ಪರಿಣಾಮಕಾರಿ ಪೂರ್ವಸಿದ್ಧತೆಯಿಂದ ಸುಗಮ ಚುನಾವಣೆ: ಎಸ್ಪಿ

Team Udayavani, May 17, 2018, 7:05 AM IST

1605udcp-sp-1.jpg

ಉಡುಪಿ: ಜಿಲ್ಲೆಯ ಬೈಂದೂರು, ಕುಂದಾಪುರ, ಕಾರ್ಕಳ, ಉಡುಪಿ ಮತ್ತು ಕಾಪು ಈ ಐದೂ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಒಟ್ಟು 1,103 ಮತಗಟ್ಟೆಗಳಿದ್ದು, 226 ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿ ಸಲಾಗಿತ್ತು. ಹೀಗಿದ್ದರೂ ಯಾವುದೇ ಅಹಿತಕರ ಘಟನೆಯಿಲ್ಲದೆ ಸುಗಮವಾಗಿ ಚುನಾವಣೆ ನಡೆದ ಹಿನ್ನೆಲೆ ಇಲಾಖೆಯ ಒಟ್ಟು ನಿರ್ವಹಣೆಯ ಕುರಿತು “ಉದಯ ವಾಣಿ’ ಜತೆಗಿನ ಮಾತುಕತೆಯಲ್ಲಿ ಎಸ್‌ಪಿ ಲಕ್ಷ್ಮಣ ಬ. ನಿಂಬರಗಿ ಅವರು ತಮ್ಮ  ಅನುಭವ ಬಿಚ್ಚಿಟ್ಟಿದ್ದಾರೆ.

ಇಲಾಖೆಯ ಒಟ್ಟು ನಿರ್ವಹಣೆ ಹೇಗಿತ್ತು?
ಅಧಿಕಾರ ಸ್ವೀಕರಿಸಿದ ಬಳಿಕ ಕರ್ತವ್ಯದಲ್ಲಿ ನನಗಿದು ಮೊದಲ ಚುನಾವಣೆ. ಹಿರಿಯ ಅಧಿಕಾರಿಗಳ ಮಾರ್ಗ ದರ್ಶನದಿಂದ ಮಾರ್ಚ್‌ನಿಂದಲೇ ಬಂದೋ ಬಸ್ತ್ಗೆ ಕಾರ್ಯಚಟುವಟಿಕೆ ಆರಂಭಿಸಿದ್ದೆ. ಪ್ರಧಾನಿ, ರಾಷ್ಟ್ರೀಯ ಪಕ್ಷಗಳ ಅಧ್ಯಕ್ಷರ ಜಿಲ್ಲಾ ಭೇಟಿ, ಇತರ ವಿವಿ ಐಪಿ ಬಂದೋಬಸ್ತ್ ಅನ್ನು ವ್ಯವಸ್ಥಿತವಾಗಿ ಕಲ್ಪಿಸಿದ್ದೆವು. ಅಧಿಕಾರಿಗಳೊಂದಿಗೆ ನಿರಂತರ ಸಭೆ, ವೀಡಿಯೋ ಕಾನ್ಫರೆನ್ಸ್‌, ಚುನಾವಣಾ ಆಯೋಗದೊಂದಿಗೂ ಸಭೆ, ಸಂವಹನ ನಡೆಸಲಾಗಿತ್ತು. ಸಿಬಂದಿ ನಿಯೋಜನೆ ಕುರಿತು ಜಿಲ್ಲಾ ಪೊಲೀಸ್‌ ಅಧಿಕಾರಿಗಳ ಜತೆಗೂ ಆಗಾಗ್ಗೆ ಸಭೆ ನಡೆಯುತ್ತಿತ್ತು. ಪರಿಣಾಮ ಶಾಂತಿಯುತ ಮತದಾನಕ್ಕೆ ನಾಂದಿಯಾಯಿತು.

ವ್ಯವಸ್ಥೆ ಹೇಗಿತ್ತು? 
ವ್ಯವಸ್ಥೆ ಅಚ್ಚುಕಟ್ಟಾಗಿ ನಿರ್ವಹಣೆ ಮಾಡಲಾಗಿತ್ತು. ಎಲ್ಲಿಯೂ ಲೋಪವಾಗದಂತೆ ಎಚ್ಚರಿಕೆ ವಹಿಸಲಾಗಿತ್ತು. ಚೆಕ್‌ಪೋಸ್ಟ್‌, ಫ್ಲೈಯಿಂಗ್‌ ಸ್ಕ್ವಾಡ್‌ ಕೂಡ ಉತ್ತಮವಾಗಿ ಕೆಲಸ ಮಾಡಿದೆ. ಕೇಂದ್ರೀಯ ಅರೆಸೇನಾ ಪಡೆ, ಸಶಸ್ತ್ರ ಸೀಮಾದಳ, ಹರಿಯಾಣ ಪೊಲೀಸ್‌, ಬಿಎಸ್‌ಎಫ್ ನಿಯೋಜನೆಗೆ  ನೀಲನಕಾಶೆ ಸಿದ್ಧಪಡಿಸಿ ಕೊಂಡಿದ್ದೆವು. ಅವರಿಗೆ ಮೂಲ ಸೌಕರ್ಯ, ಆಹಾರ, ವಸತಿಗೆ ಶಾಲೆ, ಕಾಲೇಜು ಹಾಸ್ಟೆಲ್‌ ಸಜ್ಜುಗೊಳಿಸಿ ಉತ್ತಮ  ವ್ಯವಸ್ಥೆ ಕಲ್ಪಿಸಿದ್ದೆವು. ವೈದ್ಯಕೀಯಕ್ಕೆ ಕೆಎಂಸಿ ಸಹಿತ ಇತರ ಆಸ್ಪತ್ರೆಗಳು ಸಹಕಾರ ನೀಡಿವೆ. 

ಗಲಭೆಕೋರರ ನಿಯಂತ್ರಣ ಯಶಸ್ವಿಯಾಯೆ¤à?
ಜಿಲ್ಲೆಯಲ್ಲಿ ಒಟ್ಟು 226 ಸೂಕ್ಷ್ಮ ಮತಗಟ್ಟೆ ಇತ್ತು. ಅಲ್ಲಿಗೆ ಅರೆಸೇನಾ ಪಡೆ ಸಿಬಂದಿ ನಿಯೋಜಿಸಿ ವಿಶೇಷ ನಿಗಾ ವ್ಯವಸ್ಥೆ ಮಾಡಲಾಗಿತ್ತು. ಅಹಿತಕರ ಘಟನೆ ನಡೆಸುವ ಮನೋಸ್ಥಿತಿ ಇರುವ 2,232 ಮಂದಿಯಿಂದ ಮುಚ್ಚಳಿಕೆ ಪಡೆಯಲಾಗಿತ್ತು. ತಲೆಮರೆಸಿಕೊಂಡಿದ್ದವರ ಪೈಕಿ 4,300 ಮಂದಿಯನ್ನು ಪತ್ತೆ ಮಾಡಿ ಕೋರ್ಟ್‌ಗೆ ಹಾಜರುಪಡಿಸಿದ್ದೆವು. 17 ಮಂದಿ ಗಡೀಪಾರು ಮಾಡಿ, 3 ಮಂದಿ ವಿರುದ್ಧ ಗೂಂಡಾ ಕಾಯ್ದೆ ಕೇಸು ದಾಖಲಿಸಿಲಾಗಿತ್ತು. ಈ ಮೂಲಕ ಗಲಭೆಕೋರರನ್ನು ನಿಯಂತ್ರಿಸಿದ್ದೆವು.

ನಕ್ಸಲ್‌ ಸಮಸ್ಯೆ-ಸಂಶಯವಿತ್ತೆ?
ನಕ್ಸಲ್‌ ಪೀಡಿತವೆಂದು ಗುರುತಿಸಿದ್ದ 54 ಮತಗಟ್ಟೆಗಳಲ್ಲಿ ಪ್ಯಾರಾ ಮಿಲಿಟರಿ ಪಡೆಯನ್ನು ನಿಯೋಜಿಸಲಾಗಿತ್ತು. ನಕ್ಸಲರ ಚಲನವಲನ ಕ್ಷೀಣಿಸಿದ್ದರೂ ಸಂಶಯಿತ ಮತಗಟ್ಟೆಗಳ ಮೇಲೆ ಕಣ್ಗಾವಲು ಇರಿಸಲಾಗಿದ್ದುದರಿಂದ ಶಾಂತಿ ಯುತ, ಸುಗಮ ಮತದಾನ ಸಾಧ್ಯವಾಯಿತು.

– ಚೇತನ್‌ ಪಡುಬಿದ್ರಿ

ಟಾಪ್ ನ್ಯೂಸ್

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

kmc

Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ

11(1)

Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.