ಕುಡಿಯುವ ನೀರಿಗೆ ಬರ: ಉಡುಪಿಯ ಶಾಲೆ, ಕಾಲೇಜುಗಳಿಗೂ ಬರೆ…!


Team Udayavani, May 25, 2017, 3:51 PM IST

240517ppe5.jpg

ಉಡುಪಿ: ನಗರಕ್ಕೆ ನೀರು ಪೂರೈಸುವ ಬಜೆ ಜಲಾಶಯದಲ್ಲಿ ನೀರಿಲ್ಲ. ಅಲ್ಲಲ್ಲಿ ಡ್ರೆಜ್ಜಿಂಗ್‌ ಮಾಡಿ ಅಲ್ಲಿಂದ ಸಿಕ್ಕ ನೀರನ್ನು 4 ದಿನಕ್ಕೊಮ್ಮೆ ಈಗ ನಗರಕ್ಕೆ ಸರಬರಾಜು ಮಾಡಲಾಗುತ್ತಿದೆ. ಇನ್ನೇನು ವಾರದೊಳಗೆ ಆರಂಭವಾಗಲಿರುವ ಶಾಲಾ – ಕಾಲೇಜುಗಳಿಗೂ ನೀರಿನ ಬಿಸಿ ತಟ್ಟುವ ಸಾಧ್ಯತೆ ದಟ್ಟವಾಗಿದೆ. ಅಷ್ಟರೊಳಗೆ ಮಳೆ ಬಂದರೆ ಈ ಸಮಸ್ಯೆ ನಿವಾರಣೆಯಾಗಬಹುದು, ಆದರೆ ಮಳೆ ಬಾರದಿದ್ದರೆ ಪರಿಸ್ಥಿತಿ ಉಲ್ಬಣಗೊಳ್ಳಲಿದೆ. 

ಬಜೆ ಅಣೆಕಟ್ಟಿನಲ್ಲಿ ನೀರಿನ ಸಂಗ್ರಹ ತೀರಾ ಕಡಿಮೆ ಇರುವುದರಿಂದ ಮಳೆಗಾಲ ಆರಂಭವಾಗುವವರೆಗೆ ನಗರಕ್ಕೆ ನೀರು ಪೂರೈಸುವ ಸಲುವಾಗಿ ನಗರಸಭೆಯು ಪ್ರತಿ ವಾರ್ಡ್‌ಗಳಿಗೆ 4 ದಿನಕ್ಕೊಮ್ಮೆ ನೀರು ಪೂರೈಸುವ ಕಠಿನ ನಿರ್ಣಯ ಕೈಗೊಂಡಿದೆ. ಇಷ್ಟು ದಿನ ಮನೆ, ಅಪಾರ್ಟ್‌ಮೆಂಟ್‌, ಹೋಟೆಲ್‌, ಕಚೇರಿಗಳಿಗೆ ಮಾತ್ರ ನೀರಿನ ಅಗತ್ಯವಿತ್ತು. ಆದರೆ ಮುಂದಿನ ವಾರದಿಂದ ಬೇಸಿಗೆ ರಜೆ ಮುಕ್ತಾಯಗೊಳ್ಳಲಿದ್ದು, ಮೇ 29 ರಿಂದ ಜಿಲ್ಲೆಯ ಎಲ್ಲ ಶಾಲಾ-ಕಾಲೇಜು, ಅಂಗನವಾಡಿಗಳು ಪ್ರಾರಂಭಗೊಳ್ಳಲಿವೆ. ಶಾಲೆ, ಅಂಗನವಾಡಿಗಳಲ್ಲಿ ಬಿಸಿಯೂಟ, ಕುಡಿಯಲು, ಶೌಚಾಲಯಗಳಿಗೆಲ್ಲ ಸಾಕಷ್ಟು ಪ್ರಮಾಣದಲ್ಲಿ ನೀರಿನ ಅಗತ್ಯವಿದ್ದು, ಮಳೆ ಬಾರದಿದ್ದರೆ ಸಮಸ್ಯೆ ಉಂಟಾಗಲಿದೆ. 

ಉಡುಪಿ ವಲಯದಲ್ಲಿ 53 ಸರಕಾರಿ ಶಾಲೆಗಳಿದ್ದು, 30 ರಿಂದ 40 ಅನುದಾನಿತ, ಅನುದಾನ ರಹಿತ ಶಾಲೆಗಳಿವೆ. ಹೆಚ್ಚಿನೆಲ್ಲ ಶಾಲೆ- ಕಾಲೇಜುಗಳಿಗೆ ಬಾವಿ ಅಥವಾ ಕೊಳವೆ ಬಾವಿ ವ್ಯವಸ್ಥೆ ಇದೆ. ಆದರೆ ಅದರಲ್ಲಿ ಎಷ್ಟು ಬಾವಿ/ ಕೊಳವೆ ಬಾವಿಗಳಲ್ಲಿ ನೀರಿದೆ ಅನ್ನುವುದು ತಿಳಿಯಬೇಕಿದೆ. ನೀರಿದ್ದರೂ ಅದೀಗ ತಳಮಟ್ಟದಲ್ಲಿರುವುದರಿಂದ ಹಾಗೂ ಸುಮಾರು ಒಂದೂವರೆ ತಿಂಗಳಿನಿಂದ ಬಳಸದೇ ಇರುವುದರಿಂದ ಕುಡಿಯಲು ಯೋಗ್ಯವೇ ಅನ್ನುವ ಬಗ್ಗೆ ಸಂದೇಹವಿದೆ. ಇದರಿಂದ ಆರಂಭದ ದಿನಗಳಲ್ಲಿ ಶಾಲೆ, ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರಿಗೆ ನೀರಿಗಾಗಿ ಪರದಾಡುವ ಪರಿಸ್ಥಿತಿ ಬರಬಹುದು ಎಂದು ಸ್ಥಳೀಯ ಶಿಕ್ಷಕರೊಬ್ಬರು ಹೇಳುತ್ತಾರೆ. 

ಗುಣಮಟ್ಟ ಪರೀಕ್ಷಿಸಿ
ಎ. 10 ರಿಂದ ಶಾಲೆಗಳಿಗೆ ರಜೆ ನೀಡಲಾಗಿದ್ದು, ಮೇ 29 ಅಂದರೆ ಸುಮಾರು 1 ತಿಂಗಳು 20 ದಿನಗಳ ಬಳಿಕ ಮತ್ತೆ ಆರಂಭವಾಗುತ್ತಿರುವುದರಿಂದ ಬಾವಿ ಅಥವಾ ಬೋರ್‌ವೆಲ್‌ಗ‌ಳಿಂದ ತೆಗೆಯುವ ನೀರು ಎಷ್ಟು ಸುರಕ್ಷಿತ ಅನ್ನುವುದನ್ನು ಪರೀಕ್ಷಿಸುವುದು ಒಳ್ಳೆಯದು. ಹೆಚ್ಚಿನ ಬಾವಿಗಳ ನೀರು ತಳಮಟ್ಟಕ್ಕಿಳಿದಿರುವುದರಿಂದ ಬಳಸುವುದು ಆರೋಗ್ಯದ ದೃಷ್ಟಿಯಿಂದ ಒಳ್ಳೆಯದಲ್ಲ. ಅದರಿಂದ ಶಾಲೆ ಹಾಗೂ ಕಾಲೇಜುಗಳಲ್ಲಿ ನೀರಿನ ಗುಣಮಟ್ಟ ಪರೀಕ್ಷಿಸಿ ನೀರು ಬಳಸುವುದು ಉತ್ತಮ. 

ಮಳೆ ಬರುವ ನಿರೀಕ್ಷೆ 
ಈಗಾಗಲೇ ಜಿಲ್ಲೆಯ ಹಲವೆಡೆ ಅಲ್ಪ- ಸ್ವಲ್ಪ ಮಳೆಯಾಗಿದ್ದು, ಎಲ್ಲರೂ ಉತ್ತಮ ಮುಂಗಾರಿನ ನಿರೀಕ್ಷೆಯಲ್ಲಿದ್ದಾರೆ. ಹಿಂದಿನ ವರ್ಷಗಳಲ್ಲಿ ಎಪ್ರಿಲ್‌- ಮೇ ತಿಂಗಳಲ್ಲಿ ಸಾಧಾರಣ ಮಳೆಯಾಗುತ್ತಿತ್ತು. ಆದರೆ ಈ ಬಾರಿ ಅಷ್ಟೇನೂ ಮಳೆಯಾಗದಿರುವ ಕಾರಣ ಸ್ವರ್ಣ ನದಿಯಲ್ಲಿಯೂ ನೀರಿನ ಪ್ರಮಾಣ ಸಂಪೂರ್ಣ ಇಳಿಮುಖವಾಗಿದೆ. ಶಾಲಾ- ಕಾಲೇಜುಗಳು ಪ್ರಾರಂಭವಾಗಲು ಒಂದು ವಾರವಿದ್ದು, ಅಷ್ಟರೊಳಗೆ ಸ್ವಲ್ಪವಾದರೂ ಉತ್ತಮ ಮಳೆಯಾದರೆ ನೀರಿನ ಸಮಸ್ಯೆ ನಿವಾರಣೆಯಾಗಬಹುದು. 

ಸಭೆಯಲ್ಲಿ ಚರ್ಚಿಸಲಾಗಿದೆ
ಬಿ. ಇ. ಒ. ನೇತೃತ್ವದ ಸಭೆಯಲ್ಲಿ ನಗರದ ಶಾಲೆಗಳಿಗೆ ಉಂಟಾಗಲಿರುವ ನೀರಿನ ಸಮಸ್ಯೆ ಕುರಿತು ಚರ್ಚಿಸಿದ್ದೇವೆ. ಬಾವಿ, ಕೊಳವೆ ಬಾವಿಗಳಲ್ಲಿ ನೀರಿದ್ದರೆ ಅದನ್ನು ಶುದ್ಧೀಕರಿಸಿ ಬಳಸಲು ಸೂಚನೆ ನೀಡಲಾಗಿದೆ. ಸಮಸ್ಯೆ ಇರುವ ಕಡೆ ಟ್ಯಾಂಕರ್‌ ಮೂಲಕ ಪೂರೈಕೆಗೆ ಕ್ರಮ ಕೈಗೊಳ್ಳಲಾಗುವುದು. 
    – ಮಂಗಳಾ, ಅಧ್ಯಕ್ಷೆ, ಉಡುಪಿ ವಲಯದ ಶಿಕ್ಷಕರ ಸಂಘ

ಡಿಡಿಪಿಐ ಗಮನಕ್ಕೆ ತಂದಿದ್ದೇವೆ
ಇನ್ನೊಂದು ವಾರದೊಳಗೆ ಶಾಲೆಗಳು ಮತ್ತೆ ಆರಂಭಗೊಳ್ಳಲಿದ್ದು, ನಿತ್ಯ ಬಳಕೆಗೆ ಸಾಕಷ್ಟು ನೀರಿನ ಅಗತ್ಯವಿದೆ. ಕೆಲವು ಬಾವಿಗಳು ಸಂಪೂರ್ಣ ಬತ್ತಿ ಹೋಗಿದ್ದು, ಇದರಿಂದ ಕುಡಿಯಲು, ಬಿಸಿಯೂಟಕ್ಕೆಲ್ಲ ಸಮಸ್ಯೆಯಾಗಲಿದೆ. ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಗಮನಕ್ಕೆ ತರಲಾಗಿದೆ. ಅವರು ಸ್ಥಳೀಯಾಡಳಿತಕ್ಕೆ ಮನವರಿಕೆ ಮಾಡಲು ತಿಳಿಸಿದ್ದಾರೆ. ಸಮಸ್ಯೆ ಇರುವ ಕಡೆ ಟ್ಯಾಂಕರ್‌ ಮೂಲಕ ನೀರು ಪೂರೈಸುವ ಭರವಸೆಯನ್ನು ಅಧಿಕಾರಿಗಳು ನೀಡಿದ್ದಾರೆ. 

– ಶಶಿಧರ ಶೆಟ್ಟಿ, ಜಿಲ್ಲಾಧ್ಯಕ್ಷರು, ಪ್ರಾಥಮಿಕ ಶಾಲೆಗಳ ಶಿಕ್ಷಕರ ಸಂಘ ಉಡುಪಿ

– ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

Congress-Symbol

Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ

Maharashtra Election: ಅಘಾಡಿ ಸೋಲಿಗೆ ಉದ್ಧವ್‌,ಶರದ್‌ ಕಾರಣ: ಕಾಂಗ್ರೆಸ್‌

Maharashtra Election: ಅಘಾಡಿ ಸೋಲಿಗೆ ಉದ್ಧವ್‌,ಶರದ್‌ ಕಾರಣ: ಕಾಂಗ್ರೆಸ್‌

Modi-Tour

Mann Ki Baat: ಮೈಸೂರಿನ ‘ಅರ್ಲಿ ಬರ್ಡ್‌’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ

Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!

Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!

Isro: ಡಿ.20ಕ್ಕೆ ಸ್ಪೇಡೆಕ್ಸ್‌ ಲಾಂಚ್‌ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್‌.ಸೋಮನಾಥ್‌

Isro: ಡಿ.20ಕ್ಕೆ ಸ್ಪೇಡೆಕ್ಸ್‌ ಲಾಂಚ್‌ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್‌.ಸೋಮನಾಥ್‌

BK-hariprasad

Congress: ಹಣ, ಮದ್ಯ ಹಂಚಿಕೆಯಲ್ಲಿ ಬಿಜೆಪಿ ಜತೆ ಪೈಪೋಟಿ: ಬಿ.ಕೆ.ಹರಿಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್‌ ದಾಳಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

puttige-5

Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

Congress-Symbol

Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ

Maharashtra Election: ಅಘಾಡಿ ಸೋಲಿಗೆ ಉದ್ಧವ್‌,ಶರದ್‌ ಕಾರಣ: ಕಾಂಗ್ರೆಸ್‌

Maharashtra Election: ಅಘಾಡಿ ಸೋಲಿಗೆ ಉದ್ಧವ್‌,ಶರದ್‌ ಕಾರಣ: ಕಾಂಗ್ರೆಸ್‌

Modi-Tour

Mann Ki Baat: ಮೈಸೂರಿನ ‘ಅರ್ಲಿ ಬರ್ಡ್‌’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ

Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!

Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.