ಉಡುಪಿಯಲ್ಲಿ  16 ಸಾವಿರ ಬಿಪಿಎಲ್‌ ಕಾರ್ಡ್‌ ವಿತರಣೆ


Team Udayavani, Jul 22, 2017, 8:25 AM IST

210717pp1.gif

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಳೆದ 4 ವರ್ಷಗಳಿಂದ 16 ಸಾವಿರ ಬಡಕುಟುಂಬಗಳಿಗೆ ಬಿಪಿಎಲ್‌ ಕಾರ್ಡ್‌ ವಿತರಿಸಲಾಗಿದೆ. ಈಗ ಬಿಪಿಎಲ್‌ ಕಾರ್ಡ್‌ಗೆ ಅರ್ಜಿ ಸಲ್ಲಿಕೆ ವಿಧಾನವನ್ನು ಸುಲಭಗೊಳಿಸಲಾಗಿದೆ. ಆಧಾರ್‌ ಕಾರ್ಡ್‌, ವಾರ್ಷಿಕ ಆದಾಯ1.20 ಲ. ರೂ. ಹಾಗೂ 1000 ಚದರಡಿಯೊಳಗಿದ್ದವರು ಬಿಪಿಎಲ್‌ ಕಾರ್ಡ್‌ ಪಡೆಯಬಹುದು ಎಂದು ಮೀನು ಗಾರಿಕಾ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್‌ ಮಧ್ವರಾಜ್‌ ಹೇಳಿದರು. 

ಪರ್ಕಳದ ವಿಘ್ನೇಶ್ವರ ಸಭಾಭವನ ದಲ್ಲಿ ಶುಕ್ರವಾರ ನಡೆದ ನಗರಸಭಾ ವ್ಯಾಪ್ತಿಯ ಪರ್ಕಳ ವಾರ್ಡಿನ ಜನಸಂಪರ್ಕ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. 

ಮನೆಯಿಲ್ಲದವರಿಗೆ ಮನೆ ಕಟ್ಟಲು 2.70 ಲ. ರೂ. ಹಾಗೂ ಎಸ್‌ಸಿ ಹಾಗೂಎಸ್‌ಟಿ ವರ್ಗದವರಿಗೆ 3.30 ಲ. ರೂ.
ಅನುದಾನ ನೀಡಲಾಗುತ್ತಿದೆ.ಹೆರ್ಗದಲ್ಲಿ 10 ಎಕರೆ ಸೈಟ್‌ಗುರುತಿಸ ಲಾಗಿದ್ದು, ವಸತಿ ರಹಿತ 400 ಮಂದಿಗೆ 2 ತಿಂಗಳೊಳಗೆ ಅದನ್ನು ನೀಡಲಾಗುವುದು ಎಂದರು.

ಛೀಮಾರಿ ಹಾಕಿದ್ರೂ ಬಸ್‌ ನಿಲ್ಲಿಸಲ್ಲ
ಖಾಸಗಿಯವರ ಭಾರೀ ಲಾಬಿ ನಡುವೆಯೂ ಜಿಲ್ಲೆಗೆ ತಂದಿರುವ ಜೆ- ನರ್ಮ್ಬಸ್‌ಗಳ ಪರವಾನಿಗೆಗೆ ಹೈಕೋರ್ಟ್‌ ತಡೆ ನೀಡಿದ್ದು, ಸದ್ಯ ಕೋರ್ಟ್‌ ಆರ್‌ಟಿಎಗೆ ಪುನರ್‌ ಪರಿಶೀಲನೆಗೆ ಅವಕಾಶ ನೀಡಿದೆ. ಈಗ ಜಿಲ್ಲಾಧಿಕಾರಿಯವರು ಎಲ್ಲ 55 ಬಸ್‌ಗಳಿಗೂ ತಾತ್ಕಾಲಿಕ ಪರ್ಮಿಟ್‌ ನೀಡಿ ಶೀಘ್ರ ಆದೇಶ ಹೊರಡಿಸಲಿದ್ದಾರೆ. ಹಿರಿಯರು, ಮಕ್ಕಳಿಗೆ, ಜನ ಸಾಮಾನ್ಯರಿಗೆ ನರ್ಮ್ ಬಸ್‌ನಿಂದ ಸಾಕಷ್ಟು ಅನುಕೂಲವಾಗು ತ್ತಿದೆ. ಹೈಕೋರ್ಟ್‌ ಛೀಮಾರಿ ಹಾಕಿ ದರೂ ಬಸ್‌ ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಸಚಿವರು ಹೇಳಿದರು. 

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ. ನರಸಿಂಹಮೂರ್ತಿ, ನಗರಸಭಾಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಸದಸ್ಯರಾದ ಸುಮಿತ್ರಾ ಆರ್‌. ನಾಯಕ್‌, ಜನಾರ್ದನ ಭಂಡಾರ್ಕರ್‌, ನಾರಾಯಣ ಕುಂದರ್‌, ಗಣೇಶ್‌ ನೆರ್ಗಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸತೀಶ್‌ ಅಮೀನ್‌ ಪಡುಕೆರೆ, ಉಡುಪಿ ತಹಶೀಲ್ದಾರ್‌ ಮಹೇಶ್ಚಂದ್ರ, ಸರ್ಕಲ್‌ ಇನ್ಸ್‌ಪೆಕ್ಟರ್‌ ಸುದರ್ಶನ್‌ ಮತ್ತಿತರರು ಉಪಸ್ಥಿತರಿದ್ದರು. 

ಉಡುಪಿ ಪೌರಾಯುಕ್ತ ಡಿ. ಮಂಜುನಾಥಯ್ಯ ಸ್ವಾಗತಿಸಿದರು. ಸುಧಾಕರ್‌ ಪೆರಂಪಳ್ಳಿ ಕಾರ್ಯಕ್ರಮ ನಿರ್ವಹಿಸಿದರು. ಸುಧಾಕರ್‌ ಶೆಟ್ಟಿ ವಂದಿಸಿದರು. 

ಪರ್ಕಳ ರಸ್ತೆ : ಕೇಂದ್ರಕ್ಕೆ ಪ್ರಸ್ತಾವನೆ 
ಪರ್ಕಳ- ಮಣಿಪಾಲ ರಸ್ತೆ ಅವ್ಯವಸ್ಥೆ ಬಗ್ಗೆ ಮಾತನಾಡಿದ ಸಚಿವ ಪ್ರಮೋದ್‌ ಅವರು ಮಲ್ಪೆಯಿಂದ ತೀರ್ಥಹಳ್ಳಿಯವರೆಗಿನ ರಸ್ತೆ ರಾಷ್ಟ್ರೀಯ ಹೆದ್ದಾರಿಯಾಗಿದ್ದು, ಇದರ ಸಂಪೂರ್ಣ ನಿರ್ವಹಣೆ ಕೇಂದ್ರ ಸರಕಾರದ್ದಾಗಿದೆ. ಅದಾಗಿಯೂ ಜನರ ಸಂಚಾರಕ್ಕೆ ತೊಂದರೆಯಾಗಿರುವುದರಿಂದ ಶೀಘ್ರ ದುರಸ್ತಿಗೆ ರಾಜ್ಯದಿಂದ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು. ಇದೇ ವೇಳೆ ಬೆಂಗಳೂರಿನಿಂದ ಆಗಮಿಸಿದ್ದ ರಾಷ್ಟ್ರೀಯ ಹೆದ್ದಾರಿ ಪಿಡಬ್ಲೂéಡಿ ಮುಖ್ಯ ಎಂಜಿನಿಯರ್‌ ಸಭೆಗೆ ಮಾಹಿತಿ ನೀಡಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಮಳೆ ಕಡಿಮೆಯಾದ ತತ್‌ಕ್ಷಣ ಕಾಮಗಾರಿ ಆರಂಭಿಸಲಾಗುವುದು ಎಂದರು. ಸದ್ಯ ಹೊಂಡ ಮುಚ್ಚಲು ಕ್ರಮ ಕೈಗೊಳ್ಳಿ ಎಂದು ಸಚಿವರು ಸೂಚಿಸಿದರು. 

ಟಾಪ್ ನ್ಯೂಸ್

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

arrested

BC Road; ಎರಡು ತಂಡಗಳ ಮಧ್ಯೆ ಮಾರಾಮಾರಿ: ಇಬ್ಬರ ಬಂಧನ

1-bhatru

Subrahmanya: ಅರ್ಚಕರ ಮನೆಯಿಂದ ನಗ-ನಗದು ಕಳವು

police crime

Gangolli, Ajekaru; ಮಹಿಳೆಯರಿಗೆ ಜೀವ ಬೆದರಿಕೆ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

death

Belthangady : ಸೊಪ್ಪು ತರಲು ಹೋಗಿದ್ದ ವ್ಯಕ್ತಿ ಆಕಸ್ಮಿಕ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.