ಕುಂಭಕಾಶಿ ಇಂದು ದೇವ ಕಾಶಿ: ಪೇಜಾವರ ಶ್ರೀ
Team Udayavani, Apr 30, 2018, 11:27 AM IST
ತೆಕ್ಕಟ್ಟೆ (ಕುಂಭಾಶಿ): ಕುಂಭಾಶಿ ಶ್ರೀ ಚಂಡಿಕಾ ದುರ್ಗಾಪರಮೇಶ್ವರೀ ದೇಗುಲದ ಶಿಲಾಮಯ ಗರ್ಭಗೃಹದ ನೂತನ ದೇಗುಲ ಸಮರ್ಪಣೆ, ಶ್ರೀ ಮಹಾಗಣಪತಿ, ಶ್ರೀ ವೆಂಕಟರಮಣ ದೇವರು, ಶ್ರೀ ನಾಗ, ಶ್ರೀ ನಾಗಯಕ್ಷಿ, ಶ್ರೀ ಸ್ವರ್ಣಯಕ್ಷಿ ಬಿಂಬ ಪ್ರತಿಷ್ಠೆ, ತಣ್ತೀಕಲಶಾಭಿಷೆೇಕ, ಪ್ರತಿಷ್ಠಾ ಕಲಶಾಭಿಷೇಕ, ಮೂರು ಭದ್ರಾದೀಪ ಪ್ರತಿಷ್ಠೆಯನ್ನು ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ರವಿವಾರ ನೆರವೇರಿಸಿದರು.
ಬಳಿಕ ಧಾರ್ಮಿಕ ಸಭೆಯನ್ನು ಉದ್ಘಾಟಿಸಿದ ಶ್ರೀಗಳು ಮಾತನಾಡಿ, ದುಷ್ಟ ಶಕ್ತಿಗಳನ್ನು ಸಂಹಾರ ಮಾಡಿದ ಈ ಕುಂಭಾಶಿ ಪುಣ್ಯ ಕ್ಷೇತ್ರದಲ್ಲಿ ಭವ್ಯವಾಗಿ ನಿರ್ಮಾಣವಾದ ದುರ್ಗಾ ದೇವಿಯ ದೇಗುಲದಿಂದಾಗಿ ದೇವ ಕಾಶಿಯಾಗಿದೆ ಎಂದರು.
ಈ ಸಂದರ್ಭದಲ್ಲಿ ದೇಗುಲದ ಕಾರಣಕರ್ತರಾದ, ಮುಂಬಯಿ ಉದ್ಯಮಿ ದೇವರಾಯ ಎಂ. ಶೇರೆಗಾರ್ ಮತ್ತು ಅನಿತಾ ದಂಪತಿ ಶ್ರೀಗಳಿಗೆ ಫಲಪುಷ್ಪ ನೀಡಿ ಗೌರವಿಸಿದರು.
ಶ್ರೀ ಕ್ಷೇತ್ರ ಮರಕಡದ ಶ್ರೀ ನರೇಂದ್ರನಾಥ ಯೋಗೀಶ್ವರೇಶ್ವರ ಸ್ವಾಮೀಜಿ, ಶ್ರೀ ಕ್ಷೇತ್ರ ಕಟೀಲಿನ ಆನುವಂಶಿಕ ಅರ್ಚಕ
ಹರಿನಾರಾಯಣ ದಾಸ ಆಸ್ರಣ್ಣರು, ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಆನುವಂಶಿಕ ಆಡಳಿತ
ಧರ್ಮದರ್ಶಿ ಕೆ. ಸೂರ್ಯ ನಾರಾಯಣ ಉಪಾಧ್ಯಾಯ, ಆಗಮ ಪಂಡಿತ ಎಲ್ಲೂರು ಸೀಮೆಯ ವೇ|ಮೂ| ಕುತ್ಯಾರು ಕೇಂಜ ಶ್ರೀಧರ ತಂತ್ರಿ, ಪ್ರಧಾನ ಅರ್ಚಕ ವೇ|ಮೂ| ಕೆ. ಶ್ರೀಧರ ಉಪಾಧ್ಯಾಯ ಕಾರ್ಯಕ್ರಮದಲ್ಲಿ ಕುಂದಾಪುರ ರಾಮಕ್ಷತ್ರಿಯ ಸಂಘದ ಅಧ್ಯಕ್ಷ ರವೀಂದ್ರ ಕಾವೇರಿ, ಕುಂದಾಪುರ ಖಾರ್ವಿಕೇರಿ ಶ್ರೀ ಮಹಾಕಾಳಿ ದೇವಸ್ಥಾನ ಇದರ ಅಧ್ಯಕ್ಷ ಜಯಾನಂದ ಖಾರ್ವಿ, ಕುಂದಾಪುರ ಬಿಲ್ಲವ ಸಂಘದ ಅಧ್ಯಕ್ಷ ಎನ್.ಟಿ. ಪೂಜಾರಿ ಹಾಗೂ ಗಂಗೊಳ್ಳಿ ಹೊಸಮನೆ ಕುಟುಂಬಸ್ಥರು, ಕೀರ್ತಿಶೇಷ ಗೌರಮ್ಮ ಮತ್ತು ಮಂಜುನಾಥ ಶೇರೆಗಾರ ಕುಟುಂಬಿಕರು ಉಪಸ್ಥಿತರಿದ್ದರು.
ದೇವರಾಯ ಎಂ. ಶೇರೆಗಾರ್ ಸ್ವಾಗತಿಸಿ, ಸಂತೋಷ್, ರಶ್ಮಿರಾಜ್, ರಾಜಶೇಖರ್ ಹೆಗ್ಡೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್ ಜಾಮ್
Pro Kabaddi League: ಗುಜರಾತ್ ಜೈಂಟ್ಸ್ ವಿರುದ್ಧದಬಾಂಗ್ ಡೆಲ್ಲಿಗೆ ಗೆಲುವು
PAK Vs SA: ಸರಣಿ ಕ್ಲೀನ್ ಸ್ವೀಪ್ ಗೈದ ಪಾಕಿಸ್ಥಾನ
Eshwara Khandre; ಕುಕ್ಕೆ, ಧರ್ಮಸ್ಥಳದಲ್ಲಿ: ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕಾರ
BCCI: ಇನ್ನೆರಡು ಟೆಸ್ಟ್ ನಿಂದ ಮೊಹಮ್ಮದ್ ಶಮಿ ಹೊರಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.