಿನ ಮುಂದೆ ಮರಣ ಎಂದು ಹಾಗೂ ಮತದಾರ ಪಟ್ಟಿಯಲ್ಲಿರುವವರು ಹೊರ ಜಿಲ್ಲೆ/ರಾಜ್ಯದಲ್ಲಿ ನೆಲೆಸಿದ್ದರೆ ಅವರ ಹೆಸರಿನ ಮುಂದೆ ಹೊರಜಿಲ್ಲೆ ಎಂದು ನಮೂದಿಸಿ ಮೊಬೈಲ್ ಸಂಖ್ಯೆ ದಾಖಲಿಸಲಾಗುವುದು. ಮನೆಯಲ್ಲಿರುವವರಲ್ಲಿ 18 ವರ್ಷ ಮೇಲ್ಪಟ್ಟವರ ಹೆಸರು ವೋಟರ್ ಲಿಸ್ಟ್‌ನಲ್ಲಿ ಇಲ್ಲದಿದ್ದಲ್ಲಿ ಕುಟುಂಬದ ಸದಸ್ಯರ ಪಕ್ಕದಲ್ಲಿ ಹೊಸದಾಗಿ ಹೆಸರು ನಮೂದಿಸಿ ಲಸಿಕೆ ಪಡೆದ ಬಗ್ಗೆ ದಾಖಲಿಸಲಾಗುವುದು. ಪ್ರತೀ ಪಂಚಾಯತ್‌ನಲ್ಲಿ ವಾರದಲ್ಲಿ 1 ದಿನ ಬೆಳಗ್ಗೆ 7ರಿಂದ 2 ಗಂಟೆಯವರೆಗೆ ಮತ್ತು ಇನ್ನೊಂದು ವಾರದಲ್ಲಿ ಮಧ್ಯಾಹ್ನ 12 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಲಸಿಕಾ ಶಿಬಿರ ಏರ್ಪಡಿಸಿ ಕೂಲಿ ಕಾರ್ಮಿಕರು ಲಸಿಕೆ ಪಡೆಯಲು ಯೋಜನೆ ರೂಪಿಸಲಾಗಿದೆ.
ಗ್ರಾ.ಪಂ. ಮಟ್ಟದ ಮೇಲ್ವಿಚಾರಣೆ:
ಕಾರ್ಯಕ್ರಮದಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಬಿಎಲ್‌ಒ ಅವರನ್ನು ಒಳಗೊಂಡ ತಂಡಗಳನ್ನು ರಚಿಸಿಕೊಂಡು ಪಂಚಾಯತ್ ವ್ಯಾಪ್ತಿಯಲ್ಲಿರುವ ಎಲ್ಲ ಮನೆಗಳಿಗೆ ಭೇಟಿ ನೀಡಿ ಪ್ರಥಮ ಡೋಸ್ ಕೋವಿಡ್ ಲಸಿಕೆ ಪಡೆಯದವರನ್ನು ಮತ್ತು ಪ್ರಥಮ ಡೋಸ್ ಕೊವಿ ಶೀ ಲ್ಡ್ ಲಸಿಕೆ ಪಡೆದು 84 ದಿನ ದಾಟಿದವರಲ್ಲಿ ಹಾಗೂ ಪ್ರಥಮ ಡೋಸ್ ಕೊವ್ಯಾಕ್ಸಿನ್ ಲಸಿಕೆ ಪಡೆದು 28 ದಿನ ದಾಟಿದವರಲ್ಲಿ 2ನೇ ಡೋಸ್ ಪಡೆಯದವರನ್ನು ಪತ್ತೆ ಹಚ್ಚಲಾಗುವುದು.
ಪಂಚಾಯತ್ ವ್ಯಾಪ್ತಿಯಲ್ಲಿ ಲಸಿಕಾ ಶಿಬಿರ ಏರ್ಪಡಿಸಿ ಲಸಿಕೆ ಪಡೆಯದವರನ್ನು ಗುರುತಿಸಿ ಶೇ. 100 ಲಸಿಕಾ ಸಾಧನೆ ಮಾಡಲು ಗ್ರಾ.ಪಂ. ಮಟ್ಟದಲ್ಲಿ ಮೇಲ್ವಿಚಾರಣೆ ಮಾಡಲು ತಾಲೂಕು ಮಟ್ಟದ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಲಸಿಕೆ ಪಡೆಯಲು ನಿರಾಕರಣೆ ಜಾಸ್ತಿ ಇರುವ ಪ್ರದೇಶಗಳಿಗೆ ಭೇಟಿ ನೀಡಿ ಜನರನ್ನು ಮನವೊಲಿಸಿ ಲಸಿಕೆ ಪಡೆಯುವಂತೆ ಮಾಡಲಾಗುವುದು.
80 ವರ್ಷ ಮೇಲ್ಪಟ್ಟವರಲ್ಲಿ ಲಸಿಕೆ ಕೇಂದ್ರಕ್ಕೆ ಬರಲು ಅಶಕ್ತರಾದವರಿಗೆ ಮನೆಗೆ ಭೇಟಿ ನೀಡಿ ಲಸಿಕೆ ನೀಡಲು ಹಾಗೂ ಗರ್ಭಿಣಿಯರು ಮತ್ತು ಬಾಣಂತಿಯರು ಕೋವಿಡ್ ಲಸಿಕೆ ಪಡೆಯುವಂತೆ ಪ್ರಸೂತಿ ತಜ್ಞರ ಮೂಲಕ ಅರಿವು ಮೂಡಿಸಲಾಗುವುದು. ಲಸಿಕೆ ಕೇಂದ್ರದಲ್ಲಿ ಲಸಿಕೆ ಪಡೆಯುವವರಿಗೆ ಕೋವಿಡ್ ಸ್ವಾಬ್ ಪರೀಕ್ಷೆ ಮಾಡದಂತೆ ಈಗಾಗಲೇ ಸೂಚಿಸಲಾಗಿದೆ.
ಕ್ರಿಯಾ ಯೋಜನೆ:
ಜಿಲ್ಲೆಯಲ್ಲಿ ಲಸಿಕಾ ಮಿತ್ರರ ಮೂಲಕ ಪ್ರತೀ ಮನೆ ಭೇಟಿ ಕಾರ್ಯಕ್ರಮದ ಯಶಸ್ಸಿಗಾಗಿ ಕ್ರಿಯಾಯೋಜನೆ ರೂಪಿಸಲಾಗಿದ್ದು, ಪ್ರತೀ ದಿನ ಸಾಧಿಸಬೇಕಾದ ಪ್ರಗತಿಯ ಬಗ್ಗೆ ಗುರಿ ನಿಗದಿಪಡಿಸಲಾಗಿದೆ. ಗ್ರಾ.ಪಂ. ಮಟ್ಟದಲ್ಲಿ ಪ್ರತೀ ದಿನ ಮೇಲ್ವಿಚಾರಣೆ ಮಾಡಲು ಪ್ರತೀ ತಾಲೂಕುವಾರು ಅಧಿಕಾರಿಗಳನ್ನು ನಿಯೋಜಿಸಲಾಗಿದೆ.
ಸಾರ್ವಜನಿಕರು ಮನೆ ಭೇಟಿಗೆ ಆಗಮಿಸುವ ಲಸಿಕಾ ಮಿತ್ರರಿಗೆ ಸಂಪೂರ್ಣ ಸಹಕಾರ ನೀಡಬೇಕು. ಕೋವಿಡ್ ಲಸಿಕೆ ಪಡೆಯುವ ಕುರಿತು ಯಾವುದೇ ಸಂದೇಹಗಳಿದ್ದಲ್ಲಿ ಸಮೀಪದ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದ್ದು, ಲಸಿಕೆ ಪಡೆಯುವುದರಿಂದ ಯಾವುದೇ ಸಮಸ್ಯೆಗಳಿರುವುದಿಲ್ಲ. ಜಿಲ್ಲೆಯ ಪ್ರತಿಯೊಬ್ಬರೂ 2 ಡೋಸ್ ಕೋವಿಡ್ ಲಸಿಕೆ ಪಡೆಯುವ ಮೂಲಕ ಜಿಲ್ಲೆಯಲ್ಲಿ ಶೇ. 100 ಲಸಿಕೀಕರಣದ ಗುರಿ ಸಾಧಿಸಿ, ಜಿಲ್ಲೆಯನ್ನು ಕೋವಿಡ್ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಹಾಗೂ ಇಡೀ ರಾಜ್ಯಕ್ಕೆ ಮಾದರಿ ಜಿಲ್ಲೆಯನ್ನಾಗಿ ಮಾಡಲು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು. –ಕೂರ್ಮಾರಾವ್ ಎಂ., ಜಿಲ್ಲಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು
Manipal: ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ
ಕಲಾವಿದರ ಮಾಸಾಶನ ಹೆಚ್ಚಳಕ್ಕೆ ಸಿಗದ ಆರ್ಥಿಕ ಇಲಾಖೆ ಒಪ್ಪಿಗೆ
Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ
Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.