ಮಿಯ್ಯಾರು ರಸ್ತೆ ಬದಿ ಅಪಾಯಕಾರಿ ಮರ: ಶೀಘ್ರ ತೆರವಿಗೆ ಆಗ್ರಹ
Team Udayavani, Jul 4, 2018, 2:40 AM IST
ಕಾರ್ಕಳ: ತಾಲೂಕಿನ ಮಿಯ್ನಾರು ಗ್ರಾ.ಪಂ. ವ್ಯಾಪ್ತಿಯ ಜೋಡುಕಟ್ಟೆ- ಕಾರೋಲ್ ಗುಡ್ಡೆ ರಸ್ತೆಯಲ್ಲಿ ಬೃಹತ್ ಗಾಳಿಮರವೊಂದು ರಸ್ತೆಯ ಕಡೆಗೆ ವಾಲಿದ್ದು, ಅಪಾಯದ ಅಂಚಿನಲ್ಲಿದೆ. ಪಕ್ಕದಲ್ಲೇ ವಿದ್ಯುತ್ ತಂತಿಗಳು ಹಾದುಹೋಗಿರುವುದರಿಂದ ಈ ಮರ ಉರುಳಿದರೆ ಭಾರೀ ಹಾನಿಯಾಗುವ ಅಪಾಯವಿದೆ. ಕಳೆದ ಜನವರಿ ತಿಂಗಳಲ್ಲಿ ಇದೇ ಭಾಗದಲ್ಲಿದ್ದ ಮರವೊಂದು ಬಿದ್ದು ವಿದ್ಯುತ್ ಕಂಬಗಳು ತುಂಡಾಗಿದ್ದವು. ವಯರ್ ಗಳಿಗೆ ಹಾನಿಯುಂಟಾಗಿ ಎರಡು ದಿನ ಆ ಭಾಗಕ್ಕೆ ವಿದ್ಯುತ್ ಸಂಪರ್ಕ ಇರಲಿಲ್ಲ.
ಜೋಡುಕಟ್ಟೆಯಿಂದ ಕಾರೋಲ್ ಗುಡ್ಡೆ ಸೇರಿದಂತೆ ವಿವಿಧ ಭಾಗಗಳಿಗೆ ಸಂಪರ್ಕಿಸುವ ಪ್ರಮುಖ ರಸ್ತೆ ಇದಾಗಿದೆ. ಹೀಗಾಗಿ ದಿನಕ್ಕೆ ಸಾವಿರಾರು ಮಂದಿ ಇದೇ ರಸ್ತೆಯಲ್ಲಿ ಓಡಾಡುತ್ತಾರೆ. ನೂರಾರು ವಾಹನಗಳು ಸಂಚರಿಸುತ್ತವೆ. ಸಮೀಪದಲ್ಲೇ ಶಾಲೆಯಿದ್ದು, ಪುಟ್ಟ ಮಕ್ಕಳು ಅದೇ ಭಾಗದಲ್ಲಿ ಓಡಾಡುತ್ತಾರೆ. ಹೀಗಾಗಿ ಕೂಡಲೇ ಈ ಮರವನ್ನು ತೆರವುಗೊಳಿಸಬೇಕಾಗಿದೆ. ಪಂಚಾಯತ್ ನ ಮುಂಭಾಗದಲ್ಲೇ ಈ ಅಪಾಯಕಾರಿ ಮರವಿದ್ದರೂ ಸ್ಥಳೀಯ ಆಡಳಿತ ಇದುವರೆಗೆ ಮರ ತೆರವು ನಡೆಸಿಲ್ಲ ಎಂಬುದು ಸ್ಥಳೀಯರ ಆರೋಪ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ
Ajekar: ಬಾಲಕೃಷ್ಣ ಪೂಜಾರಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಉಲ್ಲೇಖ
Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ
ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ
MUST WATCH
ಹೊಸ ಸೇರ್ಪಡೆ
Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ
Mangalore: ಅಡ್ಯಾರ್ ಕಣ್ಣೂರಿನಲ್ಲಿ ತ್ಯಾಜ್ಯ ಸುಡುವಿಕೆಯಿಂದ ಪರಿಸರ ಮಾಲಿನ್ಯ
Dandeli ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಕಿರಣ್ ಪಾಟೀಲ್ ಅಧಿಕಾರ ಸ್ಬೀಕಾರ
Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.