ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ: ಶಿಕ್ಷಣ ವಂಚಿತ 652 ಮಕ್ಕಳು
Team Udayavani, Mar 22, 2022, 8:10 AM IST
ಸಾಂದರ್ಭಿಕ ಚಿತ್ರ.
ಉಡುಪಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೂ 652 ಮಕ್ಕಳು ಶಾಲಾ ಶಿಕ್ಷಣದಿಂದ ಹೊರಗಿದ್ದಾರೆ. ವಿವಿಧ ಕಾರ್ಯಕ್ರಮಗಳ ಮೂಲಕ 305 ಮಕ್ಕಳನ್ನು ಶಿಕ್ಷಣದ ಮುಖ್ಯವಾಹಿನಿಗೆ ತರಲಾಗಿದೆ.
ಉಡುಪಿ ಜಿಲ್ಲೆಯಲ್ಲಿ 6ರಿಂದ 14 ವರ್ಷದ 98, 14ರಿಂದ 16 ವರ್ಷದ 179 ಮಕ್ಕಳ ಸಹಿತ 277 ಮಕ್ಕಳು ಶಾಲಾ ಶಿಕ್ಷಣದಿಂದ ದೂರವಿದ್ದಾರೆ. ದ.ಕ. ಜಿಲ್ಲೆಯಲ್ಲಿ 6ರಿಂದ 14 ವರ್ಷದ 82, 14ರಿಂದ 16 ವರ್ಷದ 293 ಮಕ್ಕಳು ಸೇರಿ 375 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ. ಉಡುಪಿ ಜಿಲ್ಲೆಯ 146 ಮತ್ತು ದ.ಕ.ದಲ್ಲಿ 159 ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರಲಾಗಿದೆ.
ನಿರಂತರ ಸಮೀಕ್ಷೆ
ಶಾಲಾ ಶಿಕ್ಷಣದಿಂದ ಹೊರಗುಳಿದ ಮಕ್ಕಳ ಸಮೀಕ್ಷೆಯನ್ನು ಪ್ರತೀ ವರ್ಷವೂ ಶಾಲಾ ಹಂತದಲ್ಲಿ ಮಾಡಲಾಗುತ್ತದೆ. ಇದಕ್ಕಾಗಿ ಶಿಕ್ಷಣ ಸಂಯೋಜಕರನ್ನು ಹಾಜರಾತಿ ಪ್ರಾಧಿಕಾರಿಗಳನ್ನಾಗಿ ನೇಮಿಸಲಾಗಿದೆ. ಪ್ರತೀ ತಿಂಗಳು ಜಿಲ್ಲಾ ಉಪನಿರ್ದೇಶಕರ ಹಂತದಲ್ಲಿ ಪರಿಶೀಲನೆಯೂ ನಡೆಯುತ್ತದೆ. ಸರಕಾರದಿಂದ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಆದರೂ ಶಾಲಾ ಶಿಕ್ಷಣದಿಂದ ವಂಚಿತರಾಗಿರುವ ಮಕ್ಕಳನ್ನು ಪೂರ್ಣ ಪ್ರಮಾಣದಲ್ಲಿ ಪತ್ತೆ ಹಚ್ಚು ಸಾಧ್ಯವಾಗುತ್ತಿಲ್ಲ.
ವಲಸಿಗ ಕುಟುಂಬದ ಸಮಸ್ಯೆ
ಶಾಲಾ ಶಿಕ್ಷಣದಿಂದ ವಂಚಿತರಾಗಿರುವ ಮಕ್ಕಳಲ್ಲಿ ಬಹುತೇಕರು ವಲಸೆ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಬೇರೆ ಜಿಲ್ಲೆಗಳಿಂದ ಕೂಲಿ ಕಾರ್ಮಿಕರಾಗಿ ಇಲ್ಲಿಗೆ ಬರುವ ಕುಟುಂಬದವರು ತಮ್ಮ ಜತೆಗೆ ಮಕ್ಕಳನ್ನು ಕರೆದುಕೊಂಡು ಬರುತ್ತಾರೆ. ಆದರೆ ಅವರಿಗೆ ಅಗತ್ಯವಿರುವ ಶಿಕ್ಷಣವನ್ನು ನೀಡುವುದಿಲ್ಲ. ಶಾಲೆಯ ಎಸ್‌ಎಟಿಎಸ್ ಸಂಖ್ಯೆಯಲ್ಲಿ ಯಾವ ಜಿಲ್ಲೆಯಿಂದ ಯಾವ ಜಿಲ್ಲೆಗೆ ವಿದ್ಯಾರ್ಥಿ ಹೋಗಿದ್ದಾನೆ ಎಂಬುದಷ್ಟೇ ತಿಳಿಯುತ್ತದೆ. ಆದರೆ ವಲಸೆ ಬಂದವರು ಇಲ್ಲಿ ಶಾಲೆಗೆ ಸೇರದೆ ಇದ್ದಾಗ ಶಾಲಾ ಶಿಕ್ಷಣದಿಂದ ಹೊರಗುಳಿದ ಮಕ್ಕಳಾಗಿ ಗುರುತಿಸಿಕೊಳ್ಳುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.