ತುಂಡಾಗಿ ಬಿದ್ದ ವಿದ್ಯುತ್ ತಂತಿ ತಗಲಿ ಇಬ್ಬರ ಸಾವು
Team Udayavani, Aug 23, 2018, 3:10 AM IST
ಮಲ್ಪೆ: ಪಡುತೋನ್ಸೆ ಕೆಮ್ಮಣ್ಣು ಗ್ರಾಮದ ಫರಂಗಿ ಕುದ್ರವಿನಲ್ಲಿ ತುಂಡಾಗಿ ಬಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ಇಬ್ಬರು ಯುವಕರು ಬುಧವಾರ ಸಂಜೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಾಳಿಗರ ಕುದ್ರುವಿನ ಸಂಜೀವ ಬೆಲ್ಚಡ ಅವರ ಪುತ್ರ, ತೆಂಗಿನಕಾಯಿ ಕೀಳುವ ವೃತ್ತಿಯ ರಾಕೇಶ್ (22) ಮತ್ತು ಪಡುಕುದ್ರು ಬಳಿಯ ಕೃಷ್ಣ ಕಾಂಚನ್ ಅವರ ಪುತ್ರ, ತೆಂಕನಿಡಿಯುರು ಪ್ರ.ದ. ಕಾಲೇಜಿನ ಅಂತಿಮ ಬಿ.ಕಾಂ. ವಿದ್ಯಾರ್ಥಿ ಕೀರ್ತನ್ (21) ಮೃತಪಟ್ಟವರು.
ಮೀನು ಹಿಡಿಯಲು ಹೋಗಿದ್ದರು
ಸ್ನೇಹಿತರಾಗಿದ್ದ ಇಬ್ಬರೂ ಸಂಜೆ ವೇಳೆ ಫರಂಗಿಕುದ್ರವಿಗೆ ಮೀನು ಹಿಡಿಯಲು ಹೋಗಿದ್ದರು. ನಿರ್ಜನ ಪ್ರದೇಶದಲ್ಲಿ ಹುಲ್ಲಿನ ಮೇಲೆ ಬಿದ್ದ ವಿದ್ಯುತ್ ತಂತಿಯನ್ನು ಸರಿಸಲು ಹೋದಾಗ ಅದರಲ್ಲಿ ವಿದ್ಯುತ್ ಪ್ರವಹಿಸಿತು. ಆಕ್ರಂದನ ಕೇಳಿ ಮೀನು ಹಿಡಿಯುತ್ತಿದ್ದ ಮೀನುಗಾರರು ಧಾವಿಸಿ ಬಂದರು. ಅದಾಗಲೇ ಇಬ್ಬರೂ ಮೃತಪಟ್ಟಿದ್ದರು.
ಇಲ್ಲಿ ವಾಸ್ತವ್ಯ ಇಲ್ಲದ ಒಂದು ಹೆಂಚಿನ ಮನೆಯನ್ನು ಎರಡು ಕುದ್ರುಗಳ ನಡುವೆ ವಿದ್ಯುತ್ ತಂತಿ ಎಳೆಯಲು ಬಳಸಲಾಗಿದೆ. ಸ್ಥಳಕ್ಕೆ ಹೆಚ್ಚವರಿ ಪೊಲೀಸ್ ಅಧಿಕ್ಷಕ ಕುಮಾರಚಂದ್ರ, ಡಿವೈಎಸ್ಪಿ ಕುಮಾರಸ್ವಾಮಿ, ಪಿಐ ನವೀನ್‌ಚಂದ್ರ, ಮಲ್ಪೆ ಠಾಣೆ ಪಿಎಸ್‌ಐ ಮಧು ಬಿ.ಇ. ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಾಗಿದೆ.
ಕುಟುಂಬದ ಆಧಾರ ರಾಕೇಶ್
ರಾಕೇಶ್ ಅವರ ಮನೆಯಲ್ಲಿ ತಂದೆ, ತಾಯಿ, ತಂಗಿ ಮತ್ತು ಅನಾರೋಗ್ಯದ ಅಜ್ಜಿ ಇದ್ದಾರೆ. ರಾಕೇಶನ ದುಡಿಮೆಯೇ ಅವರ ಕುಟುಂಬಕ್ಕೆ ಆಧಾರವಾಗಿತ್ತು. ಇದೀಗ ಇದ್ದ ಒಬ್ಬ ಮಗನನ್ನು ಕಳೆದುಕೊಂಡ ಕುಟುಂಬ ಕಂಗಾಲಾಗಿದೆ.
ಪ್ರತಿಭಾವಂತ ವಿದ್ಯಾರ್ಥಿ ಕೀರ್ತನ್
ಮೂವರು ಮಕ್ಕಳಲ್ಲಿ ಕೀರ್ತನ್ ಕಿರಿಯವ. ತಾಯಿ, ಅಣ್ಣ, ಅಕ್ಕ ಇದ್ದಾರೆ. ತಂದೆ ಮೀನು ಹಿಡಿಯುವ ಕೆಲಸ ಮಾಡಿಕೊಂಡಿದ್ದಾರೆ. ತೆಂಕನಿಡಿಯೂರು ಕಾಲೇಜಿನಲ್ಲಿ ಅಂತಿಮ ಬಿ.ಕಾಂ. ಓದುತ್ತಿದ್ದ ಈತ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ, ಎನ್ನೆಸ್ಸೆಸ್‌ನಲ್ಲಿ ಇದ್ದ ಅವರು ಉತ್ತಮ ವಾಲಿಬಾಲ್ ಆಟಗಾರನೂ ಹೌದು. ಮಂಗಳವಾರ ಕೊಡಗು ಪ್ರವಾಹ ಸಂತ್ರಸ್ತರಿಗೆ ವಿದ್ಯಾರ್ಥಿಗಳಿಂದ ಹಣ ಸಂಗ್ರಹಿಸುವಲ್ಲಿ ಮುಂಚೂಣಿಯಲ್ಲಿದ್ದು ಕೆಲಸ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್ ಎನ್‌ಕೌಂಟರ್ ಬಗ್ಗೆ ಡಿಐಜಿ ಹೇಳಿದ್ದೇನು ?
Udupi: ಈಶ್ವರನಗರ-ಪರ್ಕಳ ರಸ್ತೆಯ ಹೊಂಡಗಳಿಗೆ ಕೊನೆಗೂ ತೇಪೆ
Udupi: ವಿಸಿಲ್ ಹೊಡೆದು, ಕೈ ಸನ್ನೆಯಲ್ಲೇ ಟ್ರಾಫಿಕ್ ನಿರ್ವಹಣೆ!
Padubidri: ನಿಧಾನವಾಗಿ ಚಲಿಸಿ, ಹೆದ್ದಾರಿ ಕಾಮಗಾರಿ ನಡೆಯುತ್ತಿದೆ!
Karkala: ನಕ್ಸಲ್ ನಾಯಕ ವಿಕ್ರಂ ಗೌಡ ಹೆಬ್ರಿಯ ಕಾಡಿನಲ್ಲಿ ಎನ್ ಕೌಂಟರ್ ಗೆ ಬಲಿ
MUST WATCH
ಹೊಸ ಸೇರ್ಪಡೆ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
IFFI: ಪಾಪ್ ಸಂಗೀತಗಾರ ರಾಬಿ ವಿಲಿಯಮ್ಸ್ ಬೆಟರ್ ಮ್ಯಾನ್ ಚಿತ್ರೋತ್ಸವದ ಉದ್ಘಾಟನಾ ಸಿನಿಮಾ
Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ
Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ
Mahaveera Hanuma: ಆಲ್ಬಂನಲ್ಲಿ ಹನುಮ ಗಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.