ಗರ್ಭಿಣಿ ಮೇಲೆ ರೇಪ್, ಕೊಲೆ; ಗಲ್ಲುಶಿಕ್ಷೆ ವಿಧಿಸಿ ಪೆನ್ ಎಸೆದ ಜಡ್ಜ್

Team Udayavani, Feb 20, 2018, 6:38 PM IST

capital-punishment.jpg

ಕುಂದಾಪುರ: ಸುಮಾರು 3 ವರ್ಷಗಳ ಹಿಂದೆ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದ್ದ ಗರ್ಭಿಣಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಅಪರಾಧಿ ಪ್ರಶಾಂತ್ ಮೊಗವೀರನಿಗೆ ಕುಂದಾಪುರದ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಗಲ್ಲುಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಅಪರಾಧಿ ಪ್ರಶಾಂತ್ ನಿಗೆ ಮರಣದಂಡನೆ ಶಿಕ್ಷೆ ವಿಧಿಸಿ ತೀರ್ಪು ಓದುತ್ತಿದ್ದ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ಪ್ರಕಾಶ ಖಂಡೇರಿ ಅವರು ಭಾವುಕರಾದರು. ಬಳಿಕ ತಮ್ಮ ಕೈಯಲ್ಲಿದ್ದ ಪೆನ್ ಅನ್ನು ಎಸೆದಿದ್ದರು. ಖಂಡೇರಿ ಅವರು ಮುಂದಿನ ವರ್ಷ ನಿವೃತ್ತರಾಗುತ್ತಿದ್ದು, ತನ್ನ ಸೇವಾವಧಿಯ ಕೊನೆಯಲ್ಲಿ ಇಂತಹದ್ದೊಂದು ತೀರ್ಪು ನೀಡುವ ಪ್ರಸಂಗ ಒದಗಿ ಬಂದಿತ್ತಲ್ಲ ಎಂದು ಭಾವುಕರಾಗಿದ್ದರು.

ಇಂದು ತೀರ್ಪು ನೀಡುವ ಹಿನ್ನೆಲೆಯಲ್ಲಿ ಕುಂದಾಪುರ ಕೋರ್ಟ್ ಆವರಣದ ಸುತ್ತ ಜನಜಂಗುಳಿ ಸೇರಿತ್ತು.

(ಹಿರಿಯ ವಕೀಲ ರವಿಕಿರಣ್ ಮುರ್ಡೇಶ್ವರ )

ಏನಿದು ಘಟನೆ:

ಕೋಟೇಶ್ವರ ಸಮೀಪದ ಗೋಪಾಡಿ ಗ್ರಾಮದ ಪಡುಗೋಪಾಡಿ ಸಮುದ್ರ ಕಿನಾರೆ ಸಮೀಪದ ಲಿಂಗಜ್ಜಿ ಮನೆ ನಿವಾಸಿಯಾಗಿದ್ದ 7 ತಿಂಗಳ ಗರ್ಭಿಣಿ ಇಂದಿರಾ ಎಂಬವರನ್ನು 2015ರ ಏಪ್ರಿಲ್ 11ರಂದು ಅತ್ಯಾಚಾರ ಎಸಗಿ ಬರ್ಬರವಾಗಿ ಪ್ರಶಾಂತ್ ಕೊಲೆ ಮಾಡಿದ್ದ.

ಇಂದಿರಾ ಪುಟ್ಟ ಮಗುವಿನೊಂದಿಗೆ ಮನೆಯಲ್ಲಿದ್ದಾಗ ನೀರು ಕೇಳುವ ನೆಪದಲ್ಲಿ ಆರೋಪಿ ಪ್ರಶಾಂತ್ ಮನೆಯೊಳಗೆ ನುಗ್ಗಿದ್ದ. ಬಳಿಕ ಆಕೆಯ ಮೇಲೆ ಅತ್ಯಾಚಾರ ಎಸಗಿ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೈದು, ಆಕೆಯ ಮೈಮೇಲಿದ್ದ ಚಿನ್ನಾಭರಣ ದೋಚಿ ಪರಾರಿಯಾಗಿದ್ದ.

ಪ್ರಕರಣವನ್ನು ದಾಖಲಿಸಿಕೊಂಡಿದ್ದ ಕುಂದಾಪುರ ಪೊಲೀಸರು ಪ್ರಶಾಂತ್ ಮೊಗವೀರನನ್ನು ಏ.12ರಂದು ವಶಕ್ಕೆ ತೆಗೆದುಕೊಂಡಿದ್ದರು. ಈ ಪ್ರಕರಣದ ಗಂಭೀರತೆಯ ಹಿನ್ನೆಲೆಯಲ್ಲಿ ಮೃತ ಮಹಿಳೆಯ ಕುಟುಂಬಸ್ಥರ ಕೋರಿಕೆ ಮೇರೆಗೆ ಕುಂದಾಪುರದ ಹಿರಿಯ ವಕೀಲ ರವಿಕಿರಣ್ ಮುರ್ಡೇಶ್ವರ ಅವರನ್ನು ವಿಶೇಷ ಸರಕಾರಿ ಅಭಿಯೋಜಕರನ್ನಾಗಿ ನೇಮಿಸಲಾಗಿತ್ತು. ಪ್ರಕರಣದ ತೀರ್ಪು ಹೊರಬೀಳುತ್ತಿದ್ದಂತೆಯೇ ವಕೀಲ ರವಿಕಿರಣ್ ಅವರಿಗೆ ಅಭಿನಂದನೆಗಳ ಮಹಾಪೂರ ಹರಿದು ಬಂದಿತ್ತು.

ಶಿಕ್ಷೆಯ ಪ್ರಮಾಣ:

ಅಪರಾಧಿ ಪ್ರಶಾಂತನಿಗೆ ಗರ್ಭಿಣಿ ಮೇಲೆ ಅತ್ಯಾಚಾರ ಎಸಗಿದ್ದಕ್ಕೆ ಹತ್ತು ವರ್ಷ, ಕಳ್ಳತನಕ್ಕೆ ಹತ್ತು ವರ್ಷ, ಅಪಹರಣ ಯತ್ನಕ್ಕೆ ನಾಲ್ಕು ವರ್ಷ, ಮನೆಗೆ ಅಕ್ರಮವಾಗಿ ಪ್ರವೇಶಿಸಿದ್ದಕ್ಕೆ ಒಂದು ವರ್ಷ ಹಾಗೂ ಮಹಿಳೆಯ ಹೊಟ್ಟೆಯಲ್ಲಿದ್ದ ಭ್ರೂಣದ ಹತ್ಯೆ ಪ್ರಕರಣದಲ್ಲಿ ಮರಣದಂಡನೆ ವಿಧಿಸಿ ತೀರ್ಪು ನೀಡಲಾಗಿದೆ.

ಟಾಪ್ ನ್ಯೂಸ್

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

missing

Malpe: ಆಯತಪ್ಪಿ ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ

Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್

Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.