ಸ್ವಾತಂತ್ರೊತ್ಸವಕ್ಕೆ ಮೊದಲು ಜಿಲ್ಲಾ ಉಸ್ತುವಾರಿಗಳ ನೇಮಕ?

Team Udayavani, Jul 28, 2018, 11:40 AM IST

jayamala.jpg

ಉಡುಪಿ: ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರಕಾರ ಅಸ್ತಿತ್ವಕ್ಕೆ ಬಂದು ಎರಡು ತಿಂಗಳಾದರೂ ಜಿಲ್ಲಾ ಉಸ್ತುವಾರಿ ಸಚಿವರ ನೇಮಕವಾಗಿಲ್ಲ ಎಂಬ ಟೀಕೆ ಆರಂಭವಾಗಿರುವ ಮಧ್ಯೆಯೇ ಇನ್ನೊಂದು ವಾರದಲ್ಲಿ ಉಸ್ತುವಾರಿಗಳ ಹೆಸರು ಪ್ರಕಟಣೆಯಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ. 

ಉನ್ನತ ಮೂಲಗಳ ಪ್ರಕಾರ ಉಸ್ತುವಾರಿ ಸಚಿವರ ನೇಮಕ ಆ. 15 ರೊಳಗೆ ಪೂರ್ಣಗೊಳ್ಳುವ ಸಂಭವವಿದೆ. ಅದರಂತೆ ಈ ಹಿಂದಿನ ಸರಕಾರದಲ್ಲೂ ಸಚಿವರಾಗಿದ್ದ ಕಾಂಗ್ರೆಸ್‌ನ ಖಾದರ್‌ಗೆ          ದ.ಕ.ಜಿಲ್ಲೆಯ ಹೊಣೆ ಕೊಡುವುದು ಬಹುತೇಕ ಖಚಿತವಾಗಿದೆ. ಜಿಲ್ಲೆಯಲ್ಲಿ ಗೆದ್ದಿರುವ ಕಾಂಗ್ರೆಸ್‌ನ ಏಕೈಕ ಶಾಸಕರು ಇವರು. ಆದರೆ  ಮತ್ತೂಂದು ಮಾಹಿತಿ ಪ್ರಕಾರ, ದ. ಕ. ಜಿಲ್ಲೆ ಕೋಮುಸೂಕ್ಷ್ಮ ಜಿಲ್ಲೆಯಾದ್ದ‌ರಿಂದ ಅಲ್ಲಿಗೆ ಬೇರೊಬ್ಬರನ್ನು ನೇಮಿಸಿ ಉಡುಗೆ ಖಾದರ್‌ ಅವರನ್ನು ನೇಮಿಸುವ ಲೆಕ್ಕಾಚಾರವೂ ನಡೆದಿದೆ ಎನ್ನಲಾಗಿದೆ. 

ಉಡುಪಿಗೆ ಯಾರು? 
ಉಡುಪಿ ಜಿಲ್ಲೆಗೆ ಉಸ್ತುವಾರಿ ವಹಿಸುವ ಕುರಿತೂ ಚರ್ಚೆ ಆರಂಭವಾಗಿದೆ. ಒಂದುವೇಳೆ ಯು.ಟಿ.ಖಾದರ್‌ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಗೆ ಅವಕಾಶ ನೀಡಿದರೆ, ಅದೇ ಜಿಲ್ಲೆಯವರಾದ ಸಚಿವೆ ಜಯಮಾಲಾರಿಗೆ ಉಸ್ತುವಾರಿ ವಹಿಸುವ ಯೋಗ ಒದಗಿಬರುವ ಸಾಧ್ಯತೆ ಇದೆ. ನಂಬಲರ್ಹ ಮೂಲಗಳ ಪ್ರಕಾರ, ಮುಖ್ಯಮಂತ್ರಿಯವರು ಉಡುಪಿಯ ಉಸ್ತುವಾರಿ ಕೊಡುವುದರ ಬಗ್ಗೆ ಜಯಮಾಲಾರಲ್ಲಿ ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ.

ಸ್ವಾತಂತ್ರೊತ್ಸವಕ್ಕೆ ಉಸ್ತುವಾರಿಗಳು
ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಯವರು ಮೇ 23ರಂದು ಪ್ರಮಾಣವಚನ ಸ್ವೀಕರಿಸಿದ್ದರು. ಆಗಸ್ಟ್‌ 15 ರಂದು ಸ್ವಾತಂತ್ರೊತ್ಸವ ಆಚರಣೆ ನಡೆಯಬೇಕಿದ್ದು, ಸಾಮಾನ್ಯವಾಗಿ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸುವ ಸಂಪ್ರದಾಯವಿದೆ. ಸರಕಾರವಿಲ್ಲದ ಸಂದರ್ಭದಲ್ಲಿ ಹಾಗೂ ಉಸ್ತುವಾರಿ ಸಚಿವರು ನೇಮಕಗೊಳ್ಳದಿದ್ದಾಗ ಜಿಲ್ಲಾಧಿಕಾರಿಗಳೇ ಈ ಕೆಲಸವನ್ನು ನೆರವೇರಿಸುವರು. ಆದರೆ ಸರಕಾರವಿದ್ದೂ ಉಸ್ತುವಾರಿ ಸಚಿವರು ನೇಮಕವಾಗದೆ ಜಿಲ್ಲಾಧಿಕಾರಿಗಳು ಧ್ವಜಾರೋಹಣ ನೆರವೇರಿಸುವುದು ಸರಕಾರಕ್ಕೇ ಮುಜುಗರ ಸೃಷ್ಟಿಸುವ ಸಂಗತಿಯಾಗಿರುವುದರಿಂದ ಮುಖ್ಯಮಂತ್ರಿಯವರು ಮನಸ್ಸು ಮಾಡಿದ್ದಾರೆನ್ನಲಾಗಿದೆ. ಇದರೊಂದಿಗೇ ಆಷಾಡ ಎನ್ನುವ ಸಂಗತಿ ಇದಕ್ಕೆ ಅಡ್ಡಿಯಾಗುವ ಸಾಧ್ಯತೆ ಇದೆ ಎನ್ನಲಾಗಿದ್ದರೂ, ರಾಜಕೀಯ ಮೂಲಗಳ ಪ್ರಕಾರ ಉಸ್ತುವಾರಿಗಳ ನೇಮಕಕ್ಕೂ ಆಷಾಡಕ್ಕೂ ಸಂಬಂಧವಿಲ್ಲ ಎನ್ನಲಾಗಿದೆ. 

ಉಸ್ತುವಾರಿಗಳ ಅಗತ್ಯ 
ಪ್ರಸ್ತುತ ಜಿಲ್ಲಾ ಉಸ್ತುವಾರಿ ಸಚಿವರಿಲ್ಲದೇ ಪ್ರಗತಿ ಪರಿಶೀಲನಾ ಸಭೆ ನಡೆಯುತ್ತಿಲ್ಲ. ಜಿಲ್ಲೆಯ ಅಭಿವೃದ್ಧಿ ಕೆಲಸಕ್ಕೂಬಹಳ ವೇಗ ದೊರಕಿಲ್ಲ. ಅಧಿಕಾರಿಗಳ ಆಡಳಿತವೇ ನಡೆಯುತ್ತಿದೆ. ಇತ್ತೀಚೆಗೆ ಉಭಯ ಜಿಲ್ಲೆಗಳಲ್ಲಿ ಪ್ರಾಕೃತಿಕ ವಿಕೋಪ ಸಂಭವಿಸಿದ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವರಿದ್ದರೆ ಇನ್ನಷ್ಟು ಪರಿಣಾಮಕಾರಿಯಾಗಿ ಪರಿಹಾರ ಕಾರ್ಯ ನಡೆಯುತ್ತಿತ್ತು ಎಂಬ ಮಾತೂ ಕೇಳಿಬಂದಿತ್ತು. ಈಗ ಲೋಕಸಭೆ ಚುನಾವಣೆಯೂ ಹತ್ತಿರವಾಗುತ್ತಿರುವುದರಿಂದ ರಾಜ್ಯ ಸರಕಾರದ ವರ್ಚಸ್ಸು ಹೆಚ್ಚಿಸಲು ಉಸ್ತುವಾರಿ ಸಚಿವರ ನೇಮಕ ತೀರಾ ಆಗತ್ಯವಿದೆ ಎಂಬ ಅಭಿಪ್ರಾಯ ಕೇಳಿಬಂದಿದೆ. ಜಿಲ್ಲಾ ಉಸ್ತುವಾರಿ ಸಚಿವರ ನೇಮಕಕ್ಕೆ ಮುಖ್ಯಮಂತ್ರಿಯವರು ಮುಂದಾದರೂ ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡರ ಅಂಕಿತ ಬೇಕು ಎನ್ನಲಾಗುತ್ತಿದೆ.

– ಮಟಪಾಡಿ ಕುಮಾರಸ್ವಾಮಿ

ಟಾಪ್ ನ್ಯೂಸ್

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

byndoor

Malpe: ತೀವ್ರ ಆಸ್ವಸ್ಥಗೊಂಡ ವ್ಯಕ್ತಿ ಸಾವು

byndoor

Udupi: ಸ್ಕೂಟರ್‌ ಢಿಕ್ಕಿ; ಪಾದಚಾರಿಗೆ ಗಾಯ

8

Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.