ಸರಕಾರದ ಸೌಲಭ್ಯ ಜನರಿಗೆ ತಲುಪಿಸಿ: ಸಿಎಂ
Team Udayavani, Dec 29, 2019, 6:07 AM IST
ಉಡುಪಿ: ರಾಜಕೀಯ ಎನ್ನುವುದು ಕೇವಲ ಚುನಾವಣೆ ಸಮಯಕ್ಕೆ ಸೀಮಿತವಾಗಿರಬೇಕು. ಜನಪ್ರತಿನಿಧಿಗಳು ಸರಕಾರದ ಸೇವೆಗಳನ್ನು ಸಾಮಾನ್ಯರಿಗೆ ತಲುಪಿಸುವ ಪ್ರಯತ್ನ ಮಾಡುವಂತಾಗಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಟ ಹೇಳಿದರು.
ಕೋಟ ವಿವೇಕ ವಿದ್ಯಾ ಸಂಸ್ಥೆಯ ಆವರಣದಲ್ಲಿ ಶನಿವಾರ ಕೋಟತಟ್ಟು ಗ್ರಾಮ ಪಂಚಾಯತ್, ಕೋಟ ಡಾ| ಶಿವರಾಮ ಕಾರಂತ ಪ್ರತಿಷ್ಠಾನ, ಡಾ| ಶಿವರಾಮ ಕಾರಂತ ಜನ್ಮದಿನೋತ್ಸವದ ಅಂಗವಾಗಿ ಉಡುಪಿ, ದ. ಕ. ಜಿಲ್ಲೆಗಳ ಪಂಚಾಯತ್ ರಾಜ್ ಮತ್ತು ನಗರ ಸ್ಥಳೀಯಾಡಳಿತ ಪ್ರತಿನಿಧಿಗಳ ಕ್ರೀಡೋತ್ಸವ, ಸಾಂಸ್ಕೃತಿಕ ಸ್ಪರ್ಧೆಗಳ ಹೊಳಪು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸ್ಥಳೀಯ ಸಂಸ್ಥೆಗಳು ತಳಮಟ್ಟದಿಂದ ಬಲಗೊಳ್ಳಬೇಕು. ಚುನಾಯಿತ ಸದಸ್ಯರು ಗ್ರಾಮದ ಅಭಿವೃದ್ಧಿ ಕಾರ್ಯಗಳ ಕಡೆ ಗಮನ ಹರಿಸಬೇಕು. ಸುಧಾರಣೆ, ದಕ್ಷತೆ, ಬದ್ಧತೆ ಫಲಿತಾಂಶಾಧಾರಿತ ಅನುಷ್ಠಾನಕ್ಕೆ ಆದ್ಯತೆ ನೀಡಿ ಕೆಲಸ ಮಾಡಿದಾಗ ಮಾತ್ರ ಅಧಿಕಾರ ವಿಕೇಂದ್ರಿಕರಣ ಸಮರ್ಪಕವಾಗಿ ನಡೆಯುತ್ತದೆ ಎಂದರು.
ಗ್ರಾಮಗಳಿಗೂ ಸೋಲಾರ್ ವಿದ್ಯುತ್ ಅಳವಡಿಕೆ
ಕ್ರೀಡಾಳುಗಳ ಪಥಸಂಚಲನದ ಗೌರವ ಸ್ವೀಕರಿಸಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಮಾತನಾಡಿ, ಕೇಂದ್ರ ಸರಕಾರ ಪ್ರತಿ ಗ್ರಾ.ಪಂ.ಗಳಿಗೆ ತ್ಯಾಜ್ಯ ವಸ್ತುಗಳ ನಿರ್ವಹಣೆಗೆ 20 ಲ.ರೂ. ಅನುದಾನ ನೀಡುತ್ತಿದೆ. ಅದನ್ನು ಪ್ರತಿಯೊಬ್ಬರು ಬಳಸಿಕೊಂಡು ತ್ಯಾಜ್ಯ ಮುಕ್ತ ಗ್ರಾಮವನ್ನಾಗಿ ಮಾಡಬೇಕು. ಗ್ರಾಮಗಳಿಗೂ ಸೋಲಾರ್ ವಿದ್ಯುತ್ ಅಳವಡಿಸುವ ಬಗ್ಗೆ ತೀರ್ಮಾನಿಸಲಾಗಿದೆ. ಈ ಕುರಿತು ದ.ಕ, ಉಡುಪಿ ಜಿಲ್ಲೆಯಲ್ಲಿಯೂ ಕಾರ್ಯ ನಡೆಯಬೇಕು. ಕನಿಷ್ಟ ಗ್ರಾ.ಪಂ.ಗಳಲ್ಲಿ ಆದರೂ ಸೋಲಾರ್ ದೀಪ ಬಳಕೆ ಮಾಡಬೇಕು ಎಂದು ಮನವಿ ಮಾಡಿದರು.
ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಅತ್ಯುತ್ತಮ ಗ್ರಾಮ ಪಂಚಾಯತ್‌ಗಳಿಗೆ ಪ್ರಶಸ್ತಿಯನ್ನು ನೀಡಿದರು. ಇದೇ ಸಂದರ್ಭದಲ್ಲಿ ಸಾಂಸ್ಕೃತಿಕ ಹಾಗೂ ಕ್ರೀಡೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ಕೆ.ರಘುಪತಿ ಭಟ್, ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ| ಗಣೇಶ್ ಕಾರ್ಣಿಕ್, ಜಿ. ಪಂ. ಅಧ್ಯಕ್ಷ ದಿನಕರ್ ಬಾಬು, ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ಕೋಟತಟ್ಟು ಗ್ರಾ.ಪಂ. ಅಧ್ಯಕ್ಷ ರಘು ತಿಂಗಳಾಯ, ಮಾಜಿ ಸಂಸದ ಜಯಪ್ರಕಾಶ ಹೆಗ್ಡೆ , ಜಿ.ಪಂ. ಸಿಇಒ ಪ್ರೀತಿ ಗೆಹಲೋಟ್, ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ ಎಸ್. ಕುಂದರ್ ಉಪಸ್ಥಿತರಿದ್ದರು.
ಗೌರವಾಧ್ಯಕ್ಷ ಆನಂದ್ ಸಿ. ಕುಂದರ್ ಸ್ವಾಗತಿಸಿದರು, ಸತೀಶ್ಚಂದ್ರ ಶೆಟ್ಟಿ ಚಿತ್ರಪಾಡಿ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Udupi: ಬಿಎಸ್ಸೆನ್ನೆಲ್ ಟವರ್ ನಿರ್ವಹಣೆ ಹೊಣೆ ಪಂಚಾಯತ್ ಹೆಗಲಿಗೆ
Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್ & ಕ್ಲಬ್ ಹೊರಗೆ ಬಾಂ*ಬ್ ಸ್ಪೋ*ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.