“ಸಂಸ್ಕೃತಿ, ಸಂಪ್ರದಾಯ ಉಳಿವಿಗೆ ಧಾರ್ಮಿಕತೆ ಸಹಕಾರಿ’
Team Udayavani, Dec 28, 2017, 3:19 PM IST
ಹೆಬ್ರಿ: ಚಂಚಲವಾಗಿರುವ ಮನಸ್ಸನ್ನು ಸಂಸ್ಕೃತಿಯತ್ತ ಒಯ್ಯ ಬೇಕಾದರೆ ಇಂತಹ ಧಾರ್ಮಿಕ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ನಡೆಯಬೇಕು. ನಮ್ಮ ಸಂಸ್ಕೃತಿ, ಸಂಪ್ರದಾಯಗಳ ಉಳಿವಿಗೆ ಧಾರ್ಮಿಕ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದು ಕಟೀಲು ಶ್ರೀ ದುರ್ಗಾ ಸಂಸ್ಕೃತ ಪ್ರತಿಷ್ಠಾನದ ಪ್ರಾಂಶುಪಾಲ ಡಾ| ಪದ್ಮನಾಭ ಮರಾಠೆ ಹೇಳಿದರು.
ಅವರು ಡಿ. 24ರಂದು ಹೆಬ್ರಿ ಬಚ್ಚಪ್ಪು ಶ್ರೀ ದುರ್ಗಾಪರಮೇಶ್ವರೀ ಗದ್ದುಗೆ ಅಮ್ಮನವರ ಸನ್ನಿಧಿಯಲ್ಲಿ ನಡೆದ ವಾರ್ಷಿಕ ಮಹೋತ್ಸವದಲ್ಲಿ ಧಾರ್ಮಿಕ ಉಪನ್ಯಾಸ ನೀಡಿ ಮಾತನಾಡಿದರು. ಶ್ರೀ ಕ್ಷೇ.ಧ.ಗ್ರಾ. ಯೋ. ಹೆಬ್ರಿ ವಲಯದ ಮೇಲ್ವಿಚಾರಕ ಹರೀಶ್ ಆಚಾರ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೀತಾನದಿ ವಿಟuಲ ಶೆಟ್ಟಿ ಮಾತನಾಡಿ ಮನೆಯ ಹೆಂಗಸರು ಮಕ್ಕಳು ಮನೆ ಮನಸ್ಸನ್ನು ಕೆಡಿಸು ವಂತಹ ಧಾರವಾಹಿಯಿಂದ ದೂರವಿದ್ದು ಇಂತಹ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಾಗ ಮನೆಯ ಸಂಬಂಧಗಳು ಗಟ್ಟಿಯಾಗಿ ನಮ್ಮ ಸಂಪ್ರದಾಯಗಳು ಉಳಿಯಲು ಸಾಧ್ಯ. ಇಂದು ಈ ಪರಿಸರದಲ್ಲಿ ಮಹಿಳೆಯರು ಮಕ್ಕಳು ಹೆಚ್ಚಾಗಿ ಪಾಲ್ಗೊಂಡಿರುವುದು ಜನರಲ್ಲಿ ಜಾಗೃತಿ ಮೂಡಿದೆ ಎಂದರು. ಇದೇ ಸಂದರ್ಭದಲ್ಲಿ ಪಿಯುಸಿ ಪರೀಕ್ಷೆಯಲ್ಲಿ ಅಧಿಕ ಅಂಕ ಪಡೆದ ಭಜನ ಮಂಡಳಿಯ ಸದಸ್ಯ ಅಕ್ಷಯ ಕುಮಾರ್ ಅವರನ್ನು ಮಂಡಳಿಯ ವತಿಯಿಂದ ಸಮ್ಮಾನಿಸಲಾಯಿತು.
ಸಮಾರಂಭದಲ್ಲಿ ತಾಲೂಕು ಮರಾಠಿ ಸಂಘದ ಅಧ್ಯಕ್ಷ ರಾಘವ ನಾಯ್ಕ, ಮಾಡಿಗೆಮನೆ ಶಿವರಾಮ ಹೆಗ್ಡೆ, ಅಣ್ಣಾಜು ನಾಯ್ಕ, ಭಜನಾ ಮಂಡಳಿ ಅಧ್ಯಕ್ಷ ದಿವಾಕರ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು. ಹರಿದಾಸ ಹೆಗ್ಡೆ ಸ್ವಾಗತಿಸಿ, ಮಹಾಬಲ ನಾಯ್ಕ ಕಾರ್ಯಕ್ರಮ ನಿರೂಪಿಸಿ, ಪ್ರಸಾದ್ ಶೆಟ್ಟಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ
Lupus Nephritis: ಲೂಪಸ್ ನೆಫ್ರೈಟಿಸ್ ರೋಗಿಗಳಿಗೆ ಒಂದು ಮಾರ್ಗದರ್ಶಿ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.