“ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕೆ ಪ್ರಯತ್ನ’
Team Udayavani, Jul 21, 2018, 7:00 AM IST
ಅಜೆಕಾರು: ಹಿರ್ಗಾನ ಪಂ. ವ್ಯಾಪ್ತಿಯನ್ನು ಕೇಂದ್ರವಾಗಿರಿಸಿ ಕೊಂಡು ಹೆರ್ಮುಂಡೆ, ಕುಕ್ಕುಂದೂರು ಒಳಗೊಂಡಂತೆ ಬಹು ಗ್ರಾಮ ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕೆ ಪ್ರಯತ್ನಿಸಲಾಗುವುದು ಎಂದು ಶಾಸಕ ಸುನಿಲ್ ಕುಮಾರ್ ಹೇಳಿದರು.
ಅವರು ಹಿರ್ಗಾನ ಗ್ರಾ. ಪಂ.ವ್ಯಾಪ್ತಿಯ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಕೆರೆ ಅಭಿವೃದ್ಧಿಗೆ ಮನವಿ
ಹಿರ್ಗಾನ ವ್ಯಾಪ್ತಿಯ ವಿಶಾಲವಾದ ಕೆರೆಗಳನ್ನು ಅಭಿವೃದ್ಧಿಪಡಿಸಿದಲ್ಲಿ ಪಂ. ವ್ಯಾಪ್ತಿಯ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ಜತೆಗೆ ಅಂತರ್ಜಲ ಹೆಚ್ಚಳಗೊಳ್ಳಲು ಸಾಧ್ಯ. ಈ ನಿಟ್ಟಿನಲ್ಲಿ ತುರ್ತಾಗಿ ಕೆರೆ ಅಭಿವೃದ್ಧಿಗೆ ಅನುದಾನ ಒದಗಿಸುವಂತೆ ಪಂಚಾಯತ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಶಾಸಕರಲ್ಲಿ ಮನವಿ ಮಾಡಿದರು.
ಮನವಿಗೆ ಸ್ಪಂದಿಸಿದ ಶಾಸಕರು ಕೆರೆ ಅಭಿವೃದ್ಧಿಯ ಅಂದಾಜುಪಟ್ಟಿ ತಯಾರಿಸಿ ನೀಡುವಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಸೂಚಿಸಿದರು.
ಸೇತುವೆ, ರಸ್ತೆಗೆ ಅನುದಾನ ಹಿರ್ಗಾನ ಪಂಚಾಯತ್ ವ್ಯಾಪ್ತಿಯ ಚಿಕ್ಕಲ್‌ಬೆಟ್ಟು ಸೇತುವೆ ನಿರ್ಮಾಣಕ್ಕೆ, ಬೈಲೂರು ಸಂಪರ್ಕ ರಸ್ತೆ, ಕಾನಂಗಿ ರಸ್ತೆ, ಕುಂದೇಶ್ವರ ರಸ್ತೆ, ತುಂಬೆಹಿತ್ಲುವಿನಿಂದ ಪತ್ತೂಂಜಿಕಟ್ಟೆ ರಸ್ತೆ ಅಭಿವೃದ್ಧಿ ಪಡಿಸುವಂತೆ ಪಂ. ಅಧ್ಯಕ್ಷರು ಮನವಿ ಮಾಡಿದರು. ಈ ರಸ್ತೆಗಳ ಅಭಿವೃದ್ಧಿಗೆ ಹಂತಹಂತವಾಗಿ ಅನುದಾನ ನೀಡುವ ಭರವಸೆ ನೀಡಿದರು. ಬಾಳೆಹಿತ್ಲು ರಸ್ತೆ, ನೆಲ್ಲಿಕಟ್ಟೆ ಬಲೊಟ್ಟು ಸೇತುವೆ ನಿರ್ಮಾಣ, ರಾಜೀವ ನಗರ ಶ್ಮ¾ಶಾನಕ್ಕೆ ಹೋಗುವ ರಸ್ತೆ ಕಾಮಗಾರಿಗೆ ಶಾಸಕರ ಅನುದಾನ ಮಂಜೂರು ಮಾಡುವಂತೆ ಪಂಚಾಯತ್ ಸದಸ್ಯರು ಮನವಿ ಮಾಡಿದರು.
ಕಾಡುಪ್ರಾಣಿ ಹಾವಳಿ
ಕಾಡು ಪ್ರಾಣಿಗಳು ಕೃಷಿ ಭೂಮಿ ಯಲ್ಲಿಯೇ ಸಂಚರಿಸುತ್ತಿದ್ದು ಇದನ್ನು ತಡೆಯುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಪಂಚಾಯತ್ ಸದಸ್ಯರು ಹಾಗೂ ಸಾರ್ವಜನಿಕರು ಮನವಿ ಮಾಡಿದರು. ಈ ಬಗ್ಗೆ ಸರಕಾರಕ್ಕೆ ಪತ್ರ ಬರೆದು ಸಮಸ್ಯೆ ಪರಿಹಾರಕ್ಕೆ ಯತ್ನಿಸಲಾಗುವುದು ಎಂದು ಶಾಸಕರು ಹೇಳಿದರು.
ಪಂಚಾಯತ್ ವ್ಯಾಪ್ತಿಯಲ್ಲಿ 94ಸಿಯಡಿ ಅರ್ಜಿ ಸಲ್ಲಿಸಿದವರಿಗೆ ಕೂಡಲೇ ಅರ್ಜಿ ವಿಲೇವಾರಿ ಮಾಡಿ ಹಕ್ಕುಪತ್ರ ನೀಡುವಂತೆ ಕಂದಾಯ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು. ಪಂಚಾಯತ್ ಕ್ರಿಯಾ ಯೋಜನೆಗಳ ಕಾಮಗಾರಿಗಳ ಅಂದಾಜು ಪಟ್ಟಿಯನ್ನು ಒಂದು ತಿಂಗಳೊಳಗೆ ತಯಾರಿಸಿ ಗ್ರಾ. ಪಂ.ಗೆ ನೀಡುವಂತೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅವರಿಗೆ ಹೇಳಿದರು.
ಕಾರ್ಯಕ್ರಮದಲ್ಲಿ ಜಿ.ಪಂ. ಸದಸ್ಯ ಉದಯ ಕೋಟ್ಯಾನ್, ತಾ.ಪಂ. ಅಧ್ಯಕ್ಷೆ ಮಾಲಿನಿ ಶೆಟ್ಟಿ ಹಾಗೂ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.
ಕೆರೆ,ಸೇತುವೆ ನಿರ್ಮಾಣಕ್ಕೆ ಅನುದಾನ: ಮನವಿ
ಪಂ. ವ್ಯಾಪ್ತಿಯ ಚಿಕ್ಕಲ್‌ಬೆಟ್ಟು ಸೇತುವೆ ಕುಸಿಯುತ್ತಿರುವ ಬಗ್ಗೆ ಹಾಗೂ ಹರಿಯಪ್ಪ ಕೆರೆ ಅಭಿವೃದ್ಧಿಪಡಿಸುವ ಬಗ್ಗೆ ಉದಯವಾಣಿ ಪತ್ರಿಕೆಯು ವರದಿ ಮಾಡಿ ಬೆಳಕು ಚೆಲ್ಲಿತ್ತು.ಶಾಸಕರ ಅಹವಾಲು ಸ್ವೀಕಾರ ಸಂದರ್ಭ ಸಮಸ್ಯೆಯ ಬಗ್ಗೆ ಶಾಸಕರ ಗಮನ ಸೆಳೆದ ಗ್ರಾಮಸ್ಥರು ಮತ್ತು ಪಂಚಾಯತ್ ಅಧ್ಯಕ್ಷರು ಹಾಗು ಸದಸ್ಯರು ಪತ್ರಿಕೆಯಲ್ಲಿ ವರದಿಯಾದ ಬಗ್ಗೆ ಸಭೆಯ ಗಮನಕ್ಕೆ ತಂದರು.
ಶಾಸಕ ಸುನಿಲ್ ಕುಮಾರ್ ಚಿಕ್ಕಲ್‌ಬೆಟ್ಟು ಸೇತುವೆಗೆ ಅನುದಾನ ನೀಡುವ ಭರವಸೆ ನೀಡಿ ಹರಿಯಪ್ಪ ಕೆರೆ ,ಕಡಂಬಗುತ್ತು ಕೆರೆ ಅಭಿವೃದ್ಧಿಗೆ ಅಂದಾಜು ಪಟ್ಟಿ ನೀಡುವಂತೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.