Manipal: ತೋಟಗಳಲ್ಲಿ ಗಾಂಜಾ ಬೆಳೆ: ನಿಗಾ ವಹಿಸಲು ಜಿಲ್ಲಾಧಿಕಾರಿ ಸೂಚನೆ
Team Udayavani, Dec 4, 2024, 12:42 AM IST
ಮಣಿಪಾಲ: ಕಾಡಂಚಿನ ಪ್ರದೇಶದಲ್ಲಿ ಹಾಗೂ ಕೆಲವು ತೋಟಗಳಲ್ಲಿ ಗಾಂಜಾ ಬೆಳೆಯುವ ಸಾಧ್ಯತೆ ಇದ್ದು, ಇವುಗಳ ಬಗ್ಗೆ ಕೃಷಿ, ತೋಟಗಾರಿಕೆ, ಅರಣ್ಯ ಇಲಾಖೆಯ ಸಿಬಂದಿ ನಿರಂತರ ವೀಕ್ಷಣೆ ನಡೆಸುತ್ತಿರಬೇಕು ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಸೂಚನೆ ನೀಡಿದರು.
ಡಿಸಿ ಕಚೇರಿ ಸಭಾಂಗಣ ದಲ್ಲಿ ಮಂಗಳವಾರ ನಡೆದ ಎನ್‌ಸಿಒಆರ್‌ಡಿ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಾದಕ ವಸ್ತುಗಳ ಬಗ್ಗೆ ಶಾಲಾ- ಕಾಲೇಜುಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ನಡೆಸಬೇಕು ಎಂದರು.
ಮಣಿಪಾಲದಲ್ಲೇ ಶೇ. 90ರಷ್ಟು ಗಾಂಜಾ ಪ್ರಕರಣ
ಕರಾವಳಿ ಪೊಲೀಸರು ಮಾದಕ ವಸ್ತುಗಳ ಮಾರಾಟ ಹಾಗೂ ಸಾಗಾಣಿಕೆ ಬಗ್ಗೆ ನಿಗಾ ವಹಿಸಬೇಕು. ಜಿಲ್ಲೆಯಲ್ಲಿ 97ಕ್ಕೂ ಹೆಚ್ಚು ಮಾದಕ ಸೇವನೆಗಳ ಪ್ರಕರಣ ದಾಖಲಾಗಿದ್ದು, ಶೇ. 90ರಷ್ಟು ಪ್ರಕರಣಗಳು ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ಆಗಿದೆ. ಈ ಬಗ್ಗೆ ಕೇರ್‌ಟೆಕರ್ಗಳನ್ನು ಹೆಚ್ಚು ನಿಯೋಜಿಸಬೇಕು ಹಾಗೂ ವಿದ್ಯಾರ್ಥಿಗಳಿಗೆ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪೊಲೀಸ್ ಅಧೀಕ್ಷಕ ಡಾ| ಕೆ.ಅರುಣ್ ಮಾತನಾಡಿ, ಮೌತ್ ಫ್ರೆಶ°ರ್ ಎಂದು ತಂಬಾಕು ಉತ್ಪನ್ನಗಳನ್ನು ಜಾಹೀರಾತುಪಡಿಸಿ, ಮಾರಾಟ ಮಾಡುತ್ತಿರುವವರ ಮೇಲೆ ಕ್ರಮ ತೆಗೆದುಕೊಳ್ಳಬೇಕು. ಇಂತಹ ಜಾಹೀರಾತು ಫಲಕಗಳನ್ನು ತೆರವುಗೊಳಿಸಲು ಮುಂದಾಗಬೇಕು ಎಂದರು.
ಎಎಸ್‌ಪಿ ಪಿ.ಎ. ಹೆಗಡೆ, ಡಿಎಫ್‌ಒ ಗಣಪತಿ, ಡಿಎಚ್‌ಒ ಡಾ| ಐ.ಪಿ. ಗಡಾದ್, ಜಂಟಿ ಕೃಷಿ ನಿರ್ದೇಶಕಿ ಪೂರ್ಣಿಮಾ ಜಿ.ಸಿ., ಡಿಡಿಪಿಐ ಗಣಪತಿ, ಡಿಡಿಪಿಯು ಮಾರುತಿ, ಜಿಲ್ಲಾಮಟ್ಟದ ಅಧಿ ಕಾರಿಗಳು ಉಪಸ್ಥಿತರಿದ್ದರು.
ಆ್ಯಪ್ ಬಗ್ಗೆ ಮಾಹಿತಿ ನೀಡಿ
ಜಿಲ್ಲೆಯ ಶಾಲಾ-ಕಾಲೇಜುಗಳ ನೂರು ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಅಂಗಡಿ, ಹೊಟೇಲ್‌ಗಳಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಮಾಡುತ್ತಿರುವುದು ಕಂಡುಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಉದ್ದಿಮೆ ಪರವಾನಿಗೆ ರದ್ದು ಪಡಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಬಳಕೆ ಮಾಡುವುದು ಕಂಡುಬಂದಲ್ಲಿ ಸಾರ್ವಜನಿಕರು ದೂರು ನೀಡಲು ಸರಕಾರ Stop Tobacco ಆ್ಯಪ್ ಅಭಿವೃದ್ಧಿಪಡಿಸಿದ್ದು, ಈ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಮಾಹಿತಿ ನೀಡಬೇಕು ಎಂದು ಸಭೆಯಲ್ಲಿ ಜಿಲ್ಲಾಧಿಕಾರಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ
Udupi: ಗೀತಾರ್ಥ ಚಿಂತನೆ-113: ತನ್ನ ದೃಷ್ಟಾಂತವನ್ನೇ ಕೊಟ್ಟ ಶ್ರೀಕೃಷ್ಣ
Kaup: ಜೀರ್ಣೋದ್ಧಾರ ಅತ್ಯದ್ಭುತವಾಗಿ ಕಾಣುತ್ತಿವೆ: ಕಾಳಹಸ್ತೇಂದ್ರ ಶ್ರೀ
Udupi: ನ್ಯಾಯವಾದಿಗಳು ನ್ಯಾಯಾಂಗ ಸೈನಿಕರಂತೆ ಕಾರ್ಯನಿರ್ವಹಿಸಲಿ: ನ್ಯಾ| ಬಿ. ವೀರಪ್ಪ
Padubidri: ನಾಪತ್ತೆಯಾಗಿದ್ದ ವ್ಯಕ್ತಿ ಹೊಸನಗರದಲ್ಲಿ ಪತ್ತೆ
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Tragedy: ವಾಕಿಂಗ್ ಮುಗಿಸಿ ಬರುವಷ್ಟರಲ್ಲಿ ತಂದೆ, ತಾಯಿ, ಸಹೋದರಿಯ ಬರ್ಬರ ಹತ್ಯೆ
Ballari: ದೌರ್ಜನ್ಯ, ಹಿಂಸಾಚಾರ ಖಂಡಿಸಿ ಬಳ್ಳಾರಿ ಬಂದ್ ಕರೆಗೆ ಮಿಶ್ರ ಪ್ರತಿಕ್ರಿಯೆ
Ali Khan Tughlaq: ಮಾದಕ ವಸ್ತು ಕಳ್ಳಸಾಗಣೆ ಪ್ರಕರಣ; ಖ್ಯಾತ ನಟ ಮನ್ಸೂರ್ ಅಲಿ ಪುತ್ರ ಬಂಧನ
Kalaburagi: ಕಾಂಗ್ರೆಸ್‌ನ ಒಳ ಜಗಳ ಸಾಬೀತುಪಡಿಸಿದ ಸಮಾವೇಶ: ವಿಜಯೇಂದ್ರ
Waqf ವಿರುದ್ಧ ವಿಜಯೇಂದ್ರ ನೇತೃತ್ವದ ಹೋರಾಟಕ್ಕೆ ಚಾಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.