ರಾಜ್ಯದಲ್ಲಿ 1,108 ಎಲೆಕ್ಟ್ರಿಕ್ ಪವರ್ ಚಾರ್ಜಿಂಗ್ ಸೆಂಟರ್ : ಸಚಿವ ಸುನಿಲ್ ಕುಮಾರ್
ಕಾರ್ಕಳದಲ್ಲಿ ಜವುಳಿ ಪಾರ್ಕ್
Team Udayavani, Sep 4, 2022, 10:24 AM IST
ಕಾರ್ಕಳ : ರಾಜ್ಯದಲ್ಲಿ ಬೆಳಕು ಯೋಜನೆಯಲ್ಲಿ 3 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಅನುಕೂಲವಾಗಿದೆ. ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಗಾಗಿ 1,108 ಕಡೆಗಳಲ್ಲಿ ಎಲೆಕ್ಟ್ರಿಕ್ ಪವರ್ ಚಾರ್ಜಿಂಗ್ ಸೆಂಟರ್‌ಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದರು.
ಶುಕ್ರವಾರ ಕಾರ್ಕಳ ತಾಲೂಕು ನಿಟ್ಟೆ ಮೆಸ್ಕಾಂ ಉಪವಿಭಾಗವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯ ಸರಕಾರ ಇಂಧನ ಇಲಾಖೆ ಜತೆಗೆ ಇತರ ಇಲಾಖೆಗಳಲ್ಲಿ ಸಾಕಷ್ಟು ಯೋಜನೆ, ಬದಲಾವಣೆ ತಂದಿದೆ. ಇದರಿಂದ ಗ್ರಾಮೀಣ ಜನತೆಗೆ ಉಪಯೋಗವಾಗಿದೆ. ಬೊಮ್ಮಾಯಿ ನೇತೃತ್ವದ ಸರಕಾರ ಅಭಿವೃದ್ಧಿಗೆ ಒತ್ತು ನೀಡುವ ಸರಕಾರ. ಜನಪ್ರಿಯ ಯೋಜನೆಗಳಾದ ಬೆಳಕು ಯೋಜನೆ, ಗ್ರಾಮ ವನ್ ಯೋಜನೆ, ವಿದ್ಯಾನಿಧಿ ಯೋಜನೆಗಳು, ಮಾಸಾಶನಗಳ ಮೂಲಕ ಜನರ ಮನಗೆದ್ದಿದೆ ಎಂದರು.
ಕಾರ್ಕಳದಲ್ಲಿ ಜವುಳಿ ಪಾರ್ಕ್
ಕರಾವಳಿ ಭಾಗದಲ್ಲಿ ಉದ್ಯಮಗಳ ಸೃಷ್ಟಿ, ಆರ್ಥಿಕತೆ ಹೆಚ್ಚಳಕ್ಕೆ ಒತ್ತು ನೀಡಲಾಗುತ್ತಿದೆ. ಉದ್ಯೋಗಾವಕಾಶ ಕಲ್ಪಿಸುವ ದೃಷ್ಟಿಯಿಂದ ಕಾರ್ಕಳದಲ್ಲಿ ಜವುಳಿ ಪಾರ್ಕ್ ನಿರ್ಮಾಣ ಮಾಡಲಾಗುತ್ತಿದೆ. ಅದಕ್ಕಾಗಿ ನಿಟ್ಟೆಯಲ್ಲಿ 25 ಎಕರೆ ಜಾಗ ಗುರುತಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಕರಾವಳಿ ಮೂರ್ತಿಯ ಕೀರ್ತಿ ದಿಲ್ಲಿಗೆ
ಪ್ರವಾಸೋದ್ಯಮವನ್ನು ಬಲಗೊಳಿಸುವ ನಿಟ್ಟಿನಲ್ಲಿ ಬೈಲೂರಿನಲ್ಲಿ ನಿರ್ಮಿಸಲಾಗುತ್ತಿರುವ 33 ಅಡಿ ಎತ್ತರದ ಪರಶುರಾಮನ ಮೂರ್ತಿ ಹಾಗೂ ಥೀಮ್ ಪಾರ್ಕ್ ಡಿಸೆಂಬರ್‌ನಲ್ಲಿ ಉದ್ಘಾಟನೆಗೆ ಸಿದ್ಧವಾಗಲಿದೆ. ಬೈಲೂರಿನ ಪರಶುರಾಮನ ಮೂರ್ತಿಯ ಮಾದರಿಯನ್ನು ಪ್ರಧಾನಿ ನರೇಂದ್ರ ಮೋದಿಗೆ ನೀಡುವ ಮೂಲಕ ಕರಾವಳಿ, ಕಾರ್ಕಳದ ಕೀರ್ತಿಯನ್ನು ದಿಲ್ಲಿಗೆ ತಲುಪಿಸುವ ಕಾರ್ಯವಾಗಿದೆ ಎಂದು ಸಚಿವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.