ಎಸ್‌ಸಿ, ಎಸ್‌ಟಿಯವರಿಗೆ ಯೋಜನೆ ತಲುಪಿಸಿ: ಸಚಿವ ಕೋಟ ಸೂಚನೆ
Team Udayavani, May 31, 2022, 12:31 AM IST
ಉಡುಪಿ: ಸರಕಾರ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಕಲ್ಯಾಣ ಅಭಿವೃದ್ಧಿಗೆ ಅನೇಕ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಇದನ್ನು ಅರ್ಹ ಫಲಾನುಭವಿಗಳಿಗೆ ಸಕಾಲದಲ್ಲಿ ತಲುಪಿಸಬೇಕು ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು.
ಅವರು ಸೋಮವಾರ ನಡೆದ ಎಸ್.ಸಿ., ಎಸ್.ಪಿ. ಮತ್ತು ಟಿ.ಎಸ್.ಪಿ., ಹಿಂದುಳಿದ ವರ್ಗ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನ ಸಭೆ ಯ ಅಧ್ಯಕ್ಷತೆ ವಹಿಸಿ ಮಾತನಾಡಿದರು
ಶೇ.24.1 ಅನುದಾನ
ಸರಕಾರ ಪ್ರಸ್ತುತ ಸಾಲಿನಲ್ಲಿ ಆಯವ್ಯಯ ಮೊತ್ತದಲ್ಲಿ ಪ. ಜಾತಿ, ಪ. ಪಂಗಡದ ಜನಸಂಖ್ಯೆ ಆಧಾರದ ಮೇಲೆ ಶೇ. 24.10ರಷ್ಟು ಅನುದಾನವನ್ನು ಮೀಸಲಿಟ್ಟು, ಕಾಲನಿಗಳ ಮೂಲಭೂತ ಸೌಕರ್ಯವನ್ನು ಒದಗಿಸುವುದರ ಜತೆಗೆ ಹಾಗೂ ವಿವಿಧ ಯೋಜನೆಗಳ ಅಡಿಯಲ್ಲಿ ಫಲಾನುಭವಿಗಳನ್ನು ಆಯ್ಕೆ ಮಾಡಿ ಆರ್ಥಿಕ ಸಹಾಯವನ್ನು ಕಲ್ಪಿಸಲು ಮುಂದಾಗಿದ್ದು ಸಮರ್ಪಕ ಅನುಷ್ಠಾನವಾಗಬೇಕು ಎಂದರು.
ನೇರ ಗೃಹ ನಿರ್ಮಾಣ ಅನುದಾನ
ಜಿಲ್ಲೆಯಲ್ಲಿನ ಪ.ಜಾತಿ ಹಾಗೂ ಪ. ಪಂಗಡದವರ ನಿವೇಶನ ರಹಿತ, ವಸತಿ ರಹಿತರ ಪಟ್ಟಿಯನ್ನು ಮಾಡಿ ಅದಕ್ಕನುಗುಣವಾಗಿ ಲಭ್ಯವಿರುವ ಅನುದಾನವನ್ನು ಬಳಕೆ ಮಾಡಿ ಸೌಲಭ್ಯಗಳನ್ನು ಕಲ್ಪಿಸಬೇಕು. ರಾಜೀವ್ ಗಾಂಧಿ ನಿಗಮದಿಂದ ವಸತಿ ಸೌಲಭ್ಯ ಕಲ್ಪಿಸಲಾಗುತ್ತಿದ್ದು ಕೆಲವೊಂದು ಷರತ್ತಿನಿಂದಾಗಿ ಸಮರ್ಪಕ ಅನುಷ್ಠಾನವಾಗುತ್ತಿಲ್ಲದ ಹಿನ್ನೆಲೆ ಇಲಾಖೆ ವತಿಯಿಂದಲೇ ಗೃಹ ನಿರ್ಮಾಣಕ್ಕೆ ಅನುದಾನ ಬಿಡುಗಡೆಮಾಡಲು ಪ್ರಸ್ತಾವನೆ ಸಲ್ಲಿಸಬೇಕೆಂದು ಸೂಚನೆ ನೀಡಿದರು.
ಪೌರಕಾರ್ಮಿಕರ ಖಾಯಂ
ಪೌರ ಕಾರ್ಮಿಕರ ಅಭಿವೃದ್ಧಿಯ ಅನುದಾನವನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು ಎಂದ ಅವರು, ಜಿಲ್ಲೆಯಲ್ಲಿ 368 ಪೌರ ಕಾರ್ಮಿಕರ ಹುದ್ದೆಗಳಿದ್ದು ಅದರಲ್ಲಿ 130 ಖಾಯಂ ಇದ್ದರೆ, 164 ಜನ ಗುತ್ತಿಗೆ ಹಾಗೂ ಹೊರ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರನ್ನು ಖಾಯಂಗೊಳಿಸಲು ಸರ ಕಾರಕ್ಕೆ ಪ್ರಸ್ತಾವನೆ ಕಳುಹಿಸಿ ಕೊಡಲು ಸೂಚನೆ ನೀಡಿದರು.
ಕೃಷಿ ಹಾಗೂ ತೋಟಗಾರಿಕೆ ಇಲಾಖೆಯು ಪ. ಜಾತಿ ಹಾಗೂ ಪ. ಪಂಗಡದ ರೈತರ ಅಂಕಿ-ಸಂಖ್ಯೆಗಳನ್ನು ಕ್ರೋಡೀಕರಿಸುವ ಜತೆಗೆ ಸಣ್ಣ-ಅತಿ ಸಣ್ಣ ರೈತರ ಮಾಹಿತಿ ಹೊಂದಿ ಅವರ ಸಂಖ್ಯೆಗೆ ಅನುಗುಣವಾಗಿ ಅನುದಾನವನ್ನು ಸರ ಕಾರದಿಂದ ಪಡೆದು ಆರ್ಥಿಕ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದರು.
ಮೀನು ಮಾರಾಟ ಮಹಿಳೆಯರಿಗೆ ದ್ವಿಚಕ್ರ ವಾಹನ
ಹೊಸಬರಿಗೆ ಉದ್ಯೋಗಾವಕಾಶ ಕಲ್ಪಿಸಬೇಕು ಎಂಬ ಉದ್ದೇಶದಿಂದ ಬಜೆಟ್‌ನಲ್ಲಿ ಆಳ ಸಮುದ್ರ ಮೀನುಗಾರಿಕೆ, 100 ಹೊಸ್ ಬೋಟ್‌ಗಳನ್ನು ಖರೀದಿಸಲು, ಮೀನು ಮಾರಾಟ ಮಾಡಲು ಅನುಕೂಲವಾಗುಂತೆ ಮಹಿಳೆಯರಿಗೆ 100 ದ್ವಿ ಚಕ್ರ ವಾಹನವನ್ನು ಖರೀದಿಸಲು ಆರ್ಥಿಕ ಸೌಲಭ್ಯ ಕಲ್ಪಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Udupi: ಗೀತಾರ್ಥ ಚಿಂತನೆ-94: ದುಗುಡಗಳನ್ನು ಕೇಳುವುದೂ ಚಿಕಿತ್ಸೆ
Udupi: ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡು ವ್ಯಕ್ತಿ ಸಾವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.