ಅನಧಿಕೃತ ಮರಳು ದಾಸ್ತಾನು ವಿರುದ್ಧ ನಿರ್ದಾಕ್ಷಿಣ್ಯ ಕ್ರಮ
Team Udayavani, Oct 24, 2019, 12:09 AM IST
ಉಡುಪಿ: ಕಟ್ಟಡ ನಿರ್ಮಾಣ ಮಾಲಕರು, ಗುತ್ತಿಗೆದಾರರು ಹಾಗೂ ಸಾರ್ವಜನಿಕರು ಅನಧಿಕೃತ ಮರಳು ದಾಸ್ತಾನು ಮಾಡುವುದು ಕಂಡು ಬಂದಲ್ಲಿ ನಿಯಮಾನುಸಾರ ನಿರ್ದಾಕ್ಷಿಣ್ಯವಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಮಿತಿಯ ಹಿರಿಯ ಭೂ ವಿಜ್ಞಾನಿ ಹಾಗೂ ಸದಸ್ಯ ಕಾರ್ಯದರ್ಶಿ ಅವರ ಪ್ರಕಟನೆ ತಿಳಿಸಿದೆ.
ಉಡುಪಿ ಜಿಲ್ಲೆಯ ಕರಾವಳಿ ನಿಯಂತ್ರಣ ವಲಯ (ಸಿಆರ್‌ಝಡ್)ದ ಹಾಗೂ ಕರಾವಳಿ ನಿಯಂತ್ರಣ ವಲಯ ಹೊರತು ಪಡಿಸಿದ (ನಾನ್ ಸಿಆರ್‌ಝಡ್) ನದಿ ಪಾತ್ರಗಳಲ್ಲಿ ಮರಳು ದಿಬ್ಬ ತೆರವುಗೊಳಿಸುವ ಪರವಾನಿಗೆ ನೀಡಲಾಗಿದ್ದು, ಅದರಂತೆ ಮರಳು ದಿಬ್ಬ ತೆರವುಗೊಳಿಸುವ ಕಾರ್ಯ ಪ್ರಗತಿಯಲ್ಲಿದೆ.
ಜಿಲ್ಲೆಯಲ್ಲಿ ಕಟ್ಟಡ ನಿರ್ಮಾಣ ಮಾಲಕರು, ಗುತ್ತಿಗೆದಾರರು ಹಾಗೂ ಮಂಜೂರಾದ ಕಟ್ಟಡದ ಕಾಮಗಾರಿ ಗಳ ಆವಶ್ಯಕತೆಗನುಗುಣವಾಗಿ ಮರಳನ್ನು ಸಾಗಾಟ ಪರವಾನಿಗೆ ಯೊಂದಿಗೆ ಉಪಯೋಗಿಸಬೇಕು. ಇದನ್ನು ಹೊರತುಪಡಿಸಿ ಮರಳಿನ ದಾಸ್ತಾನು ಕಂಡುಬಂದಲ್ಲಿ ಸಂಬಂಧಿಸಿದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ತೀರ್ಮಾನಿಸಿದೆ ಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bagheera: ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ
Bengaluru: ಶಾಸಕ ಮುನಿರತ್ನ ಕೇಸ್: ವಿಕಾಸಸೌಧದಲ್ಲಿ ಸ್ಥಳ ಮಹಜರು
Vitla: ನಾಲ್ಕೂ ದಿಕ್ಕಿನಿಂದ ಬರುವ ರಸ್ತೆಗಳಲ್ಲಿ ಗುಂಡಿಯೋ ಗುಂಡಿ
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.