ಬೆಳೆ ಸಮೀಕ್ಷೆ ಆಕ್ಷೇಪಣೆಗೆ ದರ್ಶಕ್ ಮೊಬೈಲ್ ಆ್ಯಪ್
ಕೃಷಿಕ-ಕೃಷಿ ಇಲಾಖೆ ನಡುವೆ ಸಂಬಂಧ ವೃದ್ಧಿ; ರೈತರಿಗೆ ಅನುಕೂಲ
Team Udayavani, Jan 22, 2020, 4:16 AM IST
ಸಾಂದರ್ಭಿಕ ಚಿತ್ರ
ಉಡುಪಿ: ಅಂತರ್ಜಾಲ ಸಹಾಯದಿಂದ ಈಗ ಕೃಷಿಕರು ಸಹ ಲಾಭ ಪಡೆಯುತ್ತಿದ್ದು ಕೃಷಿಕರು ಮತ್ತು ಕೃಷಿ ಇಲಾಖೆ ನಡುವೆ ಸಂಬಂಧ ವೃದ್ಧಿಸಲು ಕೃಷಿ ಇಲಾಖೆ ಪ್ರಯತ್ನಿಸುತ್ತಿದೆ. ಇದರ ಫಲವಾಗಿಯೇ ಬೆಳೆ ಸಮೀಕ್ಷೆಗೆ ಸಂಬಂಧಿಸಿ ರೈತರಿಗೆ ಆಕ್ಷೇಪಣೆ ಸಲ್ಲಿಸಲು ಬೆಳೆ ದರ್ಶಕ್ ಮೊಬೈಲ್ ಆಪ್ ಈಗ ಲಭ್ಯವಿದೆ.
ಜಿಲ್ಲೆಯಲ್ಲಿ ಜಿ.ಪಿ.ಎಸ್ ಆಧಾರಿತ ಬೆಳೆ ಸಮೀಕ್ಷೆಯು ಮುಂಗಾರು ಹಾಗೂ ಹಿಂಗಾರು ಹಂಗಾಮುಗಳಲ್ಲಿ ಜಾರಿಯಲ್ಲಿದೆ. ಈ ಮೊದಲು ಖಾಸಗಿ ವ್ಯಕ್ತಿಗಳ ಮೂಲಕ ಪ್ರತಿ ಹಳ್ಳಿಯಲ್ಲಿ ಸಮೀಕ್ಷೆ ನಡೆದಿತ್ತು. ಜಿಲ್ಲೆಯಲ್ಲಿ 9,32,662 ಮಂದಿ ರೈತರ ಸರ್ವೆ ನಡೆದಿತ್ತು. ಈ ಮುಂಗಾರಿನಲ್ಲಿ ಮುಕ್ತಾಯವಾದ ಬೆಳೆ ಸಮೀಕ್ಷೆಯಲ್ಲಿ ನಮೂದಾದ ಬೆಳೆಗಳ ಬಗ್ಗೆ ರೈತರಿಗೆ ಆಕ್ಷೇಪಣೆ ಇದ್ದಲ್ಲಿ ಬೆಳೆ ದರ್ಶಕ್ ಎಂಬ ಆ್ಯಪ್ ಮೂಲಕ ಆಕ್ಷೇಪಣೆಗಳನ್ನು ಸಲ್ಲಿಸಲು ಇಲಾಖೆ ಕ್ರಮವಹಿಸಿತ್ತು. ಸಾಕಷ್ಟು ಪ್ರಚಾರ ಕೈಗೊಂಡಿತ್ತು. ರೈತರು ಇದರ ಪ್ರಯೋಜನ ಪಡಕೊಂಡಿದ್ದರು. ರೈತರು ಈಗಾಗಲೆ ಆಕ್ಷೇಪಣೆ ಸಲ್ಲಿಸುತ್ತಿದ್ದು ಮೇಲ್ವಿಚಾರಕರು ಸೂಕ್ತ ಬೆಳೆಗಳನ್ನು ದಾಖಲಿಸಿ ರೈತರ ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಿಕೊಳ್ಳುತ್ತಿದ್ದಾರೆ.
ಹೇಗೆ ಬಳಕೆ
Bele Darshak Karnataka -2019, App Google play store ನಲ್ಲಿ ಆ್ಯಪ್ ಲಭ್ಯವಿದ್ದು, ಇದನ್ನು ಉಚಿತವಾಗಿ ಪ್ಲೇ-ಸ್ಟೋರ್‌ನಲ್ಲಿ ಡೌನ್ಲೋಡ್ ಮಾಡಿಕೊಂಡು ಆಕ್ಷೇಪಣೆಯನ್ನು ಸಲ್ಲಿಸಬಹುದಾಗಿದೆ. ಅದೇ ರೀತಿ ಬೆಳೆ ಸಮೀಕ್ಷೆ ತಂತ್ರಾಂಶದಲ್ಲಿ (www.cropsurvey.karnataka.gov.in www.cropsurvey.karnataka.gov.in ಮೂಲಕ ನೇರವಾಗಿ ತಮ್ಮ ದೂರು ಸಲ್ಲಿಸಲು ಇದರಲ್ಲಿ ರೈತರಿಗೆ ಅವಕಾಶ ಕಲ್ಪಿಸಲಾಗಿದೆ.
ಜ. 30ರ ವರೆಗೆ ಅವಕಾಶ
ಎಲ್ಲ ವರ್ಗದ ರೈತರಿಗೆ ಆ್ಯಪ್ ಬಳಕೆ ಕಷ್ಟ. ಬಳಸಲು ಸಾಧ್ಯವಿಲ್ಲದನ್ನು ಮನ ಗಂಡ ಇಲಾಖೆ ಲಿಖೀತ ರೂಪದಲ್ಲಿ ದೂರು ಸಲ್ಲಿಸಲು ಅವಕಾಶ ನೀಡಿದೆ.
ಪೂರಕವಾಗಿ ಗ್ರಾ.ಪಂ.ನಲ್ಲಿ ಸರ್ವೆ ನಂಬರ್ ಆಧಾರದಲ್ಲಿ ದಾಖಲಾದ ಬೆಳೆಗಳ ಪಟ್ಟಿಯನ್ನು ಲಗತ್ತಿಸಲಾಗುತ್ತಿದೆ. ಆ ಪಟ್ಟಿಯಲ್ಲಿ ತಮ್ಮ ಹೆಸರಿನ ಮುಂದೆ ಇರುವ ಬೆಳೆಯನ್ನು ಪರಿಶೀಲಿಸಿಕೊಂಡು ಬೆಳೆ ಸಮೀಕ್ಷೆ ಕಾರ್ಯದಲ್ಲಿ ಏನಾದರೂ ವ್ಯತ್ಯಾಸಗಳು ಕಂಡುಬಂದಲ್ಲಿ ತಮ್ಮ ಆಕ್ಷೇಪಣೆಯನ್ನು ಸಂಬಂ ಧಿಸಿದ ಸಹಾಯಕ ಕೃಷಿ ನಿರ್ದೇಶಕರು ಹಾಗೂ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿ ಕಾರಿಗಳಿಗೆ ದೂರು ಸಲ್ಲಿಸಲು ಜ. 30ರ ವರೆಗೆ ಕಾಲಾವಕಾಶ ನೀಡಲಾಗಿದೆ. ಪ್ರಕ್ರಿಯೆ ಪೂರ್ಣಗೊಂಡ ಅನಂತರದಲ್ಲಿ ಬೆಳೆ ಸಮೀಕ್ಷೆ ತಂತ್ರಾಂಶದಲ್ಲಿ ದಾಖಲು ಮಾಡಿ ಮತ್ತೆ ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಲು ಜಂಟಿ ಕೃಷಿ ನಿರ್ದೇಶಕರು ಕ್ರಮವಹಿಸುವರು.
ರೈತರಿಗೆ ಅನುಕೂಲ
ಬೆಳೆ ಸಮೀಕ್ಷೆ ಪ್ರಕ್ರಿಯೆ ವೇಳೆ ತಂತ್ರಾಂಶದಲ್ಲಿ ದಾಖಲುಗೊಂಡ ಅಂಶಗಳ ಆಧಾರದಲ್ಲಿ ಪರಿಶೀಲಿಸಲಾಗುತ್ತದೆ. ಇದಕ್ಕೂ ಮೊದಲು ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಸಲ್ಲಿಕೆಗೆ ರೈತರಿಗೆ ಅನುಕೂಲ ಮಾಡಿಕೊಡಲಾಗಿದೆ.
-ಕೆಂಪೇಗೌಡ, ಜಂಟಿ ನಿರ್ದೇಶಕರು , ಕೃಷಿ ಇಲಾಖೆ, ಉಡುಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ
Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ
Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ
Manipal: ಮಾಹೆಯ ಪ್ರಸನ್ನ ಸ್ಕೂಲ್ ಆಪ್ ಪಬ್ಲಿಕ್ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ
Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ
Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ
Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ
Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.