“ಪ್ಲಾಸ್ಟಿಕ್‌ಅಕ್ಕಿ’ ವಿತರಣೆ: ಜಿಲ್ಲಾಧಿಕಾರಿಗೆ ಮನವಿ 

Team Udayavani, Aug 8, 2017, 8:00 AM IST

rice.jpg

ಪಡುಬಿದ್ರಿ: ಜನತೆಯಲ್ಲಿ ಸಂಚಲನವನ್ನು ಮೂಡಿಸಿರುವ “ಪ್ಲಾಸ್ಟಿಕ್‌ ಅಕ್ಕಿ’ಯ ಕುರಿತು”ಉದಯವಾಣಿ’ ಪ್ರಕಟಿಸಿದ ವರದಿಗೆ ಸ್ಪಂದಿಸಿದ ಗ್ರಾಹಕರು ಹೆಜಮಾಡಿಯ ನ್ಯಾಯಬೆಲೆ ಅಂಗಡಿಗೆ ತೆರಳಿ ಸತ್ಯಾಸತ್ಯತೆಯನ್ನು ಪರಿಶೀಲಿಸಿದ್ದಾರೆ. ಈ ವಿಚಾರವು ದೃಢಪಟ್ಟಿದ್ದು ಹೆಜಮಾಡಿಯ ನಾಗರಿಕ ಕ್ರಿಯಾ ಸಮಿತಿಯು ಉಡುಪಿ ಜಿಲ್ಲಾಧಿಕಾರಿಗೆ ಮನವಿ ಪತ್ರವೊಂದನ್ನು ನೀಡಿದ್ದು  ಸೂಕ್ತ ಕ್ರಮಕ್ಕೆ ಆಗ್ರಹಿಸಿದೆ. 

ಪಡುಬಿದ್ರಿ ವ್ಯಾವಸಾಯಿಕ ಸಹಕಾರಿ ಸಂಘದ ಹೆಜಮಾಡಿ ಶಾಖೆಗೆ ಬಂದಿರುವ ಸರಕಾರದ ಅನ್ನಭಾಗ್ಯದ 250 ಚೀಲ ಅಕ್ಕಿಯಲ್ಲಿ ಈ ಪ್ಲಾಸ್ಟಿಕ್‌ ಹರಳುಗಳು ಕಂಡುಬಂದಿದೆ. ಸರಕಾರವು ಈ ಹಿಂದಿನ ಸಂದರ್ಭಗಳಲ್ಲಿ “ಪ್ಲಾಸ್ಟಿಕ್‌ ಅಕ್ಕಿ’ಯ ಬಗೆಗೆ ಸೂಕ್ತ ಕ್ರಮವನ್ನು ಕೈಗೊಳ್ಳುವ ಭರವಸೆ ನೀಡಿದ್ದರೂ ಮುಂದುವರಿದಿರುವ ಈ ಚಾಳಿಯ ಬಗೆಗೆ ಜಿಲ್ಲಾಧಿಕಾರಿಯವರು ಇಲಾಖಾ ತನಿಖೆಯನ್ನು ನಡೆಸಬೇಕು. ಈ ತರದ ಅಕ್ಕಿ ಯಾವ ಸಂಘಕ್ಕೂ, ನ್ಯಾಯಬೆಲೆ ಅಂಗಡಿಗಳಿಗೂ ರವಾನೆಯಾಗದಂತೆ ಕ್ರಮ ಕೈಗೊಳ್ಳಬೇಕಾಗಿ ಜಿಲ್ಲಾಧಿಕಾರಿಯವರಿಗಿತ್ತ ಮನವಿಯಲ್ಲಿ ತಿಳಿಸಲಾಗಿದೆ. 

ಜಿಲ್ಲಾಧಿಕಾರಿ ಸ್ಪಂದನೆ
ಉಡುಪಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಹೆಜಮಾಡಿ ನಾಗರಿಕ ಕ್ರಿಯಾ ಸಮಿತಿಯ ಅಧ್ಯಕ್ಷ ಶೇಖರ್‌ ಹೆಜ್ಮಾಡಿ ಹಾಗೂ ಹೆಜಮಾಡಿಯ ಗ್ರಾಮಸ್ಥರು ಸೋಮವಾರ ಮನವಿಯನ್ನು ನೀಡಿದ್ದಾರೆ. ಮನವಿಗೆ ಸ್ಪಂದಿಸಿರುವ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್‌ ಅಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಗೆ ಈ ಕುರಿತಾದ ಸೂಕ್ತ ತನಿಖೆಯನ್ನು ನಡೆಸುವಂತೆ ಆದೇಶವನ್ನೂ ನೀಡಿರುವುದಾಗಿ ಶೇಖರ ಹೆಜ್ಮಾಡಿ ತಿಳಿಸಿರುತ್ತಾರೆ. 

ಉಗ್ರ ಹೋರಾಟದ ಎಚ್ಚರಿಕೆ
ಈಗಾಗಲೇ ಈ ಅಕ್ಕಿ ಮೂಟೆಗಳನ್ನು ವಿತರಿಸದಂತೆ ಆದೇಶಿಸಲಾಗಿದೆ. ಈ ಕುರಿತಾಗಿ ತಾವು ರಾಜ್ಯ ಆಹಾರ ಸಚಿವ ಯು. ಟಿ. ಖಾದರ್‌ ಅವರಿಗೂ ಮನವಿಯನ್ನು ರವಾನಿಸಲಿದ್ದು, ಜನಸಾಮಾನ್ಯನ ಅನ್ನಭಾಗ್ಯದ ಅಕ್ಕಿಯಲ್ಲೂ ಪ್ಲಾಸ್ಟಿಕ್‌ ಬೆರೆಸಿ ಅಟ್ಟಹಾಸ ಮೆರೆವ ಕುಳಗಳ ವಿರುದ್ಧ ತನಿಖೆ ನಡೆದು ಸತ್ಯಾಂಶ ಹೊರಬಾರದೇ ಇದ್ದಲ್ಲಿ ಮುಂದಿನ ದಿನಗಳಲ್ಲಿ ವ್ಯವಸ್ಥೆಯ ವಿರುದ್ಧ ತಾವು ಉಗ್ರ ಹೋರಾಟವನ್ನು ಸಂಘಟಿಸುವುದಾಗಿ ಶೇಖರ್‌ ಹೆಜ್ಮಾಡಿ ಹೇಳಿದ್ದಾರೆ.

ಸಮಗ್ರ ತನಿಖೆಗೆ ಕಟಪಾಡಿ ಶಂಕರ ಪೂಜಾರಿ  ಆಗ್ರಹ
ಛತ್ತೀಸ್‌ಘರ್‌ನಿಂದ ರವಾನೆಯಾಗುತ್ತಿರುವ ಅನ್ನಭಾಗ್ಯ ಪ್ಲಾಸ್ಟಿಕ್‌ ಅಕ್ಕಿಯ ಕುರಿತಾಗಿ ಮಾಧ್ಯಮಗಳು ಈ ಹಿಂದೆಯೇ ವರದಿ ಮಾಡಿದ್ದು ಎಲ್ಲವನ್ನೂ “ಏನೂ ಇಲ್ಲ’ ಎಂಬಂತೆ ವಿಧಾನಸಭೆಯಲ್ಲೂ ಚರ್ಚೆ ನಡೆಸಿ ಮುಕ್ತಾಯ ಹಾಡಿದ್ದ ಸರಕಾರವು ಮತ್ತೆ ಎಚ್ಚೆತ್ತುಕೊಳ್ಳಬೇಕಿದೆ. ಪ್ರಜ್ಞಾವಂತರ ಜಿಲ್ಲೆಯಾದ ಉಡುಪಿ ಜಿಲ್ಲೆಗೇ ಈ ಕಲಬೆರಕೆ ಅಕ್ಕಿಯನ್ನು ರವಾನಿಸಿ ಇಲ್ಲಿನ ಬಡ ಜನರ ಆರೋಗ್ಯದೊಂದಿಗೆ ಚೆಲ್ಲಾಟವಾಡುತ್ತಿರುವ ಮಧ್ಯವರ್ತಿಗಳ ಈ ಕುಕೃತ್ಯವನ್ನು ಗಂಭೀರವಾಗಿ ಪರಿಗಣಿಸಿ ಸಮಗ್ರ ಇಲಾಖಾ ತನಿಖೆಯನ್ನೇ ನಡೆಸಬೇಕೆಂದು ಉಡುಪಿ ಜಿ. ಪಂ. ಮಾಜಿ ಅಧ್ಯಕ್ಷ ಕಟಪಾಡಿ ಶಂಕರ ಪೂಜಾರಿ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Uddhav Thackeray’s bag inspection by election commission, controversy

Maha Election; ಚು.ಆಯೋಗದಿಂದ ಉದ್ಧವ್‌ ಠಾಕ್ರೆ ಬ್ಯಾಗ್‌ ಪರಿಶೀಲನೆ, ವಿವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

11(1

Yakshadhruva Patla Foundation Trust: ನ.14ರಂದು ಉಡುಪಿ ಘಟಕದ ಮಹಿಳಾ ವಿಭಾಗ ಆರಂಭ

Parashurama Murthy Case: ಉಳಿದ ಆರೋಪಿಗಳನ್ನು ಬಂಧಿಸಲು ಆಗ್ರಹ

Parashurama Murthy Case: ಉಳಿದ ಆರೋಪಿಗಳನ್ನು ಬಂಧಿಸಲು ಆಗ್ರಹ

7(1

Udupi: ನಗರದಲ್ಲಿ ಫುಟ್‌ಪಾತ್‌ಗಳ ಅತಿಕ್ರಮಣ; ಎಲ್ಲೆಂದರಲ್ಲಿ ವಾಹನ ಪಾರ್ಕಿಂಗ್‌

Udupi–Kanchi

Udupi: ಶ್ರೀಕೃಷ್ಣ ಮಠಕ್ಕೆ ನ.20ರಂದು ಕಾಂಚಿ ಶ್ರೀ ವಿಜಯೇಂದ್ರ ಸರಸ್ವತಿ ಸ್ವಾಮೀಜಿ ಆಗಮನ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.