ಪ್ರಮುಖ ದೇವಸ್ಥಾನಗಳಲ್ಲಿ ದಾಖಲೆಯ ಭಕ್ತರು

ದೀಪಾವಳಿ ಹಬ್ಬದ ಸಂಭ್ರಮ: ವಿವಿಧ ತೀರ್ಥಕ್ಷೇತ್ರಗಳು, ಪ್ರವಾಸಿ ತಾಣಗಳಲ್ಲಿ ಜನದಟ್ಟಣೆ

Team Udayavani, Nov 16, 2020, 5:29 AM IST

Temple

ಮಂಗಳೂರು/ ಉಡುಪಿ: ಸರಣಿ ರಜೆಯ ಹಿನ್ನೆಲೆಯಲ್ಲಿ ಧಾರ್ಮಿಕ ಕ್ಷೇತ್ರಗಳತ್ತ ಭಕ್ತರ ದಂಡೇ ಹರಿದು ಬರಲಾರಂಭಿಸಿದೆ.

ಉಡುಪಿ ಶ್ರೀಕೃಷ್ಣ ಮಠ
ಉಡುಪಿ ಶ್ರೀಕೃಷ್ಣ ಮಠದಲ್ಲಿ ರವಿವಾರ ಕೊರೊನಾ ಬಳಿಕ ದಾಖಲೆ ಸಂಖ್ಯೆಯ ಭಕ್ತರು ಭೇಟಿ ನೀಡಿ ದೇವರ ದರ್ಶನ ಪಡೆದರು. 5,000ಕ್ಕೂ ಹೆಚ್ಚು ಭಕ್ತರು ಆಗಮಿಸಿದ್ದರು.
ಮಾ. 22ರ ಬಳಿಕ ಕೊರೊನಾ ಕಾರಣದಿಂದ ಮಠಕ್ಕೆ ಭಕ್ತರ ಭೇಟಿಯನ್ನು ರದ್ದು ಗೊಳಿಸಲಾಗಿತ್ತು. ಸೆ.28ರಿಂದ ಅಪರಾಹ್ನ 2 ಗಂಟೆ ಅವಧಿ ಮಾತ್ರ ದರ್ಶನಕ್ಕೆ ಅವಕಾಶ ಮಾಡಿ ಕೊಡಲಾ ಯಿತು, ಬಳಿಕ ನ. 4ರಿಂದ ಬೆಳಗ್ಗೆ ಸಮಯ ದಲ್ಲಿಯೂ ಮತ್ತೆರಡುಗಂಟೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ಈಗ ದೀಪಾವಳಿ ಹಬ್ಬದ ಪ್ರಯುಕ್ತ
ದೂರದೂರುಗಳ ಭಕ್ತರಿಗೆ ಅನುಕೂಲವಾಗಲೆಂದು ಹೆಚ್ಚು ಸಮಯ ದರ್ಶನಕ್ಕೆ ಅವಕಾಶ ನೀಡಲಾಗಿದೆ.

ಧರ್ಮಸ್ಥಳ, ಸೌತಡ್ಕ
ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿ ಸೇರಿದಂತೆ ಬೆಳ್ತಂಗಡಿ ತಾಲೂಕಿನ ಸೌತಡ್ಕ ಮಹಾಗಣಪತಿ ದೇವಸ್ಥಾನ, ಮಣ್ಣಿನ ಹರಕೆ ಪ್ರಸಿದ್ಧಿಯ ಸುರ್ಯ ಸದಾಶಿವರುದ್ರ ದೇವಸ್ಥಾನ ಮೊದಲಾದೆಡೆ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಧರ್ಮಸ್ಥಳದಲ್ಲಿ ಶನಿವಾರ 10 ಸಾವಿರಕ್ಕೂ ಅಧಿಕ ಭಕ್ತರು ದೇವರ ದರ್ಶನ ಪಡೆದು ಅನ್ನಪ್ರಸಾದ ಸ್ವೀಕರಿಸಿದ್ದಾರೆ. ಸೋಮವಾರ ಭಕ್ತರ ಸಂಖ್ಯೆ ಮತ್ತಷ್ಟು ಏರಿಕೆಯಾಗಲಿದೆ.  ಹಾಸನ ಮೊದಲಾದೆಡೆಗಳಿಂದ ಬಂದ ಹೂ ಮಾರಾಟಗಾರರು ಈ ವರ್ಷ ಹಿಂದೆಂದಿಗಿಂತಲೂ ಅಧಿಕ ಸಂಖ್ಯೆಯಲ್ಲಿ ವ್ಯಾಪಾರದಲ್ಲಿ ತೊಡಗಿರುವುದು ಕಂಡುಬಂತು. ಕಟೀಲು ಕಟೀಲಿನ ಶ್ರೀ ದುರ್ಗಾ ಪರಮೇಶ್ವರೀ ದೇವಸ್ಥಾನಕ್ಕೆ ರವಿವಾರ 8ರಿಂದ 10 ಸಾವಿರ ಭಕ್ತರು ಭೇಟಿ ನೀಡಿ ದೇವಿಯ ದರ್ಶನ ಪಡೆದು ವಿವಿಧ ಸೇವೆಗಳನ್ನು ಸಲ್ಲಿಸಿದರು.

ಕುಕ್ಕೆ ಕ್ಷೇತ್ರ: ತುಲಾಭಾರ, ಅನ್ನಪ್ರಾಶನ ಆರಂಭ
ಸುಬ್ರಹ್ಮಣ್ಯ: ನಾಗಾರಾಧನೆಯ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನ. 15ರಿಂದ ತುಲಾಭಾರ ಮತ್ತು ಅನ್ನಪ್ರಾಶನ ಸೇವೆಗಳು ಆರಂಭ ಗೊಂಡಿವೆ.
ಕೊರೊನಾ ಕಾಲ ದಲ್ಲಿ ಸ್ಥಗಿತಗೊಂಡಿದ್ದ ಕೆಲವು ಪ್ರಮುಖ ಸೇವೆಗಳನ್ನು ತಿಂಗಳ ಹಿಂದೆ ಆರಂಭಿಸಿದ್ದರೂ ಈ ಎರಡು ಸೇವೆಗಳು ಆರಂಭವಾಗಿರಲಿಲ್ಲ. ಇದೀಗ ಎಲ್ಲ ಸೇವೆಗಳು ಪ್ರಾರಂಭಗೊಂಡಂತಾಗಿದೆ. ದೀಪಾವಳಿಯ ಶುಭ ದಿನವಾದ ರವಿವಾರ ಲಾಕ್‌ಡೌನ್‌ ಬಳಿಕ ನಡೆದ ಪ್ರಥಮ ತುಲಾಭಾರ ಸೇವೆಯಲ್ಲಿ 23 ಭಕ್ತರು ತುಲಾಭಾರ ಮಾಡಿಸಿಕೊಂಡರು.

ಇಂದಿನಿಂದ ಉತ್ಸವ
ಕುಕ್ಕೆಯಲ್ಲಿ ಸೋಮವಾರ ದೇವರು ಹೊರಾಂಗಣ ಪ್ರವೇಶಿಸುವ ಮೂಲಕ ಉತ್ಸವಗಳು ಆರಂಭಗೊಳ್ಳಲಿವೆ. ದೀಪಾವಳಿ ಪ್ರಯುಕ್ತ ಪಾಲಕಿ ಮತ್ತು ಬಂಡಿ ಉತ್ಸವ ನೆರವೇರಲಿದೆ.

ಟಾಪ್ ನ್ಯೂಸ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

puttige-5

Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ

13

Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್‌ಅಪ್‌

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

drowned

Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.