“ಸರಕಾರದಿಂದ ಕಲಾಸಕ್ತರನ್ನು ಸೃಷ್ಟಿಸುವ ಕಾರ್ಯಕ್ರಮ’
Team Udayavani, Mar 14, 2017, 12:51 PM IST
ಮಲ್ಪೆ: ನಮ್ಮ ಮೂಲ ಸಂಸ್ಕೃತಿ, ಆಚಾರ – ವಿಚಾರಗಳನ್ನು ವ್ಯಕ್ತಪಡಿಸುವ ಜಾನಪದ ಕಲಾ ಪ್ರಕಾರಗಳನ್ನು ಉಳಿಸಿ, ಬೆಳೆಸ ಬೇಕಾಗಿರು ವುದು ಇಂದಿನ ಆತೀ ಅಗತ್ಯಗಳಲ್ಲೊಂದು. ಈ ನಿಟ್ಟಿನಲ್ಲಿ ಸರಕಾರ ಕಲಾವಿದರನ್ನು ಪೋತ್ಸಾಹಿಸುವ ಹಾಗೂ ಕಲಾಸಕ್ತರನ್ನು ಸƒಷ್ಟಿಸುವ ಅನೇಕ ಕಾರ್ಯಕ್ರಮಗಳನ್ನು ಹಮ್ಮಿ ಕೊಳ್ಳುತ್ತಿರುವುದಾಗಿ ಉಡುಪಿ ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ ಹೇಳಿದರು.
ಅವರು ರವಿವಾರ ಮಲ್ಪೆ ಸಮುದ್ರ ಕಿನಾರೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ, ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿಯ ಸಹಯೋಗದೊಂದಿಗೆ ಹಮ್ಮಿಕೊಂಡ ಸುಗ್ಗಿ ಹುಗ್ಗಿ ವಿಶೇಷ ಜಾನಪದ ಕಲಾ ಪ್ರದರ್ಶನವನ್ನು ಉದ್ಘಾಟಿಸಿ
ಮಾತನಾಡಿ ಮಲ್ಪೆ ಬೀಚ್‌ನಲ್ಲಿ ಈಗಾಗಲೇ ಸಚಿವರ ನೇತƒತ್ವದಲ್ಲಿ ಹಲವಾರು ಅಭಿವೃದ್ಧಿ ಕೆಲಸಗಳನ್ನು ಹಮ್ಮಿಕೊಂಡಿದ್ದು, ಸ್ವತ್ಛ ಬೀಚ್ ಆಗಿ ಮಲ್ಪೆ ರೂಪುಗೊಂಡಿದೆ. ಇಲ್ಲಿ ನಿರಂತರವಾಗಿ ಸಾಂಸ್ಕೃತಿಕ ಕಾರ್ಯ ಕ್ರಮಗಳು ನಡೆಯು ತ್ತಿರುವುದರಿಂದ ಪ್ರವಾಸೋದ್ಯಮಕ್ಕೂ ಒತ್ತು ನೀಡಿದಂತಾಗುತ್ತದೆ ಹಾಗೂ ಕಲೆಯ ಉಳಿವಿಗೆ ಸಹಕಾರಿಯಾಗುತ್ತದೆಂದರು.
ಮುಖ್ಯಅತಿಥಿಯಾಗಿ ಉಪಸ್ಥಿತರಿದ್ದ ನಗರಸಭಾ ಉಪಾಧ್ಯಕ್ಷೆ ಸಂಧ್ಯಾ ತಿಲಕ್‌ರಾಜ್ ಮಾತನಾಡಿ ಅಧುನಿಕ ಕಾಲಘಟ್ಟದಲ್ಲೂ ಜನಪದ ಕಲಾ ಪ್ರಕಾರಗಳನ್ನು ಪ್ರದರ್ಶಿಸಿ, ಕಲೆ ಯನ್ನು ಉಳಿಸುತ್ತಿರುವ ಕಲಾ ತಂಡಗಳಿಗೆ ಅಭಿನಂದನೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಬೀಚ್ ಅಭಿವೃದ್ಧಿ ಸಮಿತಿ ಸದಸ್ಯರಾದ ಶೇಖರ್ ಜಿ.ಕೋಟ್ಯಾನ್, ಸುದೇಶ್ ಶೆಟ್ಟಿ, ಕನ್ನಡ ಸಂಸ್ಕೃತಿ ಇಲಾಖಾ ಸಹಾಯಕ ನಿರ್ದೇಶಕ ಡಿ.ಎಂ.ರವಿ ಕುಮಾರ್ ಉಪಸ್ಥಿತರಿದ್ದರು.
ಜನಪದ ಕಲಾವಿದ ಗಣೇಶ್ ಗಂಗೋಳ್ಳಿ ಕಾರ್ಯಕ್ರಮ ನಿರೂಪಿಸಿದರು. ಡಿ. ಎಂ.ರವಿಕುಮಾರ್ ಸ್ವಾಗತಿಸಿದರು. ಇಲಾಖಾಧಿಕಾರಿ ಪೂರ್ಣಿಮಾ ವಂದಿಸಿ ದರು. ರಾಜ್ಯದಾದ್ಯಂತ ಹಲವು ಜನಪದ ಕಲಾ ತಂಡಗಳು ಪ್ರದರ್ಶನ ನೀಡಿದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.