ಕಂದಾಚಾರದ ಸಮಾಜಕ್ಕೆ ಬೆಳಕು ತೋರಿದ ದಾಸಿಮಯ್ಯ
Team Udayavani, Apr 6, 2018, 6:50 AM IST
ಉಡುಪಿ: ಹತ್ತನೇ ಶತಮಾನದ ಸಮಾಜದಲ್ಲಿದ್ದ ಮೂಢನಂಬಿಕೆ, ಕಂದಾಚಾರಗಳನ್ನು ದೂರ ಮಾಡಲು ಹುಟ್ಟಿದ ಮಹಾತ್ಮರಲ್ಲಿ ದೇವರ ದಾಸಿಮಯ್ಯ ಕೂಡ ಒಬ್ಬರು. ಅವರು ಸಮಾಜಕ್ಕೆ ಬೆಳಕಾದವರು ಎಂದು ಅಪರ ಜಿಲ್ಲಾಧಿಕಾರಿ ಅನುರಾಧಾ ಅಭಿಪ್ರಾಯಪಟ್ಟರು.
ಎ. 5ರಂದು ಜಿಲ್ಲಾಡಳಿತ, ಜಿ.ಪಂ., ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಆಶ್ರಯದಲ್ಲಿ ಬ್ರಹ್ಮಗಿರಿ ಲಯನ್ಸ್ ಭವನದಲ್ಲಿ ಆಯೋಜಿಸಲಾಗಿದ್ದ ಶ್ರೀ ದೇವರ ದಾಸಿಮಯ್ಯ ಜಯಂತಿ ಆಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜಾತಿ ಪದ್ಧತಿಯ ವಿರುದ್ಧ ಜಾಗೃತಿ
ಅಹಂಕಾರ ತೊರೆದು ಕಾಯಕದಲ್ಲಿ ತೊಡಗಿಕೊಳ್ಳುವಂತೆ ಹೇಳಿದ ದಾಸಿಮಯ್ಯ ಅವರು ತಮ್ಮ ವಚನಗಳ ಮೂಲಕ ಜಾತಿಪದ್ಧತಿಯ ವಿರುದ್ಧ ಜನರನ್ನು ಜಾಗೃತಗೊಳಿಸಲು ಪ್ರಯತ್ನಿಸಿದರು. ಸ್ತ್ರೀಸಮಾನತೆಯ ಪರವಾಗಿಯೂ ದನಿ ಎತ್ತಿದ್ದರು ಎಂದು ಅನುರಾಧಾ ಹೇಳಿದರು.
ಪ್ರಕೃತಿಯಲ್ಲೇ ದೇವರನ್ನು ಕಂಡರು
ವಿಶೇಷ ಉಪನ್ಯಾಸ ನೀಡಿದ ಹಿರಿಯಡಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಡಾ| ನಿಕೇತನ ಅವರು “ದಾಸಿಮಯ್ಯ ಅವರು ಪ್ರಕೃತಿಯಲ್ಲೇ ದೇವರನ್ನು ಕಂಡವರು. ಆದಿ ಪ್ರಕೃತಿ ಮತ್ತು ಜೀವ ಪ್ರಕೃತಿಯ ಮೂಲಕ ನಿಸರ್ಗ ಮತ್ತು ಮನುಷ್ಯ ಸಂಬಂಧವನ್ನು ನಿರೂಪಿಸಿದ್ದಾರೆ. ಪ್ರತಿಯೊಂದು ಕಾಯಕವೂ ಪವಿತ್ರ ಎಂದಿದ್ದ ದಾಸಿಮಯ್ಯ ಮಾನವೀಯತೆಯನ್ನು ಕೂಡ ಪ್ರತಿಪಾದಿಸಿದ್ದರು. ದೇಹ ಮಣ್ಣಾಗುವ ಮೊದಲೇ ಪಾರಮಾರ್ಥಿಕ ಸತ್ಯ ತಿಳಿಯಬೇಕೆಂಬ ನಿಲುವು ಅವರದಾಗಿತ್ತು’ ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ನಾಗೇಶ್ ರಾಯ್ಕರ್, ಜಿಲ್ಲಾ ವಾರ್ತಾಧಿಕಾರಿ ರೋಹಿಣಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪೂರ್ಣಿಮಾ ಉಪಸ್ಥಿತರಿದ್ದರು. ಶಂಕರ್‌ದಾಸ್ ನಿರೂಪಿಸಿದರು.
ಆದ್ಯ ವಚನಕಾರ
ದೇವರ ದಾಸಿಮಯ್ಯ ಅವರು 1165ನೇ ಇಸವಿಯಲ್ಲಿ ಬದುಕಿದ್ದ ಆದ್ಯವಚನಕಾರರು. ಅನಂತರ ವಚನ ಚಳವಳಿಯೇ ಉಂಟಾಯಿತು. ನೇಕಾರ ವೃತ್ತಿಯ ಜತೆಗೆ ಪಾರಮಾರ್ಥಿಕ ಸಾಧನೆ ಮಾಡಿದ ದಾಸಿಮಯ್ಯ ಅವರು 150ಕ್ಕೂ ಅಧಿಕ ವಚನಗಳನ್ನು ರಚಿಸಿರುವ ಮಾಹಿತಿ ಸಂಶೋಧನೆಗಳಿಂದ ಲಭ್ಯವಾಗಿದೆ. ಅವರ ಚಿಂತನೆಗಳು ವಿಶ್ವಭಾÅತೃತ್ವ, ವಿಶ್ವಪ್ರೀತಿಯನ್ನು ಸಾಂಕೀತಿಸುತ್ತವೆ.
– ಡಾ| ನಿಕೇತನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
ಉಡುಪಿ: ಶಿಕ್ಷಣ ಇಲಾಖೆಯಲ್ಲಿ ಪ್ರತ್ಯೇಕ ಪರಿಹಾರ ನಿಧಿಯೇ ಇಲ್ಲ !
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.