3 ವರ್ಷಗಳಲ್ಲಿ ಶಿಕ್ಷಣ ಅನುದಾನ ಬಳಕೆ ಇಷ್ಟು…
Team Udayavani, Jun 23, 2017, 4:07 PM IST
ಉಡುಪಿ: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣಕ್ಕಾಗಿ 2013-14ರಿಂದ 2016-17ನೇ ಸಾಲಿನವರೆಗೆ 35,000 ಕೋಟಿ ರೂ. ಅನುದಾನ ಹಂಚಿಕೆಯಾಗಿದ್ದು, ಇದರಲ್ಲಿ 33,000 ಕೋಟಿ ರೂ. ಅನುದಾನ ಮಾತ್ರ ಬಳಕೆಯಾಗಿದೆ ಎಂದು ಸಚಿವ ತನ್ವೀರ್ ಸೇಠ್ ಅವರು ವಿಧಾನ ಪರಿಷತ್ತಿನಲ್ಲಿ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ತಿಳಿಸಿದರು.
ರಾಜ್ಯದಲ್ಲಿ ಆರ್‌ಟಿಇ ಕಾಯ್ದೆಯಡಿ 2012-13ರಿಂದ 2016-17ರ ವರೆಗೆ 685 ಕೋಟಿ ರೂ. ಖರ್ಚಾಗಿದೆ. 2016-17ನೇ ಶೈಕ್ಷಣಿಕ ಸಾಲಿನಲ್ಲಿ ಲಭ್ಯವಿದ್ದ ಸೀಟುಗಳ ಸಂಖ್ಯೆ 1,15,237 ಇದ್ದು, ದಾಖಲಾದ ವಿದ್ಯಾರ್ಥಿಗಳ ಸಂಖ್ಯೆ 97,991. ಪ್ರವೇಶ ಪ್ರಕ್ರಿಯೆಗಾಗಿ ಹೊಸದಾಗಿ ತಂತ್ರಾಂಶ ಅಭಿವೃದ್ಧಿ ಪಡಿಸಲಾಗಿದೆ. ಅರ್ಜಿದಾರರಿಗೆ ಯಾವುದೇ ರೀತಿಯ ಪಕ್ಷಪಾತ ಮಾಡದೆ ಪಾರದರ್ಶಕ ರೀತಿಯಲ್ಲಿ ಪತ್ರಿಕಾ ಹಾಗೂ ವಿದ್ಯುನ್ಮಾನ ಮಾಧ್ಯಮಗಳ ಸಮ್ಮುಖದಲ್ಲಿ ಲಾಟರಿ ಪ್ರಕ್ರಿಯೆ ನಡೆಸಲಾಗಿದೆ. ಕಳೆದ 3 ವರ್ಷದಲ್ಲಿ ಯಾವುದೇ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳನ್ನು ಮುಚ್ಚಿಲ್ಲ.
ಸರಕಾರಿ ಶಾಲೆಯಲ್ಲಿ ಆಮೂಲಾಗ್ರ ಬದಲಾವಣೆ ತಂದು ಹೆಚ್ಚು ಹೆಚ್ಚು ಮಕ್ಕಳು ಸರಕಾರಿ ಶಾಲೆಗೆ ಸೇಪರ್ಡೆಗೊಳಿಸುವ ನಿಟ್ಟಿನಲ್ಲಿ ವಿದ್ಯಾವಿಕಾಸ ಯೋಜನೆಯಡಿ ಮಕ್ಕಳಿಗೆ ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಶೂ ಮತ್ತು ಸಾಕ್ಸ್ ಎಂಟನೇ ತರಗತಿ ಮಕ್ಕಳಿಗೆ ಉಚಿತ ಬೈಸಿಕಲ್ ಮೊದಲಾದ ಪ್ರೋತ್ಸಾಹ, ಮಧ್ಯಾಹ್ನದ ಬಿಸಿಯೂಟ, ಹಾಲು ಮುಂತಾದ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ಉತ್ತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
National Mourning: ಮಂಗಳೂರಿನ ಬೀಚ್ ಉತ್ಸವ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.