ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಿಂದ ವಿವಿಧ ಕಾರ್ಯಕ್ರಮ
Team Udayavani, Jan 9, 2019, 8:25 PM IST
ಉಡುಪಿ: ಉಡುಪಿ ಜಿಲ್ಲೆಯಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಿಂದ ವಿವಿಧ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಡಾ| ವನಿತಾ ತೊರವಿ ತಿಳಿಸಿದ್ದಾರೆ. ಅವರು ಬುಧವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸರಕಾರಿ ಶಾಲೆಗಳ ಉನ್ನತೀಕರಣ ಮತ್ತು ಜಾಗೃತಿ ಕಾರ್ಯಕ್ರಮದಡಿ ತಾಲೂಕು ಮಟ್ಟದ ಸರಕಾರಿ ಶಾಲೆಗಳಲ್ಲಿ ಕಲಿತ ವಿದ್ಯಾರ್ಥಿಗಳಿಂದ ಹಳೆ ವಿದ್ಯಾರ್ಥಿ ಸಂಘಗಳ ಉದ್ಘಾಟನೆ ಮತ್ತು ಶಾಲೆಯ ಬೆಳವಣಿಗೆಗೆ ಕೊಡುಗೆ ನೀಡಿರುವ ಸಂಘಕ್ಕೆ ಸಮ್ಮಾನ ಮಾಡುವ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾಮಟ್ಟದಲ್ಲಿ ‘ನಾ ಕಲಿತ ಶಾಲೆಯ ತೀರಿಸುವೆ ಋಣವ- ಇದು ನನ್ನ ಜವಾಬ್ದಾರಿ’ ಎಂಬ ಕಾರ್ಯಕ್ರಮದಡಿ ಪ್ರತಿ ಶಾಲೆಯ ಹಳೆ ವಿದ್ಯಾರ್ಥಿಗಳ ಸಂಘಗಳ ಸದಸ್ಯರನ್ನು ಆಹ್ವಾನಿಸಿ, ಸಂಘದ ಜವಾಬ್ದಾರಿ ಮತ್ತು ಕರ್ತವ್ಯಗಳ ಕುರಿತಂತೆ ಚರ್ಚಿಸಲಾಗುವುದು. ಸರಕಾರಿ ಶಾಲೆಗಳ ಗುಣಮಟ್ಟ ಹೆಚ್ಚಿಸುವುದು, ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸುವುದು, ಕನ್ನಡ ಭಾಷೆಯನ್ನು ಬೆಳಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ತಿಳಿಸಿದರು. ಮಕ್ಕಳ ಸ್ನೇಹಿ ಮಾಧ್ಯಮ ಕಾರ್ಯಕ್ರಮದಡಿಯಲ್ಲಿ ಜಿಲ್ಲೆಯ ಎಲ್ಲಾ ಪತ್ರಿಕಾ ಮತ್ತು ದೃಶ್ಯ ಮಾಧ್ಯಮಮಿತ್ರರಿಗೆ ಮಕ್ಕಳ ಹಕ್ಕುಗಳ ಕುರಿತಾದ ಕಾಯ್ದೆಗಳ ಕುರಿತು ಕಾರ್ಯಾಗಾರ ಏರ್ಪಡಿಸಲಾಗುವುದು ಎಂದು ಹೇಳಿದರು.
ಮಕ್ಕಳ ಹಕ್ಕುಗಳ ರಕ್ಷಣೆ ಕುರಿತು ವಿದ್ಯಾರ್ಥಿಗಳಿಂದ ಬೃಹತ್ ಜಾಥಾ ನಡೆಯಲಿದೆ. ಅನಂತರ ನಡೆಯುವ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಅಧಿಕಾರಿಗಳು, ಸ್ವಯಂಸೇವಾ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಲಿದ್ದು, ‘ಸಂದಿಗ್ಧ’ ಚಲನಚಿತ್ರ ಪ್ರದರ್ಶನ ಕಾರ್ಯಕ್ರಮ ಏರ್ಪಡಿಸಲಾಗುವುದು ಎಂದರು. ಪೊಲೀಸ್ ಅಧಿಕಾರಿಗಳಿಗೆ ಮಕ್ಕಳ ಹಕ್ಕುಗಳ ಕಾಯ್ದೆಗಳಿಗೆ ಸಂಬಂಧಿಸಿ ತರಬೇತಿ ಮತ್ತು ಮಕ್ಕಳ ಕಲ್ಯಾಣ ಸಮಿತಿ ಮತ್ತು ಸರಕಾರೇತರ ಸಂಘ ಸಂಸ್ಥೆಗಳೊಂದಿಗೆ ಸಮನ್ವಯತೆ ಸಾಧಿಸಲು ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗುವುದು ಮತ್ತು ಜಿಲ್ಲೆಯ ಎಲ್ಲಾ ಇಲಾಖೆಗಳಲ್ಲಿ ಮಕ್ಕಳಿಗೆ ಸಂಬಂಧಿಸಿದಂತೆ ಸಮಸ್ಯೆಗಳ ಕುರಿತು, ಮಕ್ಕಳಿಂದ ಅಹವಾಲು ಸ್ವೀಕರಿಸಿ, ಎಲ್ಲಾ ಅಧಿಕಾರಿಗಳ ಸಮ್ಮುಖದಲ್ಲಿ ಅಹವಾಲುಗಳಿಗೆ ಸೂಕ್ತ ಪರಿಹಾರ ಒದಗಿಸುವ ಕಾರ್ಯಕ್ರಮ ರೂಪಿಸಲಾಗಿದೆ ಎಂದು ವನಿತಾ ತೊರವಿ ತಿಳಿಸಿದರು. ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.