ಡಾ| ಜಿ. ಶಂಕರ್ ಸರಕಾರಿ ಮಹಿಳಾ ಕಾಲೇಜಿನಲ್ಲಿ ಲ್ಯಾಪ್‌ಟಾಪ್ ವಿತರಣೆ
Team Udayavani, Feb 27, 2020, 5:52 AM IST
ಉಡುಪಿ: ಸರಕಾರವು ಎಲ್ಲ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಗುಣಮಟ್ಟದ ಲ್ಯಾಪ್‌ಟಾಪ್ ನೀಡುತ್ತಿದೆ. ವಿದ್ಯಾರ್ಥಿನಿಯರು ಇದರ ಉಪಯೋಗ ಪಡೆದು ಕೊಳ್ಳಬೇಕು. ಲ್ಯಾಪ್‌ಟಾಪ್ ಮತ್ತು ಅಂತರ್ಜಾಲವನ್ನು ಒಳ್ಳೆಯದಕ್ಕೂ ಹಾಗೂ ಕೆಟ್ಟದ್ದಕ್ಕೂ ಉಪಯೋ ಗಿಸಬಹುದು. ಒಳ್ಳೆಯ ದಾರಿಯಲ್ಲಿ ಹೋದರೆ ಒಳಿತಾಗುತ್ತದೆ. ಕೆಟ್ಟದಾರಿಯಲ್ಲಿ ಹೋದರೆ ಕೆಡುಕಾ ಗುತ್ತದೆ. ವಿದ್ಯಾರ್ಥಿನಿಯರು ತಾವು ಪಡೆದ ಲ್ಯಾಪ್‌ಟಾಪ್‌ನ್ನು ಇತರರಿಗೆ ನೀಡದೆ ತಾವೇ ಉಪಯೋಗಿಸಿ ತಾಂತ್ರಿಕ ಕೌಶಲವನ್ನು ಬೆಳೆಸಿಕೊಳ್ಳಬೇಕು ಎಂದು ಶಾಸಕ ರಘುಪತಿ ಭಟ್ ಹೇಳಿದರು.
ಅಜ್ಜರಕಾಡು ಡಾ| ಜಿ. ಶಂಕರ್ ಸರಕಾರಿ ಮಹಿಳಾ ಪ್ರ. ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಉಚಿತ ಲ್ಯಾಪ್‌ಟಾಪ್ ವಿತರಿಸಿ ಅವರು ಮಾತನಾಡಿದರು.
ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಯಶ್‌ಪಾಲ್ ಸುವರ್ಣ, ನಿರುಪಮಾ, ಮಮತಾಶ್ರೀ ಮತ್ತು ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಸುಮಿತ್ರಾ ಭಟ್ ಮೊದಲಾದವರು ಉಪಸ್ಥಿತರಿದ್ದರು. ಪ್ರಾಂಶುಪಾಲ ಡಾ| ಭಾಸ್ಕರ್ ಶೆಟ್ಟಿ ಎಸ್. ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಿತ್ಯಾನಂದ ಎನ್. ನಿರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕರಾವಳಿಯಲ್ಲಿ ಕಾಶ್ಮೀರಿ ಕೇಸರಿ ಬೆಳೆದ ಟೆಕ್ಕಿಗಳು; ಹೊಸ ಪ್ರಯೋಗದಲ್ಲಿ ಮೊದಲ ಯಶಸ್ಸು !
Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ
ಆನ್‌ಲೈನ್‌ನಲ್ಲಿ ಅಧಿಕ ಲಾಭಾಂಶದ ಆಮಿಷ: ಬ್ಯಾಂಕ್ ಮ್ಯಾನೇಜರ್‌ಗೆ ಲಕ್ಷಾಂತರ ರೂ. ವಂಚನೆ
Udupi: ಹೂಡೆ ಬೀಚ್‌ನಲ್ಲಿ ಪ್ರವಾಸಿಗರ ಮೇಲೆ ಸ್ಥಳೀಯರಿಂದ ಹಲ್ಲೆ
Hiriydaka: ಒಟಿಪಿ ನೀಡಿ 5 ಲಕ್ಷ ರೂ. ಕಳೆದುಕೊಂಡ ಯುವತಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.