ಡಿಸಿ ಮೇಲೆ ಹಲ್ಲೆ ಪ್ರಕರಣ: ಅಮಾಯಕರ ಬಂಧನ
Team Udayavani, Apr 10, 2017, 4:04 PM IST
ಕುಂದಾಪುರ: ಕಂಡ್ಲೂರು ಅಕ್ರಮ ಮರಳುಗಾರಿಕೆಯನ್ನು ತಡೆಯಲು ಹೋದ ಜಿಲ್ಲಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಅವರ ಹಲ್ಲೆ ಹಾಗೂ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಅಮಾಯಕರನ್ನು ಬಂಧಿಸಿದ್ದಾರೆ. ನಿಜವಾದ ಆರೋಪಿಗಳು ಹೊರಗಡೆ ಇದ್ದಾರೆ ಬಂಧಿಸಲಾದ ಅಮಾಯಕ ರನ್ನು ಕೂಡಲೇ ಬಿಡುಗಡೆ ಗೊಳಿಸಬೇಕು ಎಂದು ಆಗ್ರಹಿಸಿ ಕಂಡ್ಲೂರು ವ್ಯಾಪ್ತಿಯ ಮಹಿಳೆಯರು ಹಾಗೂ ಸ್ಥಳೀಯರು ರವಿವಾರ ಬೆಳಗ್ಗೆ ಕಂಡ್ಲೂರು ಠಾಣೆಯಲ್ಲಿ ಜಮಾಯಿಸಿ ಪೊಲೀಸರಿಗೆ ದೂರು ನೀಡಿದರು.
ಪೊಲೀಸರು ನಿಜವಾದ ಆರೋಪಿಗಳನ್ನು ಬಿಟ್ಟು , ಅಮಾಯಕರನ್ನು ಬಂಧಿಸುತ್ತಿದ್ದಾರೆ. ನಿಜವಾದ ಆರೋಪಿಗಳನ್ನು ಬಂಧಿಸಿ ನಮಗೆ ಸೂಕ್ತ ನ್ಯಾಯ ಒದಗಿಸಬೇಕು. ಶನಿವಾರ ಸಂಜೆ ನಾಲ್ವರರನ್ನು ಪೊಲೀಸರು ಬಂಧಿಸಿದ್ದು, ಮದುವೆ ಕಾರ್ಯಕ್ರಮಕ್ಕಾಗಿ ರಜೆ ಹಾಕಿ ವಿದೇಶದಿಂದ ಬಂದವರನ್ನು ಹಾಗೂ ಈ ಪ್ರಕರಣಕ್ಕೆ ಯಾವುದೇ ಸಂಬಂಧವಿರ ದವರನ್ನು ಬಂಧಿಸಿರುವುದು ಸರಿಯಲ್ಲ ಎಂದು ಅವರು ದೂರಿನಲ್ಲಿ ತಿಳಿಸಿದ್ದು, ನಮಗೆ ನ್ಯಾಯ ದೊರಕದೇ ಇದ್ದಲ್ಲಿ ಪ್ರತಿಭಟನೆಯ ಹಾದಿ ಹಿಡಯ ಬೇಕಾಗುತ್ತದೆ. ಆದ್ದರಿಂದ ಕೂಡಲೇ ಬಂಧಿತ ಅಮಾಯಕರನ್ನು ಬಿಡುಗಡೆ ಗೊಳಿಸುವಂತೆ ಆಗ್ರಹಿಸಿದರು.
ಜಿಲ್ಲಾಧಿಕಾರಿ ಅವರ ಹೇಳಿಕೆಯಂತೆ ಒಟ್ಟು 50 ಮಂದಿಯ ಮೇಲೆ ದೂರು ದಾಖಲಿಸಿದ್ದು, ಈ 50 ಮಂದಿಯನ್ನು ಭರ್ತಿ ಮಾಡುವ ಉದ್ದೇಶದಲ್ಲಿ ಈ ಪ್ರಕರಣಕ್ಕೆ ಯಾವುದೇ ಸಂಬಂಧವಿರದೇ ಇರುವುದನ್ನು ಬಂಧಿಸಿರುವುದು ಸರಿಯಲ್ಲ . ಎಂದು ಮನವಿಯಲ್ಲಿ ತಿಳಿಸಿರುತ್ತಾರೆ.ಈ ನಡುವೆ ಕಂಡ್ಲೂರು ಠಾಣಾಧಿಕಾರಿ ಹಾಗು ನೆರೆದ ಜನರ ನಡುವೆ ಮಾತಿನ ಚಕಮಕಿ ನಡೆಯಿತು.ಕಂಡ್ಲೂರು ಪೊಲೀಸರು ಮನವಿ ಯನ್ನು ಸ್ವೀಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal: ಡಂಪಿಂಗ್ ಯಾರ್ಡ್ ಆದ ಮಣ್ಣಪಳ್ಳ!
Udupi: ಒಂದೇ ವೃತ್ತ; ಪೊಲೀಸ್ ಚೌಕಿ 5!; ಕಲ್ಸಂಕ ಜಂಕ್ಷನ್‌ನಲ್ಲಿ ಮುಗಿಯದ ಸಂಚಾರ ಸಮಸ್ಯೆ
Karkala: ಶಿರ್ಲಾಲು ಪರಿಸರದಲ್ಲಿ ಒಂದೇ ಟವರ್; ಮಾತನಾಡಲು ಮುಖ್ಯ ರಸ್ತೆಗೇ ಬರಬೇಕು!
Trasi: ಸಾಂಪ್ರದಾಯಿಕ ಮೀನುಗಾರರಿಂದ ಬೃಹತ್ ಪ್ರತಿಭಟನೆ; ಗಂಟಿಹೊಳೆ, ಗೋಪಾಲ ಪೂಜಾರಿ ಭಾಗಿ
Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Gudibanda: ಬಸ್‌ಗೆ ಟಿಪ್ಪರ್ ಡಿಕ್ಕಿ; ತಪ್ಪಿದ ಭಾರಿ ಅನಾಹುತ; ಇಬ್ಬರಿಗೆ ಗಾಯ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್ ಕಾರಣ: ಶರದ್ ಪವಾರ್
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.