ಶಿರ್ವದ ಜನಪ್ರಿಯ ವೈದ್ಯ ಡಾ| ಎನ್.ಎಸ್. ನಾಯಕ್ ನಿಧನ
45 ವರ್ಷಗಳಿಗೂ ಹೆಚ್ಚು ಕಾಲ ವೈದ್ಯರಾಗಿ ಸೇವೆ
Team Udayavani, Sep 20, 2022, 9:30 AM IST
ಶಿರ್ವ : ಶಿರ್ವದ ಜನಪ್ರಿಯ ಹಿರಿಯ ವೈದ್ಯ, ಮುಖ್ಯ ರಸ್ತೆ ಬಳಿಯ ನಿವಾಸಿ ಡಾ| ನಗರ ಸೂರ್ಯನಾರಾಯಣ ನಾಯಕ್ (ಎನ್.ಎಸ್. ನಾಯಕ್)(71) ಅವರು ಸೆ. 19 ರಂದು ಮಣಿಪಾಲದ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಮೃತರು ಪತ್ನಿ, ಮತ್ತು ಮೂವರು ವೈದ್ಯೆ ಪುತ್ರಿಯರನ್ನು ಅಗಲಿದ್ದಾರೆ.
ಸುಮಾರು 45 ವರ್ಷಗಳಿಗೂ ಹೆಚ್ಚು ಕಾಲ ಶಿರ್ವದಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದ ಅವರು ನಾಯಕ್ಸ್ ನರ್ಸಿಂಗ್ ಹೋಂ ಸ್ಥಾಪಿಸಿ ಗ್ರಾಮೀಣ ಭಾಗದ ಬಡ ಜನರಿಗೆ ವೈದ್ಯಕೀಯ ಸೇವೆ ನೀಡಿ ಜನಾನುರಾಗಿಯಾಗಿದ್ದರು.
ಶಿರ್ವಯಂಗ್ ಮೆನ್ಸ್ ನ್ಪೋರ್ಟ್ಸ್ ಆಂಡ್ ಕಲ್ಚರಲ್ ಎಸೋಸಿಯೇಶನ್ ಮತ್ತು ಲಯನ್ಸ್ ಕ್ಲಬ್‌ನ ಸ್ಥಾಪಕ ಸದಸ್ಯರಾಗಿದ್ದ ಅವರು ಪರಿಸರದ ವಿವಿಧ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡು ಸಾಮಾಜಿಕವಾಗಿ ಗುರುತಿಸಿಕೊಂಡಿದ್ದರು.
ಇದನ್ನೂ ಓದಿ : ಉಡುಪಿ : ಅ. 5ರಿಂದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮರಳು ಲಭ್ಯ… ಪಡೆಯುವುದು ಹೇಗೆ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.