ಸರಕಾರದ ಅನುದಾನಕ್ಕೆ ಯತ್ನ: ಪ್ರಮೋದ್, ಸೊರಕೆ
Team Udayavani, Nov 3, 2017, 6:40 AM IST
ಉಡುಪಿ: ಉಡುಪಿ ಗ್ರಾಮೀಣ ಬಂಟರ ಸಂಘ ಅಲೆವೂರು ಇದರ ಮಹತ್ವಾಕಾಂಕ್ಷಿ ಯೋಜನೆ ಗ್ರಾಮೀಣಾಭಿವೃದ್ಧಿಗೆ ಪೂರಕವಾಗಿ ಸಭಾಭವನ ನಿರ್ಮಾಣದ ಮೂಲಕ ಆ ಭಾಗದ ಜನತೆಗೆ ಉತ್ತಮ ಸೇವೆ ದೊರಕುವ ಭರವಸೆ ಇರುವ ನೆಲೆಯಲ್ಲಿ ಮುಖ್ಯಮಂತ್ರಿ ಅವರಲ್ಲಿ ಚರ್ಚಿಸಿ ಸಭಾಭವನ ನಿರ್ಮಾಣಕ್ಕೆ ಸರಕಾರದ ಅನುದಾನ ಒದಗಿಸಿಕೊಡುವಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಸಚಿವ ಪ್ರಮೋದ್ ಮಧ್ವರಾಜ್ ಮತ್ತು ಶಾಸಕ ವಿನಯ ಕುಮಾರ್ ಸೊರಕೆ ಭರವಸೆ ನೀಡಿದರು.
17 ಗ್ರಾಮಗಳ ಸುಮಾರು 2,500 ಮಂದಿ ಸದಸ್ಯರನ್ನು ಹೊಂದಿದ ಉಡುಪಿ ಗ್ರಾಮೀಣ ಬಂಟರ ಸಂಘ ಅಲೆವೂರು, ಮಣಿಪುರ ಗ್ರಾಮದ ಕುಂತಳನಗರದಲ್ಲಿ ಸಬಾಭವನ ನಿರ್ಮಾಣಕ್ಕೆ ಅಣಿಯಾಗಿದ್ದು, ಇದರ ಶಂಕು ಸ್ಥಾಪನೆ ಕಾರ್ಯಕ್ರಮ ಡಿ. 10ರಂದು ನಡೆಯಲಿದೆ. ಈ ಪ್ರಯಕ್ತ ಗ್ರಾಮೀಣ ಬಂಟರ ಸಂಘ ಮತ್ತು ಗ್ರಾಮೀಣ ಬಂಟರ ಸಂಘದ ಬಂಟರ ಸಭಾಭವನ ನಿರ್ಮಾಣ ಹಾಗೂ ಅಭಿವೃದ್ಧಿ ಸಮಿತಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಮತ್ತು ಶಾಸಕ ವಿನಯ ಕುಮಾರ್ ಸೊರಕೆ ಅವರನ್ನು ಭೇಟಿ ಮಾಡಿ ನೀಲನಕ್ಷೆ ತೋರಿಸಿ ವಿವರಿಸಿದರು.
ಗ್ರಾಮೀಣ ಬಂಟರ ಸಂಘದ ಅಧ್ಯಕ್ಷ ಸಕಾರಾಮ ಶೆಟ್ಟಿ, ಕಟ್ಟಡ ಸಮಿತಿ ಅಧ್ಯಕ್ಷರಾದ ಅಶೋಕ ಕುಮಾರ್ ಶೆಟ್ಟಿ, ಮುನಿಯಾಲು ಉದಯ ಕುಮಾರ್ ಶೆಟ್ಟಿ, ನವೀನಚಂದ್ರ ಶೆಟ್ಟಿ ಕಾಪು, ಹರೀಶ್ ಬೆಳ್ಳೆ, ಕುಶಲ ಶೆಟ್ಟಿ ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.