ಮಾದಕ ದ್ರವ್ಯ ಜಗತ್ತಿನ 3ನೇ ದೊಡ್ಡ ವ್ಯವಹಾರ: ಡಾ| ವಿನೋದ್‌ ಭಟ್‌


Team Udayavani, Jun 28, 2019, 5:59 AM IST

madaka-dravya

ಉಡುಪಿ: ಜಗತ್ತಿನಲ್ಲಿ ಪೆಟ್ರೋಲ್‌ ಮತ್ತು ಶಸ್ತ್ರಾಸ್ತ್ರ ಉದ್ಯಮಗಳ ಅನಂತರದ ದೊಡ್ಡ ವ್ಯವಹಾರ ಮಾದಕ ವಸ್ತುವಿಗೆ ಸಂಬಂಧಿಸಿದ್ದಾಗಿದೆ ಎಂದು ಮಣಿಪಾಲ ಮಾಹೆ ಕುಲಪತಿ ಡಾ| ಎಚ್‌. ವಿನೋದ್‌ ಭಟ್‌ ಹೇಳಿದ್ದಾರೆ.

ಬುಧವಾರ ಮಾಹೆ ವತಿಯಿಂದ ಮಣಿಪಾಲದಲ್ಲಿ ಜರಗಿದ ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಾದಕ ವಸ್ತುಗಳ ಒಟ್ಟು ವ್ಯವಹಾರ ಈಗ ಟ್ರಿಲಿಯನ್‌ ಡಾಲರ್‌ಗಿಂತಲೂ ಅಧಿಕವಾಗಿದೆ. ಯುವಜನತೆ ಮಾದಕ ದ್ರವ್ಯಗಳ ಚಟಕ್ಕೆ ಬೀಳುವುದನ್ನು ತಡೆಯಲು ಅಗತ್ಯ ಕ್ರಮ ತೆಗೆದು ಕೊಳ್ಳುವುದು ಆವಶ್ಯವಾಗಿದೆ. ಡೀಲರ್‌ಗಳು ಮತ್ತು ಮಾರಾಟಗಾರರ ಮೇಲೆ ನಿಯಂತ್ರಣ ಹೇರಬೇಕಾಗಿದೆ. ಜಾಗೃತಿ ಕಾರ್ಯಕ್ರಮಗಳು ಕೂಡ ಹೆಚ್ಚಾಗಬೇಕು ಎಂದು ಡಾ| ವಿನೋದ್‌ ಭಟ್‌ ಹೇಳಿದರು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಕಾರ್ಕಳ ಎಎಸ್‌ಪಿ ಕೃಷ್ಣಕಾಂತ್‌ ಅವರು ಮಾತನಾಡಿ ಯುವಜನರಲ್ಲಿ ಕುತೂಹಲ, ಫ್ಯಾಷನ್‌ಗಾಗಿ ಮಾದಕ ದ್ರವ್ಯ ಸೇವನೆ ಆರಂಭವಾಗಿ ಅದು ಚಟವಾಗಿ ಪರಿವರ್ತನೆಯಾಗುತ್ತದೆ. ಮಾದಕ ದ್ರವ್ಯಗಳ ಸಾಗಾಟ, ಮಾರಾಟ ಹಾಗೂ ಸೇವನೆ ವಿರುದ್ಧ ಆರು ತಿಂಗಳಿನಿಂದ 20 ವರ್ಷಗಳವರೆಗೆ ಜೈಲು ಶಿಕ್ಷೆ ಇದೆ ಎಂದು ಹೇಳಿದರು.

ಮಾಹೆ ವಿದ್ಯಾರ್ಥಿಗಳ ಮಾದಕವಸ್ತು ವಿರೋಧಿ ಮ್ಯಾಗಜಿನ್‌ನ್ನು ಕೆಎಂಸಿಯ ಸಹಾಯಕ ಡೀನ್‌ ಡಾ| ಶರತ್‌ ರಾವ್‌ ಬಿಡುಗಡೆಗೊಳಿಸಿದರು. ಕೆಎಂಸಿಯ ಫೋರೆನ್ಸಿಕ್‌ ಮೆಡಿಸಿನ್‌ ವಿಭಾಗದ ಮುಖ್ಯಸ್ಥ ಡಾ| ವಿನೋದ್‌ ನಾಯಕ್‌ ಉಪಸ್ಥಿತರಿದ್ದರು.

ಡಾ| ಜಿ. ಶ್ರೀಕುಮಾರ್‌ ಮೆನನ್‌ ಸ್ವಾಗ ತಿಸಿ ಡಾ| ಗೀತಾ ಮಯ್ಯ ವಂದಿಸಿದರು. ಡಾ| ಅನಿತಾ ಎಸ್‌. ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

FRAUD-1

ಹೊಸ ವರ್ಷದ ಶುಭಾಶಯ ನೆಪದಲ್ಲಿ ವಂಚನೆ ಸಾಧ್ಯತೆ “ಎಪಿಕೆ ಫೈಲ್‌’ ತೆರೆಯದಂತೆ ಪೊಲೀಸರ ಸೂಚನೆ

1-sun

Goa; ಸನ್ ಬರ್ನ್ ಫೆಸ್ಟಿವಲ್ ನಲ್ಲಿ ಕುಸಿದು ಬಿದ್ದು ಯುವಕ ಸಾ*ವು!

Jagdish-Shetter

Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್

1-ewewq

Malayalam; ಹೋಟೆಲ್ ರೂಂನಲ್ಲಿ ಶ*ವವಾಗಿ ಪತ್ತೆಯಾದ ಖ್ಯಾತ ನಟ ದಿಲೀಪ್ ಶಂಕರ್

bsf

2024; ಜಮ್ಮು ಮತ್ತು ಕಾಶ್ಮೀರದಲ್ಲಿ 75 ಉಗ್ರರ ನಿರ್ಮೂಲನೆ: 60% ಪಾಕ್ ಮೂಲದವರು

Basavarj-horatti

ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Malpe: ತೆಂಕನಿಡಿಯೂರು; ತೀವ್ರ ಅಸ್ವಸ್ಥಗೊಂಡ ವ್ಯಕ್ತಿ ಸಾವು

4

Udupi: ಗಾಂಜಾ ಮಾರಾಟ; ಮೂವರ ಬಂಧನ

10

Udupi: ಸಂಚಾರ ಬದಲಿಸಿದರೂ ಸಮಸ್ಯೆ ಬದಲಾಗಲಿಲ್ಲ!

6

Karkala: ಲೈಸೆನ್ಸ್‌ ಇಲ್ಲದ ವ್ಯಾಪಾರಕ್ಕೆ ಕಡಿವಾಣ

9-

Delhi ಗಣರಾಜ್ಯೋತ್ಸವ; ಹೆಬ್ರಿಯ ಮಹಿಳೆಗೆ ವಿಶೇಷ ಅವಕಾಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

FRAUD-1

ಹೊಸ ವರ್ಷದ ಶುಭಾಶಯ ನೆಪದಲ್ಲಿ ವಂಚನೆ ಸಾಧ್ಯತೆ “ಎಪಿಕೆ ಫೈಲ್‌’ ತೆರೆಯದಂತೆ ಪೊಲೀಸರ ಸೂಚನೆ

de

Malpe: ತೆಂಕನಿಡಿಯೂರು; ತೀವ್ರ ಅಸ್ವಸ್ಥಗೊಂಡ ವ್ಯಕ್ತಿ ಸಾವು

4

Udupi: ಗಾಂಜಾ ಮಾರಾಟ; ಮೂವರ ಬಂಧನ

2

Kundapura: ವ್ಯಕ್ತಿ ನಾಪತ್ತೆ; 25 ದಿನ ಕಳೆದರೂ ಸಿಗದ ಸುಳಿವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.