ನೀರುಪಾಲಾಗಿದ್ದ ಯುವಕನ ಶವ ಪತ್ತೆ
Team Udayavani, Jul 24, 2018, 12:45 PM IST
ಕುಂದಾಪುರ: ಮನೆ ಸಮೀಪದ ಸೌಪರ್ಣಿಕಾ ಹೊಳೆಯಲ್ಲಿ ಗಾಳ ಹಾಕಿ ಮೀನು ಹಿಡಿಯುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ನೀರುಪಾಲಾಗಿದ್ದ ನಾಡ ಗ್ರಾಮದ ಕಳುವಿನ ಬಾಗಿಲು ನಿವಾಸಿ ದಿ| ನಾರಾಯಣ ಕಾಂಚನ್ ಅವರ ಪುತ್ರ ಸುಧೀಂದ್ರ ಕಾಂಚನ್ (32) ಅವರ ಮೃತದೇಹ 2 ದಿನಗಳ ನಿರಂತರ ಹುಡುಕಾಟದ ಬಳಿಕ ಜು. 23ರಂದು ಗಂಗೊಳ್ಳಿಯ ಲೈಟ್ ಹೌಸ್ ಬಳಿಯ ಕಡಲ ಕಿನಾರೆಯಲ್ಲಿ ಪತ್ತೆಯಾಗಿದೆ.
ಅವರು ಜು. 20ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ರಾಘವೇಂದ್ರ ಹಾಗೂ ರತ್ನಾಕರ ಅವರೊಂದಿಗೆ ಗಾಳ ಹಾಕಿ ಮೀನು ಹಿಡಿಯುತ್ತಿದ್ದಾಗ ಆಕಸ್ಮಿಕವಾಗಿ ನೀರಿಗೆ ಬಿದ್ದಿದ್ದು, ಕೊಚ್ಚಿಕೊಂಡು ಹೋಗಿದ್ದಾರೆ.
ಅವರಿಗಾಗಿ ಜು. 21, 22ರಂದು ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ.
ಜು. 23ರಂದು ಬೆಳಗ್ಗೆ 6.30ರ ಸುಮಾರಿಗೆ ಮೃತದೇಹ ಗಂಗೊಳ್ಳಿಯ ಲೈಟ್ ಹೌಸ್ ಬಳಿಯ ಬೀಚ್ನಲ್ಲಿ ಪತ್ತೆಯಾಗಿದೆ. ಗಂಗೊಳ್ಳಿ ಲೈಟ್ ಹೌಸ್ ಪರಿಸರದ ಯುವಕರು ಸಹಿತ ಸ್ಥಳೀಯರು ಪತ್ತೆ ಕಾರ್ಯದಲ್ಲಿ ಸಹಕರಿಸಿದ್ದರು.
ಘಟನಾ ಸ್ಥಳಕ್ಕೆ ಗಂಗೊಳ್ಳಿ ಪೊಲೀಸ್ ಠಾಣಾಧಿಕಾರಿ ವಿನಾಯಕ ಬಿಲ್ಲವ ಭೇಟಿ ನೀಡಿದರು. ಸಹೋದರ ರಾಘವೇಂದ್ರ ನೀಡಿರುವ ದೂರಿನಂತೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಾರದ ಹಿಂದಷ್ಟೇ ಬೆಂಗಳೂರಿನಿಂದ ಬಂದಿದ್ದರು
ಸುಧೀಂದ್ರ ಅವರು ಬೆಂಗಳೂರಿನ ಹೊಟೇಲಿನಲ್ಲಿ ಕೆಲಸ ಮಾಡುತ್ತಿದ್ದು, ವಾರದ ಹಿಂದಷ್ಟೇ ಊರಿಗೆ ಬಂದಿದ್ದರು. 2-3 ದಿನಗಳಲ್ಲಿ ಮತ್ತೆ ಬೆಂಗಳೂರಿಗೆ ಹೋಗುವವರಿದ್ದರು. ಹವ್ಯಾಸಕ್ಕೆಂದು ಗಾಳ ಹಾಕಿ ಮೀನು ಹಿಡಿಯುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಅವರು ಅವಿವಾಹಿತರಾಗಿದ್ದು, ಮೂವರು ಮಕ್ಕಳ ಪೈಕಿ ಕಿರಿಯವರಾಗಿದ್ದರು. ತಾಯಿ ಹಾಗೂ ಇಬ್ಬರು ಸಹೋದರರನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.