ಸದ್ಗುಣಗಳಿಂದ ಸುಸಂಸ್ಕೃತ ಸಮಾಜ ನಿರ್ಮಾಣ: ವಿಖ್ಯಾತಾನಂದ ಶ್ರೀ


Team Udayavani, Feb 11, 2019, 1:00 AM IST

sadguna.jpg

ಕಾರ್ಕಳ: ಸದ್ವಿಚಾರ, ಸತ್‌ಚಿಂತನೆ, ಸದಾಚಾರ ಮೈಗೂಡಿಸಿಕೊಂಡಲ್ಲಿ ಸಮಾಜದಲ್ಲಿ ಉನ್ನತ ಸ್ಥಾನ ಪಡೆಯಲು ಸಾಧ್ಯ. ಪ್ರತಿಯೋರ್ವರು ಸದ್ಗುಣ ಗಳಿಂದ ಮಿಳಿತಗೊಂಡಲ್ಲಿ ಸುಸಂಸ್ಕೃತ ಸ‌ಮಾಜ ನಿರ್ಮಾಣವಾಗುವುದು. ನಾರಾಯಣ ಗುರುಗಳ ಕಲ್ಪನೆಯೂ ಅದೇ ಆಗಿತ್ತು ಎಂದು ಶ್ರೀ ಬಲೊÂಟ್ಟುವಿನ ಶ್ರೀ ವಿಖ್ಯಾತಾನಂದ ಸ್ವಾಮೀಜಿ ನುಡಿದರು.

ಅವರು ಫೆ. 10ರಂದು ಕಾರ್ಕಳ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಜರಗಿದ ಬಿಲ್ಲವ ಸಮಾವೇಶ, ವಿದ್ಯಾರ್ಥಿ ವೇತನ ವಿತರಣೆ, ವಾಣಿಜ್ಯ ಸಂಕೀರ್ಣ ಮತ್ತು ನೂತನ ಸಭಾಂಗಣದ ಉದ್ಘಾಟನ ಸಮಾರಂಭದಲ್ಲಿ ಆಶೀರ್ವಚನ ನೀಡಿದರು.

ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಬಿಲ್ಲವ ಸಮಾಜವು ಒಟ್ಟಾಗಿ ನಮ್ಮ ಶಕ್ತಿ, ಸಾಮರ್ಥ್ಯವನ್ನು ಸಾಬೀತು ಪಡಿಸುವ ಅಗತ್ಯವಿದೆ. ಬಿಲ್ಲವ  ಸಂಘಟನೆಗಳನ್ನು  ಒಂದುಗೂಡಿಸಿ ಹೋರಾಟದ ಮೂಲಕ ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳುವುದು ಅನಿವಾರ್ಯ ಎಂದರು.

ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ ಅವರು ಮಾತನಾಡಿ, ಬ್ರಹ್ಮಶ್ರೀ ನಾರಾಯಣ ಗುರುಗಳು ಜ್ಞಾನದ ಬೆಳಕು ನೀಡಿ, ಸ್ವಸ್ಥ ಸಮಾಜ ಕಟ್ಟುವಲ್ಲಿ ಶ್ರಮಿಸಿದ್ದರು. ಅವರ ಆದರ್ಶದಲ್ಲಿಯೇ ಕಾರ್ಕಳ ಬಿಲ್ಲವ ಸಮಾಜ ಸೇವಾ ಸಂಘ ಸಮಾಜದ ಏಳಿಗೆಗಾಗಿ ನಿರಂತರವಾಗಿ ನಾನಾ ಕಾರ್ಯಯೋಜನೆಗಳನ್ನು ಹಮ್ಮಿಕೊಂಡಿರುವುದು ಅಭಿನಂದನೀಯ ಎಂದರು.

ಬಿಲ್ಲವರ ಪ್ರಮುಖ ಬೇಡಿಕೆಯಾದ ಪ್ರವರ್ಗ 2ಎಯಿಂದ ಪ್ರವರ್ಗ 1 ವರ್ಗಕ್ಕೆ ಸೇರಿಸುವ ಕಾರ್ಯವಾಗಬೇಕು. ನಾರಾಯಣ ಗುರು ನಿಗಮ ಸ್ಥಾಪನೆಯಾಗಬೇಕು. ಮಹಿಳಾ ಸ್ವಸಹಾಯ ಗುಂಪು ರಚನೆ ಮೂಲಕ ಆರ್ಥಿಕ, ಸಾಮಾಜಿಕವಾಗಿ ಮುಂಚೂಣಿಗೆ ಬರುವಂತಾಗಬೇಕು ಎಂದರು.

ಶಾಸಕ ವಿ. ಸುನಿಲ್‌ ಕುಮಾರ್‌ ಮಾತನಾಡಿ, ಕಾರ್ಕಳ ದಲ್ಲಿ ಬಿಲ್ಲವ ಸಮುದಾಯದ ಸಭಾಂಗಣ, ವಾಣಿಜ್ಯ ಸಂಕೀರ್ಣ ಸುಂದರವಾಗಿ ನಿರ್ಮಾಣಗೊಂಡಿದೆ. ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಮೂಲಕ ಬಹುದೊಡ್ಡ ಕಾರ್ಯ ಮಾಡಿದೆ. ಕೇವಲ ರಾಜಕೀಯ ಮಾತ್ರವಲ್ಲದೆ ಧಾರ್ಮಿಕ, ಶೈಕ್ಷಣಿಕ, ಕ್ರೀಡೆ ಸೇರಿದಂತೆ ಇನ್ನಿತರ ಕ್ಷೇತ್ರಗಳಲ್ಲೂ ಬಿಲ್ಲವ ಸಮುದಾಯದವರು ಮುಂದೆ ಬರಬೇಕು. ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸುವಲ್ಲಿ ಬಿಲ್ಲವ ಸಂಘದಿಂದ ಪೂರಕ ವಾತಾವರಣ ಒದಗಿಸಿಕೊಡಬೇಕಾಗಿದೆ ಎಂದರು. 

ವಿಧಾನ ಪರಿಷತ್‌ ಸದಸ್ಯ ಹರೀಶ್‌ ಕುಮಾರ್‌, ಯಕ್ಷಗಾನ ಕಲಾವಿದ ಸೀತಾರಾಮ ಕುಲಾಲ್‌ ಮಾತನಾಡಿದರು. ಬಿಲ್ಲವರ ಅಸೋಸಿಯೇಶನ್‌ ಅಧ್ಯಕ್ಷ ವೇದ ಕುಮಾರ್‌, ಉದ್ಯಮಿ ಶ್ರೀಧರ ಎಸ್‌. ಪೂಜಾರಿ, ರಶ್ಮಿ ಚಾರಿಟೆಬಲ್‌ ಟ್ರಸ್ಟ್‌ ಅಧ್ಯಕ್ಷೆ ಸಾವಿತ್ರಿ ಡಿ.ಆರ್‌. ರಾಜು, ಮಹಿಳಾ ವಿಭಾಗದ ಅಧ್ಯಕ್ಷೆ ನಾಗಮ್ಮ, ತಾಲೂಕು ಸಮ್ಮೇಳನದ ಉಪಾಧ್ಯಕ್ಷ ಚಂದ್ರಹಾಸ ಸುವರ್ಣ, ಪ್ರದೀಪ್‌ ಕೋಟ್ಯಾನ್‌, ಸುಬೀತ್‌ ಕುಮಾರ್‌ ಎನ್‌., ಕಾರ್ಯದರ್ಶಿ ಪ್ರಭಾಕರ ಬಂಗೇರ, ಪ್ರವೀಣ್‌ ಸುವರ್ಣ, ಯುವವಿಭಾಗದ ಅಧ್ಯಕ್ಷ ಸಂದೇಶ್‌ ಕೋಟ್ಯಾನ್‌, ಶ್ರೀಕೃಷ್ಣ ಕ್ಷೇತ್ರದ ಆಡಳಿತ ಮೊಕ್ತೇಸರ ಭಾಸ್ಕರ ಎಸ್‌. ಕೋಟ್ಯಾನ್‌ ಮತ್ತಿತರರು ಉಪಸ್ಥಿತರಿದ್ದರು.

ತಾಲೂಕು ಬಿಲ್ಲವ ಸೇವಾ ಸಮಾಜದ ಅಧ್ಯಕ್ಷ ಡಿ. ಆರ್‌. ರಾಜು ಸ್ವಾಗತಿಸಿ, ಪರಮಾನಂದ ಸಾಲ್ಯಾನ್‌, ಸುಧಾಕರ್‌, ನಾಗೇಶ್‌ ಸುವರ್ಣ ನಿರೂಪಿಸಿದರು.

ಲೋಕಸಭೆಯಲ್ಲಿ ಬಿಲ್ಲವರಿರಬೇಕಲ್ಲವೇ?
ಮುಖ್ಯಮಂತ್ರಿಯಾಗಿ ಬಿಲ್ಲವ ಸಮಾಜದ ಬಂಗಾರಪ್ಪ, ಕೇಂದ್ರ ಸಚಿವರಾಗಿ ಬಿ. ಜನಾರ್ದನ ಪೂಜಾರಿ ಅವರು ರಾಜಕೀಯ ಕ್ಷೇತ್ರದಲ್ಲಿ ಉನ್ನತ ಸ್ಥಾನಮಾನ ಅಲಂಕರಿಸಿ, ಸಮಾಜದ ಅಭ್ಯುದಯಕ್ಕಾಗಿ ದುಡಿದು ಧೀಮಂತ ನಾಯಕ ರೆನಿಸಿಕೊಂಡವರು. ಬಹುದೊಡ್ಡ ಸಮಾಜಗಳಲ್ಲಿ ಬಿಲ್ಲವ ಸಮಾಜವೂ ಒಂದಾಗಿದ್ದು, ಲೋಕಸಭೆಯಲ್ಲಿ ಓರ್ವರಾದರೂ ನಮ್ಮನ್ನು ಪ್ರತಿನಿಧಿಸು ವವರು ಬೇಕಲ್ಲವೇ ಎಂದು ಸೊರಕೆ ಹೇಳಿದರು.

ಟಾಪ್ ನ್ಯೂಸ್

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌

Gaviyappa-MLA

Congress Guarantee: ಎರಡು-ಮೂರು ಗ್ಯಾರಂಟಿ ನಿಲ್ಲಿಸಿ: ಎಚ್‌.ಆರ್‌. ಗವಿಯಪ್ಪ ಒತ್ತಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

Yakshagana: ಇಂದು ನೀಲಾವರ ಮೇಳ ತಿರುಗಾಟಕ್ಕೆ ಚಾಲನೆ

Yakshagana: ಇಂದು ನೀಲಾವರ ಮೇಳ ತಿರುಗಾಟಕ್ಕೆ ಚಾಲನೆ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

2

Malpe: ಬೋಟಿನಲ್ಲಿದ್ದ ಮೀನುಗಾರ ನಾಪತ್ತೆ; ಪ್ರಕರಣ ದಾಖಲು

crime

Padubidri: ಸ್ಕೂಟಿಯಿಂದ ಬಿದ್ದು ಮಹಿಳೆಗೆ ತೀವ್ರ ಗಾಯ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.