ಏಳಿಗೆಗೆ ಶುದ್ಧ ಮನಸ್ಸು, ಛಲ, ಕಠಿನ ಶ್ರಮ ಕೀಲಿಕೈ
Team Udayavani, Dec 7, 2018, 10:40 AM IST
ಉಡುಪಿ: ಜೀವನದಲ್ಲಿ ಸಾಧನೆ ಮಾಡಲು ಹದಿಹರಯದಲ್ಲಿ ಪರಿಶ್ರಮ, ಶುದ್ಧ ಮನಸ್ಸು, ಛಲ ಇರಲೇಬೇಕು ಎಂದು ದಿಲ್ಲಿ ಜಿಎಸ್‌ಟಿ ಆಯುಕ್ತ ರಾಜೇಶ್ ಪ್ರಸಾದ್ ಅಭಿಪ್ರಾಯಪಟ್ಟರು.
ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ಗುರುವಾರ ನಡೆದ ಎಂಜಿಎಂ ಪ.ಪೂ. ಕಾಲೇಜಿನ ವಾರ್ಷಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಹದಿಹರೆಯದಲ್ಲಿ ಮೋಜು ಮಸ್ತಿಗೆ ಒಳಗಾಗದೆ ಕಷ್ಟ ಪಟ್ಟು ಓದಬೇಕು. ಪ್ರತಿಯೊಬ್ಬರಲ್ಲೂ ಸಾಮರ್ಥ್ಯವಿದ್ದೇ ಇರುತ್ತದೆ ಎಂಬುದನ್ನು ವಿವೇಕಾನಂದರು ಬೆಟ್ಟು ಮಾಡಿದ್ದಾರೆ. ಸಕಾರಾತ್ಮಕ ಚಿಂತನೆ ಹೊಂದಿ ನಮ್ಮ ಭವಿಷ್ಯವನ್ನು ನಾವೇ ರೂಪಿಸಬೇಕು ಎಂದರು.
ಅಧ್ಯಕ್ಷತೆಯನ್ನು ಮಣಿಪಾಲ ಅಕಾಡೆಮಿ ಆಡಳಿತಾಧಿಕಾರಿ ಡಾ| ಎಚ್. ಶಾಂತಾರಾಮ್ ವಹಿಸಿದ್ದರು. ಪ್ರಾಂಶುಪಾಲ ಡಾ| ಎಂ.ಜಿ. ವಿಜಯ, ಪೋಷಕರು-ಶಿಕ್ಷಕರ ಸಂಘದ ಅಧ್ಯಕ್ಷ ಆತ್ರಾಡಿ ಪೃಥ್ವೀರಾಜ್ ಹೆಗ್ಡೆ ಗೌರವ ಅತಿಥಿಯಾಗಿದ್ದರು. ಪ.ಪೂ. ಪ್ರಾಂಶುಪಾಲೆ ಮಾಲತಿದೇವಿ ವರದಿ ವಾಚಿಸಿದರು. ವಿದ್ಯಾರ್ಥಿನಿಯರಾದ ನೇಹಾ ಭಟ್ ಸ್ವಾಗತಿಸಿ ವಿಭಾ ರಾವ್ ವಿದ್ಯಾರ್ಥಿ ಚಟುವಟಿಕೆಗಳನ್ನು ವಿವರಿಸಿದರು. ಅನಿಷಾ ಅತಿಥಿಗಳನ್ನು ಪರಿಚಯಿಸಿದರು. ಪ್ರತೀಕ್ ವಂದಿಸಿದರು. ಶ್ರಾವ್ಯ ಮಲ್ಯ ಕಾರ್ಯಕ್ರಮ ನಿರ್ವಹಿಸಿದರು.
ಜೀವನವೇ ಶಿಕ್ಷಕ, ಜಗತ್ತೇ ಶಾಲೆ
ಮೋಹನದಾಸ ಕರಮಚಂದ ಗಾಂಧಿ ಸತ್ಯ, ಅಹಿಂಸೆ, ತ್ಯಾಗ, ಪ್ರಾಮಾಣಿಕತೆ, ನಿಸ್ವಾರ್ಥಸೇವೆಯಿಂದ ಮಹಾತ್ಮನಾದರು. ಜೀವನದಲ್ಲಿ ಶಿಸ್ತು ಬಹಳ ಮುಖ್ಯ, ಜ್ಞಾನಾರ್ಜನೆ ಮಾಡಬೇಕೆಂಬ ಇಚ್ಛೆಯೂ ಅಗತ್ಯ. ಜೀವನವೇ ಗುರು, ಭೂಮಿಯೇ ಶಾಲೆ. ಜೀವನ, ಪರಿಸರದ ಅನುಭವ ಗಳಿಸುತ್ತ ಸಾಧನೆಯತ್ತ ಮುಂದಾಗಬೇಕು. ಕಷ್ಟಪಟ್ಟರೆ ಸಾಧನೆ ಮಾಡಬಹುದು ಎಂಬುದಕ್ಕೆ ಮಣಿಪಾಲದ ಡಾ| ಟಿಎಂಎ ಪೈಯವರೇ ಉದಾಹರಣೆ. ಹದಿಹರೆಯವನ್ನು ಸಮರ್ಥವಾಗಿ ಬಳಸಿಕೊಳ್ಳದೆ ಇದ್ದರೆ ಸಮಾಜಕ್ಕೂ ಹೆತ್ತವರಿಗೂ ಭಾರವಾಗುತ್ತೇವೆ. ಹದಿವಯಸ್ಸು ಭವಿಷ್ಯದ ಭದ್ರ ಬುನಾದಿ ನಿರ್ಮಿಸಲು ಸಕಾಲ ಎಂದು ರಾಜೇಶ್‌ಪ್ರಸಾದ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dr.Veerendra Heggade: ಡಾ.ಡಿ.ವೀರೇಂದ್ರ ಹಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್ ಫಿಕ್ಸ್
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.