ಕೇರಳ ಜೈಲಿನಿಂದ ಪರಾರಿಯಾಗಿದ್ದ ಅಪರಾಧಿ ಬ್ರಹ್ಮಾವರದಲ್ಲಿ ಸೆರೆ
Team Udayavani, Oct 19, 2022, 6:40 AM IST
ಉಡುಪಿ: ಕೇರಳ ರಾಜ್ಯದಲ್ಲಿ ಜೀವಾವಧಿ ಶಿಕ್ಷೆಗೊಳಪಟ್ಟು ಜೈಲಿನಿಂದ ಪರಾರಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿ ರಾಜೇಶ್ (39)ನನ್ನು ಉಡುಪಿ ಜಿಲ್ಲಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ತಿರುವನಂತಪುರಂ ಜಿಲ್ಲೆಯ ನಯತಿನಕಾರ ತಾಲೂಕಿನ ನಿವಾಸಿಯಾಗಿರುವ ಆರೋಪಿ ವಿರುದ್ಧ ತಿರುವಂತಪುರಂ ಗ್ರಾಮಾಂತರ ಜಿಲ್ಲೆಯ, ವಾಟಪುರ ಪೊಲೀಸ್ ಠಾಣೆಯಲ್ಲಿ ಕೊಲೆ, ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಶಿಕ್ಷೆಗೊಳಪಟ್ಟಿದ್ದ ಆರೋಪಿಯು ಕೇಂದ್ರ ಕಾರಗೃಹದಲ್ಲಿದ್ದು, ಅಲ್ಲಿಂದ ನೆಟ್ಟುಕತಾರಿ 2020ರಂದು ಡಿ. 12ರಂದು ಈ ಜೈಲಿನಿಂದ ಆರೋಪಿ ಪರಾರಿಯಾಗಿದ್ದ. ಈ ಬಗ್ಗೆ ನೇಯರ್ ಡ್ಯಾಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
2012ರಲ್ಲಿ ಅಪ್ರಾಪ್ತ ವಯಸ್ಕ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯವು ತ್ವರಿತ ವಿಚಾರಣೆ ನಡೆಸಿ 2013ರಲ್ಲಿ ಗಲ್ಲು ಶಿಕ್ಷೆ ವಿಧಿಸಿದ್ದು, ಅನಂತರ ಜೀವಾವಧಿ ಶಿಕ್ಷೆಯಾಗಿ ಮಾರ್ಪಾಡಾಗಿತ್ತು. ಆರೋಪಿ ಉಡುಪಿಯಲ್ಲಿ ವಾಸವಾಗಿರುವ ಹಿನ್ನೆಲೆಯಲ್ಲಿ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ತಂಡವು ಆರೋಪಿಯನ್ನು ಬ್ರಹ್ಮಾವರ ತಾಲೂಕಿನ ನೈಲಾಡಿ, ಬಿಲ್ಲಾಡಿ, ಕಬ್ಬಿನ ಹಿತ್ಲು ಎನ್ನುವಲ್ಲಿ ವಶಕ್ಕೆ ಪಡೆದು ಕೇರಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಕೇರಳ ಪೊಲೀಸರು ಆರೋಪಿಯನ್ನು ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಲಯದ ಆದೇಶದಂತೆ ಕೇರಳಕ್ಕೆ ಕರೆದುಕೊಂಡು ಹೋಗಿದ್ದಾರೆ. ಆರೋಪಿಯನ್ನು ಪತ್ತೆ ಮಾಡಿರುವ ತಂಡಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕ ಹಾಕೆ ಅಕ್ಷಯ್ ಮಚ್ಚೀಂದ್ರ ಪ್ರಶಂಸನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Boxing Day Test: ನೀಗಲಿ ಭಾರತದ ಬ್ಯಾಟಿಂಗ್ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ
Koteshwar: ಬೀಜಾಡಿಯ ಯೋಧ ಅನೂಪ್ ಪೂಜಾರಿ ಮೃತ್ಯು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.