“ಅನ್ನಕ್ಕೂ ವಿಷ” ಸರಕಾರದ ವಿರುದ್ಧ ದೀಪಕ್ ಕೋಟ್ಯಾನ್ ಆಕ್ರೋಶ
Team Udayavani, May 26, 2021, 5:04 PM IST
ಉಡುಪಿ : ಕಾರ್ಕಳ ತಾಲ್ಲೂಕಿನ ಬೆಳ್ಮಣ್ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರಿಗೆ ವಿತರಣೆಯಾಗಿರುವ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಪತ್ತೆಯಾಗಿರುವ ಬಗ್ಗೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷರಾದ ದೀಪಕ್ ಕೋಟ್ಯಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
8 ದಿನಗಳ ಹಿಂದೆ ಒಂದಿಬ್ಬರು ಗ್ರಾಹಕರಿಗೆ ಅಕ್ಕಿಯಲ್ಲಿ ಪ್ಲಾಸ್ಟಿಕ್ ರೀತಿ ಅಕ್ಕಿ ದೊರೆತಿದ್ದು, ಈ ಕುರಿತು ತಕ್ಷಣವೇ ಆಹಾರ ನಿರೀಕ್ಷಕರಿಗೆ ದೂರು ನೀಡಲಾಗಿದೆ. ಒಂದು ಗೋಣಿಯಲ್ಲಿ ಇಂತಹ ಅಕ್ಕಿ ದೊರೆತಿದೆ. ಎಲ್ಲಿ ಕಲಬೆರಕೆಯಾಗಿದೆ ಮತ್ತು ಯಾರಿಂದ ಆಗಿದೆ ಎನ್ನುವುದು ತನಿಖೆಯಾಗಿ ಇದರಲ್ಲಿ ಶಾಮೀಲಾಗಿ ಇರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅಕ್ಕಿ ಪಡೆದವರು ಪ್ಲಾಸ್ಟಿಕ್ ಅಕ್ಕಿ ಪತ್ತೆಯಾದರೆ ಕೂಡಲೇ ವಾಪಸ್ ನೀಡಬೇಕು ಎಂದಿದ್ದಾರೆ.
ಇದನ್ನೂ ಓದಿ: ಯಾಸ್ ನಿಂದ ಅಂದಾಜು ಒಂದು ಕೋಟಿ ಮಂದಿ ಸಂಕಷ್ಟಕ್ಕೀಡಾಗಿದ್ದಾರೆ : ದೀದಿ
2013 ರಲ್ಲಿ ಸಿದ್ಧರಾಮಯ್ಯ ಸರಕಾರವಿದ್ದಾಗ ಹಸಿವು ಮುಕ್ತ ರಾಜ್ಯಕ್ಕೆ ಮಾದರಿಯಾಗಿತ್ತು. ಇಂದಿರಾ ಕ್ಯಾಂಟೀನ್ ಜೊತೆಗೆ ಉಚಿತ ಅಕ್ಕಿಯೊಂದಿಗೆ ತೊಗರಿ ಬೇಳೆ,ಅಡುಗೆ ಎಣ್ಣೆ,ಅಯೋಡಿನ್ ಉಪ್ಪು ನೀಡಲಾಗುತ್ತಿತ್ತು. ಆದರೆ ಬಿಜೆಪಿ ಸರಕಾರ ಅನ್ನಕ್ಕೆ ಕನ್ನ ಹಾಕಿದ್ದು ಉಚಿತ ಅಕ್ಕಿ ಸರಬರಾಜು ನಿಲ್ಲಿಸಿ ಪಾವತಿಸಿ ಪಡೆಯುವ ಅಕ್ಕಿಯಲ್ಲೂ ಕಲಬೆರಕೆ ಮಾಡಿದ್ದು ಬಡ ಜನರ ಜೀವದ ಜೊತೆ ಸರಕಾರ ಚೆಲ್ಲಾಟ ಆಡುತ್ತಿದೆಯೇ ಎಂದು ಜಿಲ್ಲಾಧ್ಯಕ್ಷ ದೀಪಕ್ ಕೋಟ್ಯಾನ್ ಪ್ರಶ್ನಿಸಿದ್ದಾರೆ.
ಅನ್ನ ಭಾಗ್ಯ ಯೋಜನೆಯಲ್ಲೂ ಸರಕಾರದ ಕಲಬೆರಕೆ ಈಗ ಬಯಲಾಗಿದ್ದು ರಾಜ್ಯದ ಜನರ ಆರೋಗ್ಯದ ಕುರಿತು ಬೇಜವಬ್ದಾರಿ ಪ್ರದರ್ಶಿಸುವ ಬಿಜೆಪಿ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
MUST WATCH
ಹೊಸ ಸೇರ್ಪಡೆ
BGT 2024-25: ಆಸೀಸ್ ನಲ್ಲಿ ಲಯಕ್ಕೆ ಮರಳಿದ ವಿರಾಟ್ ಕೊಹ್ಲಿ
Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Baaghi 4: ಟೈಗರ್ ಶ್ರಾಫ್ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್ ಔಟ್
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.