Udupi ಡಾಕ್ಟರ್ ಆ್ಯಂಡ್ ಅಲೈಡ್ ಪ್ರೊಫೆಶನಲ್ಸ್ ಕ್ರೆ. ಸೊಸೈಟಿ ಆರಂಭ
Team Udayavani, Jan 28, 2024, 10:54 PM IST
ಉಡುಪಿ: ವೈದ್ಯಕೀಯ ಉಪಕರಣಗಳು ದುಬಾರಿಯಾಗಿರುವ ಇಂದಿನ ಕಾಲಘಟ್ಟದಲ್ಲಿ ಹಣಕಾಸು ಮಾಹಿತಿಯ ಅಗತ್ಯವೂ ವೈದ್ಯರಿಗೆ ಬೇಕಿರುತ್ತದೆ. ಗ್ರಾಮೀಣ ಭಾಗಗಳಲ್ಲಿ ರುವ ಶೇ. 70ರಷ್ಟು ಮಂದಿಗೆ ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮತ್ತಷ್ಟು ಸೇವೆ ಸಿಗುವಂತಾಗಬೇಕು ಎಂದು ಮಾಹೆ ವಿಶ್ವವಿದ್ಯಾನಿಲಯದ ಸಹ ಕುಲಾಧಿಪತಿ ಡಾ| ಎಚ್.ಎಸ್. ಬಲ್ಲಾಳ್ ಹೇಳಿದರು.
ಉಡುಪಿ ಸರ್ವಿಸ್ ಬಸ್ ನಿಲ್ದಾಣ ಸಮೀಪದ ಗ್ರಾಸ್‌ಲ್ಯಾಂಡ್ ಕಮರ್ಶಿಯಲ್ ಕಾಂಪ್ಲೆಕ್ಸ್ ನಲ್ಲಿ ರವಿವಾರ ಡಾಕ್ಟರ್ ಆ್ಯಂಡ್ ಅಲೈಡ್ ಪ್ರೊಫೆಶನಲ್ಸ್ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಶಾಸಕ ಯಶ್‌ಪಾಲ್ ಎ. ಸುವರ್ಣ ಮಾತನಾಡಿ, ದೇಶದ ಆರ್ಥಿಕತೆಗೆ ಬ್ಯಾಂಕ್‌ಗಳಂತೆ ಸಹಕಾರ ಕ್ಷೇತ್ರವೂ ಬಹುದೊಡ್ಡ ಕೊಡುಗೆ ನೀಡಿದೆ.
ವೈದ್ಯರಂತೆ ಇತರ ಕ್ಷೇತ್ರಗಳಲ್ಲಿರುವ ವರೂ ಇದರ ಪ್ರಯೋಜನ ಪಡೆದು ಕೊಳ್ಳಬೇಕು ಎಂದರು.ವೈದ್ಯರಲ್ಲಿ ಬಹಳಷ್ಟು ಹಣವಿದೆ ಎಂಬ ಭಾವನೆ ತಪ್ಪು. ದೇಶದಲ್ಲಿ ಶೇ. 70ರಷ್ಟು ವೈದ್ಯರು ಗ್ರಾಮೀಣ ಭಾಗದಲ್ಲಿ ಸೇವೆ ಮಾಡುತ್ತಿದ್ದು, ಹಲವರ ಸ್ಥಿತಿ ಹೀನಾಯವಾಗಿದೆ. ಆದರೂ ಸೇವೆಯ ಮೂಲಕ ಘನತೆ ಮೆರೆಯುತ್ತಿ
ದ್ದಾರೆ ಎಂದು ಆದರ್ಶ ಆಸ್ಪತ್ರೆಯ ಮ್ಯಾನೇಜಿಂಗ್ ಡೈರೆಕ್ಟರ್ ಡಾ| ಜಿ.ಎಸ್. ಚಂದ್ರಶೇಖರ್ ಹೇಳಿದರು.
ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ, ವೈದ್ಯರು ಆರ್ಥಿಕ ಸಂಸ್ಥೆ ತೆರೆಯುತ್ತಿರುವುದು ಇದೇ ಮೊದಲು. ವೈದ್ಯರು ಜನರ ಆರೋಗ್ಯ ಕಾಪಾಡುವಂತೆ ಆರ್ಥಿಕ ಕ್ಷೇತ್ರದಲ್ಲಿಯೂ ಎಚ್ಚರಿಕೆ ಹೆಜ್ಜೆ ಇರಿಸುವಂತಾಗಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಮುಖ್ಯ ಪ್ರವರ್ತಕ ಡಾ| ಬುಡ್ನಾರು ವಿನಯಚಂದ್ರ ಶೆಟ್ಟಿ ಮಾತನಾಡಿ, ವೈದ್ಯರು ಸರಕಾರದ ವಿವಿಧ ಯೋಜನೆಗಳನ್ನು ತಿಳಿದುಕೊಳ್ಳಬೇಕು. ಈ ಸೊಸೈಟಿಯು ಠೇವಣಿ ಹಾಗೂ ಸಾಲಕ್ಕೆ ಸೀಮಿತವಲ್ಲ. ಇದನ್ನು ಮತ್ತಷ್ಟು ವಿಸ್ತರಿಸಲಾಗುವುದು ಎಂದರು.
ಡಾ| ಪ್ರಸನ್ನ ಕಾಕುಂಜೆ ಪ್ರಸ್ತಾವನೆ ಗೈದರು. ಡಾ| ಗುರುರಾಜ್ ಆಚಾರ್ಯ ಸ್ವಾಗತಿಸಿ, ಪ್ರೊ| ಯತಿಕುಮಾರ್ ಸ್ವಾಮಿಗೌಡ ವಂದಿಸಿದರು. ಮಂಜುಳಾ ಜಿ. ತೆಕ್ಕಟ್ಟೆ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.