ಅಸ್ಪೃಶ್ಯತೆ ನಿವಾರಣೆಗೆ ಆರ್‌ಎಸ್‌ಎಸ್‌ನಿಂದ ಪರಿಣಾಮಕಾರಿ ಕಾರ್ಯನಿರ್ವಹಣೆ : ಗಜಾನನ ಪೈ

Team Udayavani, Jul 20, 2019, 5:13 AM IST

1907KPE1A

ಕಾಪು: ಸಮಾನತೆಯೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯ ಉದೇªಶವಾಗಿದೆ. ಅಸ್ಪೃಶ್ಯತೆ ನಿವಾರಣೆಗಾಗಿ ಸಂಘ ಬಹಳಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಾ ಬರುತ್ತಿದೆ. ಜನರು ಕೂಡಾ ತಮ್ಮ ಮನೆ, ದೇವಸ್ಥಾನ, ಸ್ಮಶಾನಗಳನ್ನು ಎಲ್ಲರಿಗೂ ಮುಕ್ತವಾಗಿ ದೊರಕಿಸಿಕೊಡುವ ಮೂಲಕ ಅಸ್ಪೃಶ್ಯತೆ ನಿವಾರಣೆಯ ಪ್ರಯತ್ನದೊಂದಿಗೆ ಕೈ ಜೋಡಿಸಲು ಸಾಧ್ಯವಿದೆ ಎಂದು ಸಂಘದ ವಿಭಾಗ ಕುಟುಂಬ ಪ್ರಬೋಧನ್‌ ಪ್ರಮುಖ್‌ ಗಜಾನನ ಪೈ ಹೇಳಿದರು.

ಕಾಪು ಶ್ರೀ ಕಾಳಿಕಾಂಬಾ ದೇವಸ್ಥಾನದಲ್ಲಿ ಜರಗಿದ ಶ್ರೀ ಗುರುಪೂಜಾ ಉತ್ಸವ ಕಾರ್ಯಕ್ರಮದಲ್ಲಿ ಬೌದ್ಧಿಕ್‌ ನಡೆಸಿ ಕೊಟ್ಟರು.

ಆರ್‌.ಎಸ್‌.ಎಸ್‌ ಒಂದು ಶಿಸ್ತುಬದ್ಧವಾದ ಸಂಘಟನೆಯಾಗಿದ್ದು ಸಮಾಜದ ಪ್ರತಿಯೋರ್ವರಲ್ಲಿ ಹಿಂದುತ್ವದ ಅರಿವನ್ನು ಮೂಡಿಸುವಲ್ಲಿ ಸಂಘದ ಪ್ರಯತ್ನದ ಬಲವಿದೆ ಎಂದರು.

ಕಾರ್ಯಕರ್ತರೇ ಸಂಘದ ಬಲವಾಗಿದ್ದು ಕಾರ್ಯಕರ್ತರಲ್ಲಿರುವ ಸಂಘಟನ ಚಟುವಟಿಕೆ ಎಲ್ಲರಿಗೂ ಮಾದರಿಯಾಗಿದೆ. ಸಮಾಜದ ಮುನ್ನಡೆಗೆ ಸ್ವಾರ್ಥ ರಹಿತವಾದ ನೇತೃತ್ವ ವಹಿಸುವುದರ ಜೊತೆಗೆ ಸಾವಿರಾರು ಮಂದಿ ಕಾರ್ಯಕರ್ತರ ಸಮರ್ಪಣಾ ಮನೋಭಾವದ ಸೇವೆ ಸಂಘದ ಬೆಳವಣಿಗೆಗೆ ಪೂರಕವಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ನಿವೃತ್ತ ಉಪ ತಹಶೀಲ್ದಾರ್‌ ಪಿ. ಬಾಬು ಮಲ್ಲಾರು ಮಾತನಾಡಿ, ಆರ್‌ಎಸ್‌ಎಸ್‌ನ ಚಟುವಟಿಕೆಗಳನ್ನು ದೂರದಲ್ಲಿ ನಿಂತು ನೋಡುವುದರ ಬದಲಾಗಿ, ಅದರ ಹತ್ತಿರ ಬಂದು ನೋಡಿದಾಗಲೇ ಅದರ ಕುರಿತಾಗಿ ಪ್ರೀತಿ ಹೆಚ್ಚಲು ಕಾರಣವಾಗುತ್ತದೆ. ಗುರುಪೂಜಾ ಉತ್ಸವದ ಮೂಲಕ ಎಲ್ಲರಿಗೂ ಸಮರ್ಪಣೆಗೆ ಅವಕಾಶ ಮಾಡಿಕೊಡುವ ಮೂಲಕ ರಾಷ್ಟ್ರೀಯತೆಯನ್ನು ಪೋಷಿಸುವ ಕಾರ್ಯದಲ್ಲಿ ನಮಗೂ ಕೂಡಾ ಅವಕಾಶ ಮಾಡಿಕೊಟ್ಟಂತಾಗಿದೆ ಎಂದರು.

ಕಾಪು ತಾಲೂಕು ಸಂಘ ಸಂಚಾಲಕ ತಾರಾನಾಥ ವಿ. ಕೋಟ್ಯಾನ್‌ ಹಾಗೂ ಪ‌ದಾಧಿಕಾರಿಗಳು ಉಪಸ್ಥಿತರಿದ್ದರು.ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾಪು ಶಾಖಾ ಕಾರ್ಯವಾಹ ಸುದೀಶ್‌ ಪರಿಚಯಿಸಿ, ನಿರೂಪಿಸಿದರು. ಕಾಪು ತಾಲೂಕು ಕುಟುಂಬ ಪ್ರಬೋಧನ್‌ ಪ್ರಮುಖ್‌ ಶಾಂತರಾಮ ಪ್ರಭು ಕಲ್ಯ ವಂದಿಸಿದರು.

ಟಾಪ್ ನ್ಯೂಸ್

Mahakumbh Mela: ಪ್ರಯಾಗ್ ರಾಜ್‌ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು‌ ಬೆದರಿಕೆ

Mahakumbh Mela: ಪ್ರಯಾಗ್ ರಾಜ್‌ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು‌ ಬೆದರಿಕೆ

siddanna-2

HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ

Tulu movie Daskath will release in Kannada soon

Daskath ಮೆಚ್ಚಿದ ಪ್ರೇಕ್ಷಕರಿಗೆ ಬಿಗ್‌ ನ್ಯೂಸ್‌ ಕೊಟ್ಟ ಚಿತ್ರತಂಡ

BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್;‌ ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ

BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್;‌ ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ

Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…

Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…

ಸಚಿವ ಸತೀಶ್ ಜಾರಕಿಹೊಳಿ

Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15(1

Udupi: ಜ.15ಕ್ಕೆ ಗಡುವು; ಕಾಮಗಾರಿ ಇನ್ನೂ ಮುಗಿದಿಲ್ಲ

9

ಕಾರ್ಕಳ ನಗರದಲ್ಲೂ ನೆಟ್‌ ಕಿರಿಕಿರಿ!

1

Udupi: ಇನ್‌ಸ್ಟಾಗ್ರಾಂ ಲಿಂಕ್‌ ಬಳಸಿ 12.46 ಲಕ್ಷ ರೂ. ಕಳೆದುಕೊಂಡ ಯುವತಿ

POlice

Manipal: ವೇಶ್ಯಾವಾಟಿಕೆ; ನಾಲ್ವರುಪೊಲೀಸರ ವಶಕ್ಕೆ

POLICE-5

Udupi: ಗಾಂಜಾ ಸೇವಿಸಿದ ವ್ಯಕ್ತಿ ಪೊಲೀಸ್‌ ವಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mahakumbh Mela: ಪ್ರಯಾಗ್ ರಾಜ್‌ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು‌ ಬೆದರಿಕೆ

Mahakumbh Mela: ಪ್ರಯಾಗ್ ರಾಜ್‌ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು‌ ಬೆದರಿಕೆ

siddanna-2

HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ

Tulu movie Daskath will release in Kannada soon

Daskath ಮೆಚ್ಚಿದ ಪ್ರೇಕ್ಷಕರಿಗೆ ಬಿಗ್‌ ನ್ಯೂಸ್‌ ಕೊಟ್ಟ ಚಿತ್ರತಂಡ

BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್;‌ ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ

BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್;‌ ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ

Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…

Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.