ಎಕ್ಕದ ಟ್ರೇಡ್ಮಾರ್ಕ್ ಉಲ್ಲಂಘನೆ ಪ್ರಕರಣ: ಜಿಲ್ಲಾ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್ ತಡೆ
Team Udayavani, Aug 31, 2024, 9:37 PM IST
ಉಡುಪಿ: ಜಿಲ್ಲೆಯ ಕಾರ್ಕಳ ತಾಲೂಕಿನ ರೆಂಜಾಳ ಗ್ರಾಮದ ಸುಧಾಕರ್ ಎಂ. ಪೂಜಾರಿ ಅವರ ರಿಜಿಸ್ಟರ್ಡ್ ಟ್ರೇಡ್ ಮಾರ್ಕ್ ಹೊಂದಿರುವ “ಎಕ್ಕದ’ ಎಂಬ ನೋವಿನ ಎಣ್ಣೆಯ ಟ್ರೇಡ್ ಮಾರ್ಕ್ಗೆ ಸಂಬಂಧಪಟ್ಟಂತೆ, ಈ ಟ್ರೇಡ್ ಮಾರ್ಕ್ ಉಲ್ಲಂಘಿಸಿ “ಎಕ್ಕಮಾಲೆ’ ಎಂಬ ಹೆಸರಿನಲ್ಲಿ ಉತ್ಪಾದನೆ ಮತ್ತು ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದ್ದ ನೋವಿನ ಎಣ್ಣೆ ಮಾರಾಟಕ್ಕೆ ತಡೆ ನೀಡಿ ಉಡುಪಿ ಜಿಲ್ಲಾ ನ್ಯಾಯಾಲಯ ನೀಡಿದ್ದ ಆದೇಶಕ್ಕೆ ರಾಜ್ಯ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಮೂಡುಬಿದಿರೆಯ ಸಂಜೀವಿನಿ ಆಯುರ್ವೇದಿಕ್ ಎಂಬ ಹೆಸರಿನಲ್ಲಿ ಎಕ್ಕಮಾಲೆ ಎಂಬ ನೋವಿನ ಎಣ್ಣೆಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದ ಮೋಹಿದ್ದಿನ್ ಕುನ್ನಿ ಯಾನೆ ಎಂ. ಕೆ. ಗಾರ್ಡಡಿ ಅವರಿಗೆ ಉತ್ಪಾದನೆ ಮತ್ತು ಮಾರಾಟ ಮಾಡದಂತೆ ತಡೆಯಾಜ್ಞೆ ವಿಧಿಸಿ ಆ.2ರಂದು ಉಡುಪಿ ನ್ಯಾಯಾಲಯ ಆದೇಶ ಹೊರಡಿಸಿತ್ತು. ಈ ಆದೇಶಕ್ಕೆ ತಡೆಯಾಜ್ಞೆ ನೀಡುವಂತೆ ಕೋರಿ ಎಂ.ಕೆ. ಗಾರ್ಡಡಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್. ದೇವದಾಸ್ ಅವರಿದ್ದ ಪೀಠ, ಜಿಲ್ಲಾ ನ್ಯಾಯಾಲಯದ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿ, ಪ್ರತಿವಾದಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ಮುಂದೂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rakesh Adiga: ನಾನು ಮಿಡಲ್ ಕ್ಲಾಸ್ ಹುಡುಗ ಮರ್ಯಾದೆ ಉಳಿಸಿ!
Thekkatte: ಗ್ರಾಮೀಣ ಭಾಗದಲ್ಲಿ ಹೆಚ್ಚುತ್ತಿದೆ ಗೋ ಕಳವು ಪ್ರಕರಣ
Bengaluru: 19 ಕಡೆ ಫ್ಲಿಪ್ ಕಾರ್ಟ್, ಅಮೆಜಾನ್ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.