“ಜೀವನೋತ್ಸಾಹ ಬೆಳೆಸಿಕೊಳ್ಳಿ’
Team Udayavani, Aug 19, 2017, 7:10 AM IST
ಕುಂದಾಪುರ: ಹೊಟ್ಟೆಯ ಹಸಿವನ್ನು ಇಂಗಿಸಿಕೊಳ್ಳುವುದರ ಜತೆಗೆ ವಿದ್ಯಾರ್ಥಿಗಳು ಜ್ಞಾನದ ಹಸಿವನ್ನು ಇಂಗಿಸಿಕೊಳ್ಳಬೇಕು. ಆಧುನಿಕ ವಿದ್ಯುನ್ಮಾನಯುಗದ ಹೊಸತನಗಳಿಗೆ ವಿದ್ಯಾರ್ಥಿಗಳು ತೆರೆದುಕೊಳ್ಳುವುದು ಇಂದಿನ ತುರ್ತು ಅನಿವಾರ್ಯತೆ. ವಿದ್ಯಾರ್ಥಿಗಳು ಸೃಜನಶೀಲತೆ ಬೆಳೆಸಿಕೊಳ್ಳುವುದರ ಜೊತೆಗೆ, ಜೀವನೋತ್ಸಾಹ ಬೆಳೆಸಿಕೊಂಡು, ಕಾಲೇಜಿನ ಈ ಮಹತ್ತರಯೋಜನೆಯ ಪ್ರಯೋಜನ ಪಡೆದುಕೊಳ್ಳಿ ಎಂದು ಹಿರಿಯ ನ್ಯಾಯವಾದಿ ಎಸ್. ಎನ್. ಹೆಬ್ಟಾರ್ ಹೇಳಿದರು.
ಅವರು ಕುಂದಾಪುರ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಬಿ. ಎಂ. ಸುಕುಮಾರ್ ಶೆಟ್ಟಿ ಅವರ 63ನೇ ಜನ್ಮದಿನಾಚರಣೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಭೋಜನ ಯೋಜನೆಯನ್ನು ಉದ್ಘಾಟಿಸಿ ಮಾತನಾಡಿದರು.ಕಾಲೇಜಿನ ಸಂಚಾಲಕ ಬಿ. ಎಮ್. ಸುಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಪ್ರಾಂಶುಪಾಲ ಪ್ರೊ| ದೋಮ ಚಂದ್ರಶೇಖರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಆಶಯ ನುಡಿಗಳನ್ನಾಡಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥ ರಾಜೇಶ್ ಶೆಟ್ಟಿ ವಕ್ವಾಡಿ ಸ್ವಾಗತಿಸಿದರು. ವಾಣಿಜ್ಯಉಪನ್ಯಾಸಕ ಸು ಧೀರ್ಕುಮಾರ್ ಪರಿಚಯಿಸಿದರು. ಕನ್ನಡ ಉಪನ್ಯಾಸಕ ಸುಕುಮಾರ ಶೆಟ್ಟಿ ಕಮಲಶಿಲೆ ವಂದಿಸಿದರು.ವಾಣಿಜ್ಯಉಪನ್ಯಾಸಕ ಶಿವರಾಜ್ ದೇವಾಡಿಗ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.