ಸಾಲಿಗ್ರಾಮ ಪ.ಪಂ.: ಬಿಗಡಾಯಿಸಿದ ಡಂಪಿಂಗ್‌ ಯಾರ್ಡ್‌ ಸಮಸ್ಯೆ

Team Udayavani, Sep 18, 2018, 1:10 AM IST

dumping-yard-17-9.jpg

ಕೋಟ: ಸಾಲಿಗ್ರಾಮ ಪ.ಪಂ.ಗೆ ಹತ್ತಾರು ವರ್ಷದಿಂದ ದೊಡ್ಡ ತಲೆನೋವಾಗಿರುವ ಕಸ ವಿಲೇವಾರಿ ಸಮಸ್ಯೆ ಇದೀಗ ಬಿಗಡಾಯಿಸಿದೆ. ಸೂಕ್ತ ಡಂಪಿಂಗ್‌ ಯಾರ್ಡ್‌ ಇಲ್ಲದಿರುವುದರಿಂದ ಎಲ್ಲಾ ಮನೆಗಳು, ಹೊಟೇಲ್‌, ಕೈಗಾರಿಕೆ, ಅಂಗಡಿ ಮುಂತಾದ ವಾಣಿಜ್ಯ ಘಟಕಗಳ ಕಸ ಸಂಗ್ರಹಣೆಯನ್ನು ಪ.ಪಂ. ಸೆ. 18ರಿಂದ ಸ್ಥಗಿತಗೊಳಿಸುತ್ತಿದೆ.  ಇದರಿಂದ ಸಾವಿರಾರು ಮಂದಿಗೆ ಮುಂದೆ ಸಮಸ್ಯೆ ಎದುರಾಗಲಿದೆ.

ಡಂಪಿಂಗ್‌ ಯಾರ್ಡ್‌ಗೆ ಸ್ಥಳವಿಲ್ಲ
ಸಾಲಿಗ್ರಾಮದ ಕಸವನ್ನು ಈವರೆಗೆ ಹಳೆಕೋಟೆ ಮೈದಾನದಲ್ಲಿ ಸಂಗ್ರಹಿಸಿ ಅಲ್ಲಿಂದ ಉಡುಪಿಯ ಡಂಪಿಂಗ್‌ ಯಾರ್ಡ್‌ನಲ್ಲಿ ವಿಲೇವಾರಿ ಮಾಡಲಾಗುತಿತ್ತು. ಆದರೆ ಉಡುಪಿಯಲ್ಲಿ ಕಸದ ಪ್ರಮಾಣ ಹೆಚ್ಚಿರುವುದರಿಂದ ಇಲ್ಲಿನ ಕಸವನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ. ಜತೆಗೆ ಹಳೆಕೋಟೆ ಮೈದಾನದ ತಾತ್ಕಾಲಿಕ ಡಂಪಿಂಗ್‌ ಯಾರ್ಡ್‌ ಕುರಿತು ಸ್ಥಳೀಯರಿಂದ ಸಾಕಷ್ಟು ವಿರೋಧವಿದೆ. ಹೀಗಾಗಿ ಕಸ ವಿಲೇವಾರಿಗೆ ಜಾಗವಿಲ್ಲವಾಗಿದೆ.

ಸ್ವಂತ ಡಂಪಿಂಗ್‌ ಯಾರ್ಡ್‌ ನಿರ್ಮಾಣಕ್ಕೆ ಹಿನ್ನಡೆ
ಈ ಹಿಂದೆ ಪ.ಪಂ. ಸ್ವಂತ ಡಂಪಿಂಗ್‌ ಯಾರ್ಡ್‌ ನಿರ್ಮಾಣಕ್ಕಾಗಿ ಉಳೂ¤ರಿನಲ್ಲಿರುವ ಸ್ಥಳ ಖರೀದಿ ನಡೆಸಿತ್ತು. ಆದರೆ ಅಲ್ಲಿನ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿ ನ್ಯಾಯಾಲಯದ ಮೊರೆ ಹೋಗಿದ್ದರು. ಇದೀಗ ಕುಂದಾಪುರ ಜೆ.ಎಮ್‌.ಎಫ್‌.ಸಿ. ನ್ಯಾಯಾಲಯದಲ್ಲಿ  ಈ ಕುರಿತು ವ್ಯಾಜ್ಯ ನಡೆಯುತ್ತಿದೆ. ಹೀಗಾಗಿ ಸ್ವಂತ ಡಂಪಿಂಗ್‌ ಯಾರ್ಡ್‌ ನಿರ್ಮಾಣ ಸಾಧ್ಯವಾಗಿಲ್ಲ.

ವ್ಯಾಜ್ಯ ಮುಗಿಯುವ ತನಕ ಸಮಸ್ಯೆ ಇತ್ಯರ್ಥವಿಲ್ಲ
ಉಳ್ತೂರು ಡಂಪಿಂಗ್‌ ಯಾರ್ಡ್‌ನ ವ್ಯಾಜ್ಯ ಮುಕ್ತಾಯವಾಗಿ ಶಾಶ್ವತ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣವಾಗುವವರೆಗೆ ಪ.ಪಂ.ನಿಂದ  ಯಾವುದೇ ಹಸಿ ಕಸವನ್ನು ಸಂಗ್ರಹಿಸಲಾಗುವುದಿಲ್ಲ ಎಂದು ಪಟ್ಟಣ ಪಂಚಾಯತ್‌ ಸಾರ್ವಜನಿಕರಿಗೆ ಸೂಚನೆ ನೀಡಿದೆ

ನಗರದ ಸ್ವಚ್ಛತೆಗೆ ಅಡ್ಡಿ ಇಲ್ಲ
ಹಸಿ ಕಸ ಸಂಗ್ರಹಣೆ ಸಂಪೂರ್ಣ ಸ್ಥಗಿತಗೊಂಡರು ನಗರದ ಬೀದಿಗಳನ್ನು ಸ್ವಚ್ಛಗೊಳಿಸುವುದು, ಬೀದಿಗಳಲ್ಲಿನ ಕಸ ಸಂಗ್ರಹಣೆ ಎಂದಿನಂತೆ ಮುಂದುವರಿಯಲಿದೆ ಎಂದು ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.

ಸಾವಿರಾರು ಮಂದಿಗೆ ಸಮಸ್ಯೆ
ಪ.ಪಂ. ವ್ಯಾಪ್ತಿಯ 16ವಾರ್ಡ್‌ಗಳ ಸುಮಾರು 1500 ಮನೆಗಳು ಹಾಗೂ 5 ವಸತಿ ಸಂಕಿರ್ಣಗಳು, 10ಕ್ಕೂ ಹೆಚ್ಚು ಹೊಟೇಲ್‌, ತರಕಾರಿ ಮಾರುಕಟ್ಟೆ, ನಾಲ್ಕೈದು ಕಲ್ಯಾಣ ಮಂಟಪಗಳಿಂದ ಪ್ರತಿದಿನ ಕಸ ಸಂಗ್ರಹಣೆ ನಡೆಯುತ್ತಿದೆ. ಇದೀಗ ದಿಢೀರ್‌ ಆಗಿ ಈ ತೀರ್ಮಾನ ಕೈಗೊಂಡಿರುವುದರಿಂದ ಸಾವಿರಾರು ಮಂದಿಗೆ ಸಮಸ್ಯೆಯಾಗಲಿದೆ ಎನ್ನುವ ಅಭಿಪ್ರಾಯ ಕೇಳಿಬಂದಿದೆ.

ಕಾಂಪೋಸ್ಟ್‌ ವಿಧಾನ ಅಳವಡಿಸಿಕೊಳ್ಳಲು ಸೂಚನೆ
ಒಣ ಕಸವನ್ನು ವಾರದಲ್ಲಿ ಒಂದು ದಿನ ಮಾತ್ರ ಪ.ಪಂ. ಸ್ವೀಕರಿಸಲಿದ್ದು, ಹಸಿ ಕಸವನ್ನು ಐಇಸಿ ಕಾರ್ಯಕ್ರಮದಂತೆ ಪೈಪ್‌ ಕಾಂಪೋಸ್ಟ್‌, ಪಿಟ್‌ ಕಾಂಪೋಸ್ಟ್‌, ಬಯೋ ಬಿನ್ಸ್‌ ಅಥವಾ ಇನ್ನಿತರ ವಿಧಾನಗಳಿಂದ ತಮ್ಮ ಸ್ವಂತ ಸ್ಥಳದಲ್ಲಿಯೇ ವಿಲೀನಗೊಳಿಸಲು ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಪ.ಪಂ. ತಿಳಿಸಿದೆ.

ಸಮಸ್ಯೆಗೆ ಗ್ರಾಮಸ್ಥರು ಕಾರಣ 
ಉಡುಪಿಯ ನಮ್ಮ ಕಸ ಸ್ವೀಕರಿಸದಿರಲು ಕಸದ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವುದು ಹಾಗೂ ಹಸಿ ಕಸ-ಒಣ ಕಸವನ್ನು ಬೇರ್ಪಡಿಸದಿರುವುದು ಕಾರಣವಾಗಿದೆ.   ಆದರೆ ಎಷ್ಟೇ ಮನವಿ ಮಾಡಿದರು ನಮ್ಮ ಗ್ರಾಮಸ್ಥರು ಕಸವನ್ನು ಸರಿಯಾಗಿ ವಿಂಗಡಿಸುತ್ತಿಲ್ಲ. ಮನೆಯಲ್ಲೇ ವಿಲೇ ಮಾಡಬಹುದಾದ ತ್ಯಾಜ್ಯವನ್ನು ನೀಡುತ್ತಾರೆ. ಎಸ್‌.ಆರ್‌.ಎಲ್‌.ಎಂ. ಘಟಕ ಸ್ಥಾಪಿಸಿದರೆ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದಿತ್ತು. ಆದರೆ ಈ ಘಟಕದಿಂದ ಯಾವುದೇ ಸಮಸ್ಯೆ ಇಲ್ಲ, ಹಲವು ಕಡೆ ನಗರದ ಮಧ್ಯದಲ್ಲಿ  ಘಟಕವಿದೆ ಎಂದು ಎಷ್ಟೇ ಮನವಿ ಮಾಡಿದರೂ 4 ಕಡೆಗಳಲ್ಲಿ ಘಟಕದ ಸ್ಥಾಪನೆಗೆ ಅಡ್ಡಿಪಡಿಸಲಾಯಿತು. ಈ ಎಲ್ಲ ಕಾರಣದಿಂದ ಕಸ ವಿಲೇವಾರಿ ಸಾಕಷ್ಟು  ತ್ರಾಸದಾಯಕವಾಗಿದೆ. ಹೀಗಾಗಿ ಅನಿವಾರ್ಯವಾಗಿ ಕಸ ಸ್ವೀಕರಿಸುವುದನ್ನು ನಿಲ್ಲಿಸಿದ್ದೇವೆ. ಇದು ದಿಢೀರ್‌ ನಿರ್ಧಾರವಲ್ಲ. ಹಲವು ಬಾರಿ ಸೂಚನೆ ನೀಡಲಾಗಿದೆ. ಉಳ್ತೂರಿನಲ್ಲಿ ಡಂಪಿಂಗ್‌ಯಾರ್ಡ್‌ ನಿರ್ಮಿಸುವ ಸಲುವಾಗಿ ಕಾನೂನು ಹೋರಾಟ ಮುಂದುವರಿಯಲಿದ್ದು, ಪರ್ಯಾಯ ವ್ಯವಸ್ಥೆಯಾಗುವ ತನಕ ಜನರು ಸಹಕರಿಸಬೇಕು.

ಟಾಪ್ ನ್ಯೂಸ್

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

Mulki-kambala

Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ

Kota-Shrinivas

Manipal: ಕೇಂದ್ರ ಸರಕಾರದ ಯೋಜನೆ ಫ‌ಲಾನುಭವಿಗಳಿಗೆ ಸಾಲ ನೀಡಲು ಸತಾಯಿಸಬೇಡಿ: ಸಂಸದ ಕೋಟ

puttige-5

Udupi; ಗೀತಾರ್ಥ ಚಿಂತನೆ 132: ತಣ್ತೀವಿರುವುದು ಉಪದೇಶಕ್ಕಲ್ಲ, ಅಭ್ಯಾಸಕ್ಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.