ದಿನಭತ್ತೆ ಹೆಚ್ಚಳಕ್ಕೆ ಆರ್ಥಿಕ ಇಲಾಖೆ ಅನುಮೋದನೆ

ಪೊಲೀಸ್‌ ಇಲಾಖೆ ಅಧೀನದ ಗೃಹರಕ್ಷಕರಿಗೆ ಸಿಹಿಸುದ್ದಿ

Team Udayavani, Feb 11, 2020, 6:12 AM IST

kemmu-32

ಸಾಂದರ್ಭಿಕ ಚಿತ್ರ

ಉಡುಪಿ: ಪೊಲೀಸ್‌ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗೃಹ ರಕ್ಷಕದಳದ ಸಿಬಂದಿಯ ವೇತನ ಹೆಚ್ಚಳಕ್ಕೆ ಆರ್ಥಿಕ ಇಲಾಖೆಯಿಂದ ಅನುಮೋದನೆ ದೊರಕಿದ್ದು, ಅವಿಭಜಿತ ದ.ಕ. ಜಿಲ್ಲೆಯಲ್ಲಿ ಸುಮಾರು 456 ಗೃಹ ರಕ್ಷಕದಳ ಸಿಬಂದಿಗೆ ಪ್ರಯೋಜನ ಸಿಗಲಿದೆ.

ದಿನ ಭತ್ತೆ 750 ರೂ.ಗೆ ಏರಿಕೆ!
ಬೆಂಗಳೂರು ವಲಯದ ಪೊಲೀಸ್‌ ಇಲಾಖೆಯಲ್ಲಿ ಕೆಲಸ ಮಾಡುವ ಗೃಹರಕ್ಷಕರಿಗೆ 500 ರೂ. (ದಿನಭತ್ತೆ) ನಿಗದಿಪಡಿಸ ಲಾಗಿದೆ. ಉಳಿದೆಡೆ 380 ರೂ. ನೀಡಲಾಗುತ್ತಿದೆ. ಇದೀಗ ಸರಕಾರ ಗೃಹ ರಕ್ಷಕರಿಗೆ 750 ರೂ.ಗೇರಿಸಿ 2020ರ ಎಪ್ರಿಲ್‌ 1ರಿಂದ ಅನುಷ್ಠಾನಗೊಳಿಸುವಂತೆ ಆಡಳಿತ ಇಲಾಖೆ ಕಾರ್ಯದರ್ಶಿ ಸಿ.ಆರ್‌. ಹೇಮಲತಾ ಆದೇಶ ನೀಡಿದ್ದಾರೆ. ಸಂಪುಟದ ಹಸಿರು ನಿಶಾನೆ ದೊರಕುವುದಷ್ಟೇ ಬಾಕಿ.

ಇತರ ಗೃಹರಕ್ಷಕರು ಕಿಡಿ!
ಇದು ಪೊಲೀಸ್‌ ಇಲಾಖೆಯಲ್ಲಿರುವ ಗೃಹ ರಕ್ಷಕರಿಗೆ ಮಾತ್ರ ಅನ್ವಯವಾಗಿರುವುದರಿಂದ ಉಳಿದ ಗೃಹರಕ್ಷಕ ಸಿಬಂದಿಯ ಕಣ್ಣು ಕೆಂಪಾಗಿಸಿದೆ. ಅವಿಭಜಿತ ದ.ಕ. ಜಿಲ್ಲೆಯಲ್ಲಿ ಪ್ರವಾಸೋದ್ಯಮ, ಪ್ರವಾಸಿ ಮಿತ್ರ, ಗಣಿ ಇಲಾಖೆ, ಅಗ್ನಿಶಾಮಕ ದಳ, ನೆರೆ ನಿರ್ವಹಣೆ ಸಹಿತ ವಿವಿಧ ಕಡೆ 1,500 ಗೃಹರಕ್ಷಕರ ಸಿಬಂದಿ ದಿನಗೂಲಿ ಆಧಾರದಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ಇದೀಗ ವೇತನ ತಾರತಮ್ಯದಿಂದಾಗಿ ಪೊಲೀಸ್‌ ಇಲಾಖೆ ಹೊರತುಪಡಿಸಿ ಇತರ ಇಲಾಖೆಗಳಲ್ಲಿ ಕೆಲಸ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಭತ್ತೆ ಏರಿಕೆಯನ್ನು ಅವರಿಗೂ ಅನ್ವಯಿಸುವಂತೆ ಅವಳಿ ಜಿಲ್ಲೆಯಿಂದ ಮನವಿ ಸಲ್ಲಿಕೆಯಾಗಿದೆ.

ದ.ಕ.: 1,000; ಉಡುಪಿ: 500 ಗೃಹರಕ್ಷಕ ಸಿಬಂದಿ
ದ.ಕ. ಜಿಲ್ಲೆಯಲ್ಲಿ ಒಟ್ಟು 1,000 ಮಂದಿ ಗೃಹರಕ್ಷಕರಿದ್ದಾರೆ. ಅವರಲ್ಲಿ 350 ಮಂದಿ ಪೊಲೀಸ್‌ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. 650 ಮಂದಿ ಖಾಯಂ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 500 ಮಂದಿ ಗೃಹರಕ್ಷಕ
ರಿದ್ದು, 132 ಜನ ಕರಾವಳಿ ಪೊಲೀಸ್‌ ಪಡೆ, 106 ಜನ ಆರಕ್ಷಕರ ಠಾಣೆ, 10 ಮಂದಿ ಪ್ರವಾಸಿ ಮಿತ್ರದಲ್ಲಿ, ಐವರು ಗಣಿ ಇಲಾಖೆಯಲ್ಲಿ, 19 ಮಂದಿ ಅಗ್ನಿಶಾಮಕ ದಳದಲ್ಲಿ, ತಲಾ 10 ಮಂದಿ ನೆರೆ ನಿರ್ವಹಣೆ, ಜೈಲು ಕರ್ತವ್ಯದಲ್ಲಿದ್ದಾರೆ.

ಪೊಲೀಸ್‌ ಇಲಾಖೆಯಲ್ಲಿ ಕೆಲಸ ಮಾಡುವ ಗೃಹ ರಕ್ಷಕ ದಳದ ಸಿಬಂದಿಗೆ 750 ರೂ. ದಿನಭತ್ತೆ ನೀಡುವಂತೆ ಇಲಾಖೆಯಿಂದ ಯಾವುದೇ ರೀತಿಯಾದ ಲಿಖೀತ ಆದೇಶ ಬಂದಿಲ್ಲ. ಸಚಿವ ಸಂಪುಟದಲ್ಲಿ ವಿಷಯ ಪ್ರಸ್ತಾವವಿದೆ ಎಂದು ತಿಳಿದುಬಂದಿದೆಯಷ್ಟೆ.
-ಡಾ| ಮುರಲೀ ಮೋಹನ್‌, ಡಾ| ಪ್ರಶಾಂತ ಶೆಟ್ಟಿ,  ಸಮಾದೇಷ್ಟರು, ದ.ಕ./ ಉಡುಪಿ ಜಿಲ್ಲಾ ಗೃಹರಕ್ಷಕ ದಳ

ಸರಕಾರ ನಮ್ಮ ಸೇವೆಯನ್ನು ಪರಿಗಣಿಸುತ್ತಿಲ್ಲ. ಇದೀಗ ವೇತನ ತಾರತಮ್ಯದಿಂದ ಇತರ ಇಲಾಖೆಗಳಲ್ಲಿ ಕೆಲಸ ಮಾಡಲು ಮನಸ್ಸು ಒಪ್ಪುತ್ತಿಲ್ಲ. ತಿಂಗಳಪೂರ್ತಿ ಕೆಲಸ ಮಾಡಿ ದರೆ 9,000 ರೂ. ಸಂಬಳ ಸಿಗುತ್ತದೆ. ರಜೆ ಹಾಕಿದರೆ ವೇತನದಲ್ಲಿ ಕಡಿತವಾಗುತ್ತದೆ. ಜೀವನ ಭದ್ರತೆಗಾಗಿ ಪರದಾಡುವ ಸ್ಥಿತಿ ಬಂದಿದೆ.
– ಹೆಸರು ಹೇಳಲಿಚ್ಛಿಸದ ಗೃಹರಕ್ಷಕ ಸಿಬಂದಿ

– ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟುUdupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು

Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು

Udupi-DC

Manipal: ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

ಕಲಾವಿದರ ಮಾಸಾಶ‌ನ ಹೆಚ್ಚಳಕ್ಕೆ ಸಿಗದ ಆರ್ಥಿಕ ಇಲಾಖೆ ಒಪ್ಪಿಗೆ

ಕಲಾವಿದರ ಮಾಸಾಶ‌ನ ಹೆಚ್ಚಳಕ್ಕೆ ಸಿಗದ ಆರ್ಥಿಕ ಇಲಾಖೆ ಒಪ್ಪಿಗೆ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ

Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

3(1

Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

2

Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್‌  ಸೇವೆ

1

Karinja: ಅಪಾಯಕಾರಿ ವಿದ್ಯುತ್‌ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.