ಮೀನುಗಾರರ ಗ್ರಾಮಗಳ ಅಭಿವೃದ್ಧಿ
ಕೇಂದ್ರ ಮೀನುಗಾರಿಕೆ ಸಹಾಯಕ ಸಚಿವ ಮುರುಗನ್ ಅವರಿಂದ ಬಂದರಿಗೆ ಭೇಟಿ, ಮೀನು ಕೃಷಿ ಘಟಕಗಳ ಪರಿಶೀಲನೆ
Team Udayavani, Oct 18, 2021, 7:05 AM IST
ಉಡುಪಿ: ಮೀನುಗಾರರು ಹೆಚ್ಚಿನ ಸಂಖ್ಯೆಯಲ್ಲಿ ವಾಸವಿರುವ ಗ್ರಾಮಗಳನ್ನು ಗುರುತಿಸಿ, ಆ ಗ್ರಾಮಗಳಲ್ಲಿ ಮೀನುಗಾರರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಿ ಅಭಿವೃದ್ಧಿಪಡಿಸಲು ತಲಾ 7.5 ಕೋ.ರೂ. ಅನುದಾನ ನೀಡುವ ನೂತನ ಯೋಜನೆ ಜಾರಿಗೊಳಿಸಲಾಗುವುದು ಎಂದು ಕೇಂದ್ರ ಮೀನುಗಾರಿಕೆ ರಾಜ್ಯ ಸಚಿವ ಡಾ| ಎಲ್. ಮುರುಗನ್ ಹೇಳಿದರು.
ರವಿವಾರ ಮಲ್ಪೆ ಬಂದರಿಗೆ ಭೇಟಿ ನೀಡಿದ ಅವರು ಮೀನುಗಾರರೊಂದಿಗೆ ಸಂವಾದ ನಡೆಸಿದರು.ಕೇಂದ್ರ ಸರಕಾರದ ಮೂಲಕ ಮೀನು ಗಾರರು ಹೆಚ್ಚಿನ ಸಂಖ್ಯೆಯಲ್ಲಿರುವ ಗ್ರಾಮಗಳಲ್ಲಿ ಮೀನುಗಾರರಿಗೆ ಅಗತ್ಯ ಮೂಲ ಸೌಕರ್ಯ, ಮೀನುಗಾರಿಕಾ ಚಟುವಟಿಕೆ ಮತ್ತು ಮಕ್ಕಳ ಶೈಕ್ಷಣಿಕ ಚಟುವಟಿಕೆಗಳ ಅಭಿವೃದ್ದಿಗೆ ಅನುಕೂಲವಾಗುವ ಕಾಮಗಾರಿ ಕೈಗೊಳ್ಳಲು ಈ ಅನುದಾನ ಬಳಸಿಕೊಳ್ಳ ಲಾಗುವುದು. ಶೀಘ್ರದಲ್ಲಿ ಮೀನುಗಾರರ ಗ್ರಾಮ ಗಳನ್ನು ಗುರುತಿಸುವ ಕಾರ್ಯ ಆರಂಭವಾಗಲಿದೆ ಎಂದರು.
ಸಮಸ್ಯೆ ಪರಿಹಾರಕ್ಕೆ ಯತ್ನ
ಮೀನುಗಾರಿಕೆ ಸಚಿವ ಎಸ್.ಅಂಗಾರ ಮಾತನಾಡಿ, ರಾಜ್ಯದ ಮೀನುಗಾರಿಕಾ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಗಿದೆ. ಮೀನುಗಾರರ ವಿವಿಧ ಬೇಡಿಕೆಗಳ ಕುರಿತು ಕೇಂದ್ರ ಮತ್ತು ರಾಜ್ಯ ಸರಕಾರದ ಮಟ್ಟದಲ್ಲಿ ಚರ್ಚಿಸಲಾಗುವುದು. ಮೀನುಗಾರರ ಅಭಿ ವೃದ್ದಿಗೆ ಕೇಂದ್ರಕ್ಕೆ ಈಗಾಗಲೇ 16 ಪ್ರಸ್ತಾ ವನೆಗಳನ್ನು ಕಳುಹಿಸಲಾಗಿದೆ ಎಂದರು.
ಸಚಿವರಿಗೆ ಮನವಿ
ಶಾಸಕ ಕೆ.ರಘುಪತಿ ಭಟ್ ಮಾತನಾಡಿ, ಪ್ರಸ್ತುತ ಮೀನುಗಾರಿಕಾ ಕ್ಷೇತ್ರ ಅತ್ಯಂತ ಸಂಕಷ್ಟದಲ್ಲಿದೆ. ಮೀನುಗಾರರಿಗೆ ನೀಡುವ ಡೀಸೆಲ್ ಮೇಲಿನ ತೆರಿಗೆ ಕಡಿತ ಮಾಡಬೇಕು. ನಾಡದೋಣಿಗಳಿಗೆ ಸೀಮೆಎಣ್ಣೆ ವಿತರಣೆ ಮಾಡಬೇಕು. ಡ್ರೆಜ್ಜಿಂಗ್ ಸಮಸ್ಯೆ ಬಗೆಹರಿಸಬೇಕು. ಬೋಟ್‌ಗಳಿಗೆ ವಿಧಿಸುವ ರೋಡ್ ಸೆಸ್‌ನಿಂದ ರಿಯಾಯತಿ ನೀಡಬೇಕು ಎಂದು ಕೇಂದ್ರ ಸಚಿವರಲ್ಲಿ ಮನವಿ ಮಾಡಿದರು. ಮೀನುಗಾರ ರವಿರಾಜ್ ಸುವರ್ಣ ಮಾತನಾಡಿ, ಸಮುದ್ರ ಮಧ್ಯೆ ಆರೋಗ್ಯ ಸಮಸ್ಯೆ ಉಂಟಾದಲ್ಲಿ ಮೀನುಗಾರರ ರಕ್ಷಣೆಗೆ ಸೀ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡುವಂತೆ ಕೋರಿದರು.
ಇದನ್ನೂ ಓದಿ:ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ
ಶಾಸಕ ಲಾಲಾಜಿ ಆರ್.ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಡಿಸಿ ಕೂರ್ಮಾರಾವ್, ಜಿ.ಪಂ. ಸಿಇಒ ಡಾ| ನವೀನ್ ಭಟ್, ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್‌ಪಾಲ್ ಸುವರ್ಣ, ಮೀನುಗಾರಿಕಾ ಇಲಾಖೆ ನಿರ್ದೇಶಕ ರಾಮಾಚಾರ್ಯ, ಕೆಎಫ್ಡಿಸಿ ಅಧ್ಯಕ್ಷ ನಿತಿನ್ ಕುಮಾರ್, ವ್ಯವಸ್ಥಾಪಕ ನಿರ್ದೇಶಕ ದೊಡ್ಡಮನಿ, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ದಯಾನಂದ ಸುವರ್ಣ ಹಾಜರಿದ್ದರು.ಇಲಾಖೆಯ ಅಧಿಕಾರಿಗಳಾದ ಗಣೇಶ್ ಸ್ವಾಗತಿಸಿದರು. ಶಿವಕುಮಾರ್ ನಿರೂಪಿಸಿ, ತಿಪ್ಪೇಸ್ವಾಮಿ ವಂದಿಸಿದರು.
ಮೀನುಗಾರಿಕಾ ಚಟುವಟಿಕೆಗೆ 725 ಕೋ.ರೂ. ಹೂಡಿಕೆ
ಕರ್ನಾಟಕದಲ್ಲಿ ಮೀನುಗಾರಿಕಾ ಚಟುವಟಿಕೆಗಳ ಅಭಿವೃದ್ಧಿಗಾಗಿ ಕೇಂದ್ರ ಸರಕಾರದಿಂದ ಮುಂದಿನ 5 ವರ್ಷದಲ್ಲಿ 725 ಕೋ.ರೂ.ಗಳ ಹೂಡಿಕೆ ಮಾಡಲಾಗುವುದು. ಹೆಜಮಾಡಿಯಲ್ಲಿ ಬಂದರು ನಿರ್ಮಾಣ ಕಾರ್ಯಕ್ಕೆ ಈಗಾಗಲೇ ಅನುಮೋದನೆ ದೊರೆತಿದೆ ಎಂದು ಸಚಿವರು ತಿಳಿಸಿದರು.
ಐದು ಬಂದರುಗಳ ಅಭಿವೃದ್ಧಿ
ದೇಶದ 5 ಬಂದರುಗಳನ್ನು ಅಂತಾರಾಷ್ಟ್ರೀಯ ಸೌಲಭ್ಯಗಳೊಂದಿಗೆ ಅಭಿವೃದ್ದಿ ಪಡಿಸ ಲಾಗುತ್ತಿದೆ. ಈ ಬಂದರಿನಲ್ಲಿ ಮೀನುಗಾರರಿಗೆ ಅಗತ್ಯ ಮೂಲ ಸೌಕರ್ಯ, ಆಸ್ಪತ್ರೆ, ಐಸ್ ಪ್ಲಾಂಟ್ ಸಹಿತ ಎಲ್ಲ ರೀತಿಯ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.