ಮಾಬುಕಳದಿಂದ ಕೋಟದವರೆಗೆ ಬೃಹತ್‌ ಪ್ರತಿಭಟನ ಪಾದಯಾತ್ರೆ

ಸರ್ವಿಸ್‌ ರಸ್ತೆಗೆ ಆಗ್ರಹ

Team Udayavani, Oct 1, 2019, 5:14 AM IST

3009KOTA6E

ಕೋಟ: ಚತುಷ್ಪಥ ಹೆದ್ದಾರಿಯಲ್ಲಿ ಸರ್ವಿಸ್‌ ರಸ್ತೆಗೆ ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ ಜಾಗೃತಿ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಕಾರದಲ್ಲಿ ಸೆ. 30ರಂದು ಮಾಬುಕಳದಿಂದ ಕೋಟದ ತನಕ ಬೃಹತ್‌ ಪ್ರತಿಭಟನ ಪಾದಯಾತ್ರೆ ಜರಗಿತು.
ಜಾಗೃತಿ ಸಮಿತಿ ಅಧ್ಯಕ್ಷ ಪ್ರತಾಪ್‌ ಶೆಟ್ಟಿ ಸಾಸ್ತಾನದ ಮಾಬುಕಳದಲ್ಲಿ ಪಾದಯಾತ್ರೆಗೆ ಚಾಲನೆ ನೀಡಿದರು.

ಕುಮ್ರಗೋಡಿನಿಂದ ಮಾಬುಕಳ, ಸಾಸ್ತಾನ, ಸಾಲಿಗ್ರಾಮ, ಕೋಟ ವ್ಯಾಪ್ತಿಯಲ್ಲಿ ಸರ್ವೀಸ್‌ ರಸ್ತೆ ನಿರ್ಮಾಣವಾಗಬೇಕು ಮತ್ತು ಅವೈಜ್ಞಾನಿಕ ಕಾಮಗಾರಿಗಳನ್ನು ಸರಿಪಡಿಸಬೇಕು. ಸರ್ವಿಸ್‌ ರಸ್ತೆ ನಿರ್ಮಾಣವಾಗುವ ತನಕ ಪೊಲೀಸರು ವಿರುದ್ಧ ದಿಕ್ಕಿನಲ್ಲಿ ಸಂಚರಿಸುವವರಿಗೆ ದಂಡ ವಿಧಿಸಬಾರದು ಎಂದು ಘೋಷಣೆಗಳನ್ನು ಕೂಗಿದರು.

ನವಯುಗ ವಿರುದ್ಧ ಆಕ್ರೋಶ
ಪ್ರತಿಭಟನಾ ಮೆರವಣಿಗೆಯಲ್ಲಿ ವಾಹನ ಚಾಲಕ- ಮಾಲಕರು, ಸ್ವಸಹಾಯ ಸಂಘಗಳು, ಸ್ಥಳೀಯರು ಬೃಹತ್‌ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು ಮತ್ತು ನವಯುಗ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸಾಸ್ತಾನ, ಗುಂಡ್ಮಿ, ಚೇಂಪಿ, ಸಾಲಿಗ್ರಾಮ, ಮುಂತಾದ ಕಡೆಗಳಲ್ಲಿ ತಂಪು ಪಾನೀಯಗಳನ್ನು ವಿತರಿಸಲಾಯಿತು ಹಾಗೂ ಹಲವು ಕಡೆ ಸ್ಥಳೀಯರು ಮೆರವಣಿಗೆಯ ಜತೆ ಸೇರಿ ಹೆಜ್ಜೆ ಹಾಕಿದರು. ಪ್ರತಿಭಟನೆಗೆ ಆಗಮಿಸುವವರಿಗೆ ವಾಹನ ಮಾಲಕರಿಂದ ಉಚಿತ ವಾಹನದ ವ್ಯವಸ್ಥೆ ಕೂಡ ಮಾಡಲಾಗಿತ್ತು.

ಬಿಗಿ ಪೊಲೀಸ್‌ ಬಂದೋಬಸ್ತ್
ಪ್ರತಿಭಟನಾ ಮೆರವಣಿಗೆ ಸಂದರ್ಭ ಅಹಿತಕರ ಘಟನೆಗಳು ನಡೆಯದಂತೆ ಉಡುಪಿ ಡಿವೈಎಸ್‌ಪಿ ಜಯಶಂಕರ್‌ ನೇತೃತ್ವದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್ ಕೈಗೊಳ್ಳಲಾಗಿತ್ತು ಹಾಗೂ ಕೋಟ, ಸಾಲಿಗ್ರಾಮ, ಸಾಸ್ತಾನ ಮುಂತಾದ ಕಡೆ ಪೊಲೀಸರನ್ನು ನಿಯೋಜಿಸಲಾಗಿತ್ತು. ಬ್ರಹ್ಮಾವರ ವೃತ್ತ ನಿರೀಕ್ಷಕ ಅನಂತಪದ್ಮನಾಭ, ಉಡುಪಿಯ ಮಂಜುನಾಥ ಮತ್ತು ಠಾಣಾಧಿಕಾರಿಗಳಾದ ನಿತ್ಯಾನಂದ ಗೌಡ, ಮಧು, ರಾಘವೇಂದ್ರ ಹಾಗೂ ಸಿಬಂದಿ ಉಪಸ್ಥಿತರಿದ್ದರು.

ಜಾಗೃತಿ ಸಮಿತಿ ಕಾರ್ಯದರ್ಶಿ ವಿಟuಲ ಪೂಜಾರಿ, ಕಾನೂನು ಸಲಹೆಗಾರ ಶ್ಯಾಮ್‌ಸುಂದರ ನಾೖರಿ, ಬ್ರಹ್ಮಾವರ ತಾಲೂಕು ಜನಜಾಗೃತಿ ಸಮಿತಿ ಅಧ್ಯಕ್ಷ ಅಚ್ಯುತ್‌ ಪೂಜಾರಿ, ಜಿ.ಪಂ. ಸದಸ್ಯ ರಾಘವೇಂದ್ರ ಕಾಂಚನ್‌, ತಾ.ಪಂ. ಸದಸ್ಯೆ ಜ್ಯೋತಿ ಉದಯ ಪೂಜಾರಿ, ಲಲಿತಾ, ಜಾಗೃತಿ ಸಮಿತಿಯ ಸದಸ್ಯ ಪ್ರಶಾಂತ ಶೆಟ್ಟಿ ನಾಗರಾಜ ಗಾಣಿಗ ಸಾಲಿಗ್ರಾಮ, ಅಲ್ವಿನ್‌ ಅಂದ್ರಾಡೆ, ಗೋವಿಂದ ಪೂಜಾರಿ, ಜಿಲ್ಲಾ ಲಾರಿ ಮಾಲಕರ ಸಂಘದ ರಾಜೇಶ್‌ ಕಾವೇರಿ, ಕಿಶೋರ್‌ ಕುಮಾರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

death

Gangolli: ಲಾರಿ ಪ್ರಯಾಣದ ವೇಳೆ ಕ್ಲೀನರ್‌ ಸಾವು

accident2

Padubidri: ಅಪರಿಚಿತ ವಾಹನ ಢಿಕ್ಕಿ;‌ ಪಾದಚಾರಿಗೆ ತೀವ್ರ ಗಾಯ

de

Padubidri: ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.