V. Somanna ಕರಾವಳಿಯ ಎರಡು ರೈಲು ನಿಲ್ದಾಣ ಅಭಿವೃದ್ಧಿ
Team Udayavani, Aug 16, 2024, 12:00 AM IST
ಕಾಪು: ರಾಜ್ಯದ ಶ್ರವಣಬೆಳಗೊಳ ಮತ್ತು ಗುಬ್ಬಿ ರೈಲು ನಿಲ್ದಾಣ ಸಹಿತ 64 ರೈಲ್ವೇ ನಿಲ್ದಾಣಗಳ ಅಭಿವೃದ್ಧಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು.
ಗುರುವಾರ ಕಾಪುವಿಗೆ ಭೇಟಿ ನೀಡಿದ ಸಂದರ್ಭ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ನೀಡಿದ ಮನವಿ ಸ್ವೀಕರಿಸಿ ಅವರು ಮಾತನಾಡಿದರು.
ಕರಾವಳಿ ಭಾಗ ನಮ್ಮ ಹೃದಯವಿದ್ದಂತೆ. ಇಲ್ಲಿನ ರೈಲು ನಿಲ್ದಾಣಗಳನ್ನು ಅಭಿವೃದ್ಧಿ ಪಡಿಸಿ ಉನ್ನತೀಕರಣಗೊಳಿಸುವುದು ಇಲಾಖೆಯ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ. ಹಾಗಾಗಿ ಜನರ ಬೇಡಿಕೆ ಮತ್ತು ಶಾಸಕರ ಮನವಿಯಂತೆ ಮುಂದಿನ ದಿನಗಳಲ್ಲಿ ಕರಾವಳಿಯ ಎರಡು ರೈಲು ನಿಲ್ದಾಣಗಳನ್ನೂ ಈ ಪಟ್ಟಿಯಲ್ಲಿ ಹೆಚ್ಚುವರಿಯಾಗಿ ಸೇರಿಸಿ ಅಭಿವೃದ್ಧಿಪಡಿಸಲಾಗುವುದು ಎಂದರು.
ಕರಾವಳಿಗೆ ಶೀಘ್ರ ಶುಭ ಸುದ್ಧಿ : ರೈಲ್ವೇ ರಾಜ್ಯ ಖಾತೆಯ ಸ್ವತಂತ್ರ ಸಚಿವನಾಗಿ ಎರಡು ವಾರಗಳ ಹಿಂದೆ ಮಂಗಳೂರಿಗೆ ಬಂದು ಸಂಸದರಾದ ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ ಪೂಜಾರಿ, ಶಾಸಕರುಗಳ ಉಪಸ್ಥಿತಿಯಲ್ಲಿ ರೈಲ್ವೇ ಅಽಕಾರಿಗಳೊಂದಿಗೆ ಮಾತುಕತೆ ನಡೆಸಲಾಗಿದೆ. ಇಲ್ಲಿ ಬಂದ ಅಭಿಪ್ರಾಯವನ್ನು ರೈಲ್ವೇ ಸಚಿವ ಅಶ್ವಿನ್ ವೈಷ್ಣವ್ ಅವರಿಗೂ ವರದಿ ಮಾಡಿದ್ದೇವೆ. ಎಂಟು ದಿನಗಳಲ್ಲಿ ರೈಲ್ವೇ ಅಽಕಾರಿಗಳು ಇಲ್ಲಿಗೆ ಭೇಟಿ ನೀಡಿ ಅದಕ್ಕೆ ಸಂಬಂಧಪಟ್ಟ ಸರ್ವೆ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಿದ್ದಾರೆ. ಮುಂದಿನ ದಿನಗಳಲ್ಲಿ ಕರಾವಳಿಗೆ ಶುಭ ಸುದ್ಧಿ ದೊರಕಲಿದೆ ಎಂದರು.
ಕಾಪು ವಿಧಾನಸಭಾ ಕ್ಷೇತ್ರದ ರೈಲ್ವೇ ನಿಲ್ದಾಣಗಳ ಕುಂದು ಕೊರತೆಗಳು, ಇಲ್ಲಿ ಓಡಾಡುವ ರೈಲುಗಳು ಹಾಗೂ ಪಡುಬಿದ್ರಿ (ಬೆಳಪು) ರೈಲು ನಿಲ್ದಾಣದಲ್ಲಿ ಮುಂಬಯಿಗೆ ತೆರಳುವ ಮತ್ಸ ಗಂಧ ಮತ್ತು ಬೆಂಗಳೂರು ರೈಲುಗಳ ನಿಲುಗಡೆಗೆ ಅವಕಾಶ ಮಾಡಿಕೊಡುವ ಬಗ್ಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಮನವಿ ನೀಡಿದ್ದಾರೆ. ಅವರ ಮನವಿಯಂತೆ ರೈಲ್ವೇ ಮಂತ್ರಿಯಾಗಿ ಯಾವ ರೀತಿಯಲ್ಲಿ ಕೆಲಸ ಮಾಡಬಹುದು ಎನ್ನುವುದರ ಬಗ್ಗೆ ಯೋಚಿಸುತ್ತೇನೆ. ಸಂಸದರು, ಅಽಕಾರಿಗಳೊಂದಿಗೆ ಚರ್ಚೆ ನಡೆಸಿ, ಇಲ್ಲಿ ಯಾವ ರೈಲುಗಳ ನಿಲುಗಡೆಗೆ ಅವಕಾಶ ಮಾಡಿಕೊಡಬಹುದು ಎನ್ನುವುದರ ಬಗ್ಗೆ ಪರಿಶೀಲನೆ ನಡೆಸುತ್ತೇನೆ ಎಂದು ಭರವಸೆ ನೀಡಿದರು.
ರೈಲು ನಿಲ್ದಾಣಕ್ಕೆ ಹೋಗುವ ರಸ್ತೆಗಳು ದುರಸ್ತಿಗೊಳ್ಳದಿರುವ ಬಗ್ಗೆ ಸಚಿವರ ಗಮನ ಸೆಳೆದಾಗ, ಈ ಬಗ್ಗೆ ಸ್ಥಳೀಯ ಸಂಸದರೊಂದಿಗೆ ಚರ್ಚಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಉದಯವಾಣಿ ಲೇಖನದ ಪ್ರತಿ ಹಸ್ತಾಂತರ : ಈ ಸಂದರ್ಭ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಆ. ೫ರ ಉದಯವಾಣಿ ಸುದಿನದಲ್ಲಿ ಬೆಳಪು ರೈಲು ನಿಲ್ದಾಣದ ಬಗ್ಗೆ ಪ್ರಕಟಗೊಂಡ ವಿಶೇಷ ಲೇಖನದ ಪ್ರತಿಯನ್ನು ಸಚಿವ ಸೋಮಣ್ಣ ಅವರಿಗೆ ಹಸ್ತಾಂತರಿಸಿ, ರೈಲ್ವೇ ಇಲಾಖೆ ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಿದರು.
ಕುಂದಾಪುರ ಉಪವಿಭಾಗಾಧಿಕಾರಿ ಮಹೇಶ್ಚಂದ್ರ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಜಿಲ್ಲಾ ಕ್ತಾರೆ ಗೀತಾಂಜಲಿ ಎಂ. ಸುವರ್ಣ, ವಿವಿಧ ಜನಪ್ರತಿನಿಧಿಗಳು ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.