ಉಡುಪಿ: ಅಂತಾರಾಜ್ಯ ಸರಗಳ್ಳನ ಬಂಧನ
Team Udayavani, Oct 29, 2022, 12:19 AM IST
ಉಡುಪಿ: ಉಡುಪಿ ನಗರದಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಅಂತರ್‌ರಾಜ್ಯ ಸರಗಳ್ಳ ದಾಂಡೇಲಿ ಪಟೇಲ್ ನಗರದ ನಿವಾಸಿ ಮೌಲಾಲಿ ಜಮಾದಾರ್‌ನನ್ನು ಬಂಧಿಸಿದ್ದಾರೆ.
ನಗರದ ಪ್ರೇಮಾ ಶೇಣವ ಅವರು ಅ. 3ರಂದು ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದಲ್ಲಿ ನಡೆದ ಚಂಡಿಕಾಯಾಗದಲ್ಲಿ ಪಾಲ್ಗೊಂಡು ವಾಪಸು ಮನೆಗೆ ಹಿಂತಿರುಗುತ್ತಿದ್ದ ವೇಳೆ ಎಂಜಿಎಂ ಕಾಲೇಜಿನ ಮೈದಾನದ ಬಳಿ ಆರೋಪಿ ಪ್ರೇಮಾ ಅವರ ಕುತ್ತಿಗೆಗೆ ಕೈಹಾಕಿ 50 ಗ್ರಾಂ ತೂಕದ ಚಿನ್ನದ ಪಕಳದ ಸರವನ್ನು ಕಸಿದುಕೊಂಡು ಪರಾರಿಯಾಗಿದ್ದ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಪೊಲೀಸರು ಲಭ್ಯ ಸಿಸಿ ಟಿವಿ ಫೂಟೇಜ್‌ಗಳು ಹಾಗೂ ಮೊಬೈಲ್ ಕರೆ ವಿವರಗಳನ್ನು ಆಧರಿಸಿ ಆರೋಪಿ ಚಿನ್ನಾಭರಣಗಳನ್ನು ಧಾರವಾಡದ ಟೋಲ್ ನಾಕಾದ ಗೋಲ್ಡ್ ಶಾಪ್‌ವೊಂದರಲ್ಲಿ ಮಾರಾಟ ಮಾಡಿರುವುದು ತಿಳಿದುಬಂತು. ಅಲ್ಲದೆ 2021ರಲ್ಲಿ ಕಡಿಯಾಳಿಯಲ್ಲಿ ವೈದ್ಯರಾದ ಡಾ| ಪ್ರಜ್ಞಾ ಕೆ. ಶ್ರೀಕಾಂತ್ ಅವರ ಮನೆಯಲ್ಲಿ ಚಿನ್ನಾಭರಣಗಳನ್ನು ಕಳವು ಮಾಡಿದ್ದ ಬಗ್ಗೆ ಆರೋಪಿ ಒಪ್ಪಿಕೊಂಡಿದ್ದಾನೆ. ಈ ಪ್ರಕರಣದಲ್ಲಿ ಆರೋಪಿ ಧಾರವಾಡದಲ್ಲಿ ಮಾರಾಟ ಮಾಡಿದ್ದ ಅಂದಾಜು 3 ಲ.ರೂ. ಮೌಲ್ಯದ 63 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
ಜೈಲು ವಾಸ ಅನುಭವಿಸಿದ್ದ
ಆರೋಪಿ ವಿರುದ್ದ ದಾಂಡೇಲಿ ಗ್ರಾಮಾಂತರ ಪೊಲೀಸ್ ಠಾಣೆ, ಬಾಗಲಕೋಟೆ ಜಿಲ್ಲೆಯ ಕಲಾದಗಿ ಪೊಲೀಸ್ ಠಾಣೆ, ಧಾರವಾಡದ ಅಳ್ನಾವರ ಪೊಲೀಸ್ ಠಾಣೆ ಹಾಗೂ ಗೋವಾ ರಾಜ್ಯದ ಮಡಗಾಂವ್ ಮತ್ತು ಪೋಂಡಾ ಪೊಲೀಸ್ ಠಾಣೆಗಳಲ್ಲಿ ಹಲವಾರು ಕಳವು ಪ್ರಕರಣಗಳು ದಾಖಲಾಗಿ, ಬಂಧನಕ್ಕೊಳಗಾಗಿ ಇತ್ತೀಚೆಗೆ ಜೈಲಿನಿಂದ ಬಿಡುಗಡೆಯಾಗಿದ್ದ. ಈ ಪ್ರಕರಣದಲ್ಲಿ ಬಂಧಿಸಲ್ಪಟ್ಟು ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾನೆ.
ಎಸ್‌ಪಿ ಹಾಕೆ ಅಕ್ಷಯ್ ಮಚ್ಚಿಂದ್ರ ಅವರ ಮಾರ್ಗದರ್ಶನದಲ್ಲಿ ನಗರ ಠಾಣೆಯ ಪೊಲೀಸ್ ನಿರೀಕ್ಷಕ ಪ್ರಮೋದ್ ಕುಮಾರ್, ಅಪರಾಧ ವಿಭಾಗದ ಸಿಬಂದಿಗಳಾದ ಸತೀಶ್, ಕಿರಣ್ ಕೆ., ಆನಂದ ಎಸ್., ಹೇಮಂತ್ ಕುಮಾರ್, ಶಿವಕುಮಾರ್ ಎಚ್.ಎಂ., ಮಲ್ಲಯ್ಯ ಹಿರೇಮಠ, ವಿಶ್ವನಾಥ ಶೆಟ್ಟಿ ಹಾಗೂ ಜಿಲ್ಲಾ ಪೊಲೀಸ್ ಕಚೇರಿಯ ಸಿಡಿಆರ್ ವಿಭಾಗದ ದಿನೇಶ್ ಮತ್ತು ನಿತಿನ್ ಕುಮಾರ್ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ಸಾಣೂರಿನಲ್ಲಿ ಟೆಂಪೊಗೆ ಸರಕಾರಿ ಬಸ್ ಢಿಕ್ಕಿ, 10ಕ್ಕೂ ಅಧಿಕ ಮಂದಿಗೆ ಗಾಯ
ಸ್ವಚ್ಛತೆ, ಬಯಲು ಬಹಿರ್ದೆಸೆ ಮುಕ್ತ ಗ್ರಾಮ; ಕಾರ್ಕಳ ಪ್ರಥಮ, ಹೆಬ್ರಿಗೆ ದ್ವಿತೀಯ ಸ್ಥಾನ
ಗೋವಂಶ ಸುರಕ್ಷೆಗಾಗಿ ಕೋಟಿ ವಿಷ್ಣುಸಹಸ್ರನಾಮ ಪಠನ, ಜಪ ಅಭಿಯಾನ: ವಿವಿಧ ಮಠಾಧೀಶರ ಬೆಂಬಲ
Udupi: ದಿಢೀರ್ ಅಸ್ವಸ್ಥ; ಅಂಬಾಗಿಲಿನ ವ್ಯಕ್ತಿಯೊಬ್ಬರು ಸಾವು
Udupi: ವಿದೇಶದಲ್ಲಿ ಎಂಪಿಎಚ್ ಸೀಟ್ ಭರವಸೆ; ಹಣ ಪಡೆದು ವಂಚನೆ: 3 ಮಂದಿಯ ಬಂಧನ
MUST WATCH
ಹೊಸ ಸೇರ್ಪಡೆ
Shimoga: ಜಮೀನಿನ ವಿದ್ಯುತ್ ಪರಿವರ್ತಕ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ; ಆರೋಪಿಗಳ ಬಂಧನ
Los Angeles: ಮತ್ತೊಂದು ಕಾಡ್ಗಿಚ್ಚು; 30 ಸಾವಿರಕ್ಕೂ ಹೆಚ್ಚು ಜನರ ಸ್ಥಳಾಂತರ
Threat Mail: ಹಾಸ್ಯ ನಟ ಕಪಿಲ್ ಶರ್ಮಾ ಸೇರಿದಂತೆ ನಾಲ್ವರು ಸೆಲೆಬ್ರಿಟಿಗಳಿಗೆ ಜೀವ ಬೆದರಿಕೆ
Karkala: ಸಾಣೂರಿನಲ್ಲಿ ಟೆಂಪೊಗೆ ಸರಕಾರಿ ಬಸ್ ಢಿಕ್ಕಿ, 10ಕ್ಕೂ ಅಧಿಕ ಮಂದಿಗೆ ಗಾಯ
Donald Trump: ಚೀನಾ ಆಮದು ಮೇಲೆ ಶೇ.10 ಸುಂಕ… ನೂತನ ಅಧ್ಯಕ್ಷ ಟ್ರಂಪ್