ಹಬ್ಬದಂತೆ ಚುನಾವಣೆ: ಡಿಸಿ
Team Udayavani, Apr 2, 2019, 6:30 AM IST
ಉಡುಪಿ: ಸಮಾನತೆ ಸೂಚನೆ ಆಗಿರುವ ಮತದಾನವನ್ನು ಹಬ್ಬದಂತೆ ಆಚರಿಸಬೇಕು. ಮತದಾನದ ಜಾಗೃತಿಗಾಗಿ ಆಯೋಜಿಸಿದ ಕಾರ್ಯಕ್ರಮಗಳಲ್ಲಿ ಉತ್ಸಾಹದಿಂದ ಪಾಲ್ಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಮತದಾರರಿಗೆ ಕರೆ ನೀಡಿದರು.
ಅವರು ಬ್ರಹ್ಮಗಿರಿಯ ಬಾಲಭವನದಲ್ಲಿ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ನಡೆದ ಅಂಗವಿಕಲ ಮತದಾರರಿಗೆ ಮತದಾನದ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಜಿ.ಪಂ. ಸಿಇಒ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷೆ ಸಿಂಧೂ ಬಿ. ರೂಪೇಶ್ ಮಾತನಾಡಿ, ಯಾರಿಗೂ ಭೇದ ಭಾವ ಮಾಡದೆ 18 ವರ್ಷ ತುಂಬಿದ ಪ್ರತಿಯೊಬ್ಬರೂ ಮತದಾನ ಮಾಡುವ ಅವಕಾಶ ಸಂವಿಧಾನ ನೀಡಿದೆ. ಆದರೆ ಗುರುತಿನ ಚೀಟಿ ಹೊಂದಿರುವ ಪ್ರತಿಯೊಬ್ಬರೂ ಮತದಾನ ಮಾಡುವು ದಿಲ್ಲ. ಪ್ರತೀ ವರ್ಷ ಮತದಾನ ಮಾಡುವವರ ಸಂಖ್ಯೆ ಹೆಚ್ಚಾಗಬೇಕು ಎಂಬ ಕಾರಣಕ್ಕಾಗಿ ಕಳೆದ ಬಾರಿ ಕಡಿಮೆ ಮತ ದಾನವಾದ ಪ್ರದೇಶದಲ್ಲಿ ಮತದಾನದ ಬಗ್ಗೆ ಹೆಚ್ಚಿನ ಅರಿವು ಮೂಡಿಸುವ ಸಲುವಾಗಿ ಮತದಾನದ ಜಾಗೃತಿ ಕಾರ್ಯಕ್ರಮಗಳನ್ನು ನಡೆಲಾಗುತ್ತಿದೆ. ಅಂಗವಿಕಲರು ಹಾಗೂ ಅಶಕ್ತರಿಗೆ ಮತಗಟ್ಟೆಗೆ ಬಂದು ಮತದಾನ ಮಾಡಲು ಸಹಾಯಕವಾಗುವಂತೆ ಸಾರಿಗೆ ಹಾಗೂ ವೀಲ್‌ಚೇರ್ ಸೌಲಭ್ಯಗಳನ್ನು ಒದಗಿಸಲಾಗಿದೆ. ಮತಗಟ್ಟೆಗಳಲ್ಲಿ ನೀಡುವಂತಹ ಸೌಲಭ್ಯಗಳಿಗೆ ಹೆಚ್ಚಿನ ಆದÂತೆ ನೀಡಿದ್ದು, ಅಗತ್ಯ ಇದ್ದಲ್ಲಿ ಇನ್ನೂ ಹೆಚ್ಚಿನ ಸೌಲಭ್ಯಗಳನ್ನು ನೀಡಲಾಗುವುದು. ಪ್ರತಿಯೊಬ್ಬರು ತಮಗೆ ಸೂಕ್ತವೆನಿಸಿದ ಅಭ್ಯರ್ಥಿಗೆ ನಿರ್ಭೀತಿಯಿಂದ ಮತದಾನ ಮಾಡುವಂತೆ ಕರೆ ನೀಡಿದರು.
ವಿವಿ ಪ್ಯಾಟ್ ಹಾಗೂ ಇವಿಯಂ ಮತಯಂತ್ರದ ಕಾರ್ಯ ವೈಖರಿ ಬಗ್ಗೆ ಮಾಹಿತಿ ನೀಡಲಾಯಿತು. ಸಿಂಧೂ ಬಿ.ರೂಪೇಶ್ ಮತದಾನದ ಪ್ರತಿಜ್ಞಾ ವಿಧಿ ಬೋಧಿಸಿದರು. ವಿಶೇಷ ಚೇತನರಿಂದ ಮತದಾನ ಜಾಗೃತಿಯ ಕಿರು ನಾಟಕ ಪ್ರದರ್ಶನ ಹಾಗೂ ಮತದಾನ ಮತ್ತು ಮತಎಣಿಕೆಯ ಪ್ರಾತ್ಯಕ್ಷಿಕೆ ನಡೆಯಿತು.
ತಾ.ಪಂ. ಇಒ ರಾಜು ಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್ ಉಪಸ್ಥಿತರಿದ್ದರು. ಹರಿಕೃಷ್ಣ ಶಿವತ್ತಾಯ ಕಾರ್ಯಕ್ರಮ ನಿರೂಪಿಸಿದರು.
ಮತಗಟ್ಟೆಗೆ ಕರೆ ತರುವ ವ್ಯವಸ್ಥೆ
ಹಿಂದಿನ ಚುನಾವಣೆಯಲ್ಲಿ ಮತ ಚಲಾಯಿಸದೆ ಹೊರಗುಳಿದಿ ರುವವರನ್ನು ಗುರುತಿಸಿ ಅವರಿಗೆ ಮನವರಿಕೆ ಮಾಡಿ ಈ ಬಾರಿ ಮತ ಚಲಾಯಿಸುವಂತೆ ಮತದಾನದ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಅಂಗವಿಕಲರು, ಮಹಿಳೆಯರನ್ನು ಮತಗಟ್ಟೆಗೆ ಕರೆ ತರುವ ವ್ಯವಸ್ಥೆಗಳನ್ನು ಮಾಡಲಾಗಿದೆ.
-ಹೆಪ್ಸಿಬಾ ರಾಣಿ ಕೊರ್ಲಪಾಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.