ಸಿಆರ್‌ಝಡ್ ಮರಳುಗಾರಿಕೆ; ಜಿಲ್ಲಾ ನಿಯೋಗ ಕೇಂದ್ರ ಸಚಿವರ ಭೇಟಿ
Team Udayavani, Nov 15, 2018, 9:04 AM IST
ಉಡುಪಿ: ಸಿಆರ್‌ಝಡ್ ವ್ಯಾಪ್ತಿಯ ಮರಳುಗಾರಿಕೆ ಕುರಿತು ಜಿಲ್ಲಾಡಳಿತವು ರಾಜ್ಯ ಸರಕಾರದ ಮೂಲಕ ಎಸೆದ ಚೆಂಡು ಈಗ ಮತ್ತೆ ಜಿಲ್ಲಾಡಳಿತದ ಅಂಗಣಕ್ಕೆ ಮರಳಲಿದೆ. ಜಿಲ್ಲಾಧಿಕಾರಿಯವರು ಜಿಲ್ಲೆಯಲ್ಲಿ 2011ರ ಮೊದಲು ಸಾಂಪ್ರದಾಯಿಕವಾಗಿ ಮರಳು ತೆಗೆಯುವವರಿಗೆ ಮಾತ್ರ ಮರಳುಗಾರಿಕೆ ನಡೆಸಲು ಅವಕಾಶ ಕೊಡಬೇಕೋ? ಅನಂತರದವರಿಗೂ ಕೊಡಬಹುದೋ? ಸಾಂಪ್ರದಾಯಿಕ ಮರಳು ತೆಗೆಯುವವರನ್ನು ಗುರುತಿಸುವುದು ಹೇಗೆ ಎಂಬ ಕುರಿತು ಸ್ಪಷ್ಟನೆ ಕೋರಿ ಪತ್ರ ಬರೆದಿದ್ದರು. ಬುಧವಾರ ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವ ಡಾ| ಹರ್ಷವರ್ಧನರನ್ನು ಭೇಟಿ ಮಾಡಿದ ಜಿಲ್ಲೆಯ ಜನಪ್ರತಿನಿಧಿಗಳು ಈ ಕುರಿತು ಸಮಸ್ಯೆಗಳನ್ನು ಬಗೆಹರಿಸಲು ಮನವಿ ಮಾಡಿದರು.
ಡಾ| ಹರ್ಷವರ್ಧನ್ ಅವರು ಇಲಾಖೆಯ ಜಂಟಿ ಕಾರ್ಯದರ್ಶಿ ರಿತೇಶ್‌ಕುಮಾರ್ ಸಿಂಗ್, ಶಾ ಅವರನ್ನು ಕರೆಸಿ ಚರ್ಚಿಸಿದರು. ಇಂತಹ ನಿರ್ಧಾರಗಳನ್ನು ರಾಜ್ಯ ಸರಕಾರವೇ ಕೈಗೊಳ್ಳಬೇಕು. 2011ರ ಅನಂತರದ ಸಾಂಪ್ರದಾಯಿಕ ಮರಳು ತೆಗೆಯುವವರಿಗೂ ಕೊಡಬಹುದು ಎಂದು ರಾಜ್ಯ ಸರಕಾರಕ್ಕೆ ಸ್ಪಷ್ಟ ನಿರ್ದೇಶನ ನೀಡುವ ಬಗ್ಗೆ ಡಾ| ಹರ್ಷವರ್ಧನ್ ತಿಳಿಸಿದ್ದಾರೆ ಎಂದು ನಿಯೋಗದಲ್ಲಿದ್ದ ಶಾಸಕ ಕೆ.ರಘುಪತಿ ಭಟ್ ಅವರು ಹೇಳಿದ್ದಾರೆ. ಸಚಿವರೊಂದಿಗಿನ ಮಾತುಕತೆ ವೇಳೆ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ಮೇಲ್ಮನೆ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ವಿಧಾನಸಭೆಯ ವಿಪಕ್ಷ ಮುಖ್ಯ ಸಚೇತಕ ವಿ. ಸುನಿಲ್‌ಕುಮಾರ್, ಶಾಸಕರಾದ ಲಾಲಾಜಿ ಮೆಂಡನ್, ಬಿ.ಎಂ. ಸುಕುಮಾರ ಶೆಟ್ಟಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.