ಉಳ್ಳೂರು-74: ವಿದ್ಯುತ್ ಶಾರ್ಟ್ ಸರ್ಕ್ಯೂಟ್, ರಬ್ಬರ್ ಗಿಡ ನಾಶ
Team Udayavani, Mar 16, 2020, 5:50 AM IST
ಸಿದ್ದಾಪುರ: ಉಳ್ಳೂರು-74 ಗ್ರಾಮ ಕಳಿನಜೆಡ್ಡು ಬಳಿಯ ಅಂಸಾಡಿ ಹತ್ತಿರ ವಿದ್ಯುತ್ ಲೈನ್ ಒಂದಕ್ಕೊಂದು ತಾಗಿ, ಡಾ| ಸುಬ್ರಹ್ಮಣ್ಯ ರಾವ್ ಅವರಿಗೆ ಸೇರಿದ ಸುಮಾರು 200ಕ್ಕೂ ಹೆಚ್ಚು ರಬ್ಬರ್ ಮರಗಳು ಸುಟ್ಟು ಕರಕಲಾಗಿವೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ರಬ್ಬರ್ ತೋಟಕ್ಕೆ ಬೆಂಕಿ ತಗಲಿರುವುದನ್ನು ಗಮನಿಸಿದ ಸ್ಥಳೀಯರು ಕೂಡ ಬೆಂಕಿ ನಂದಿಸಲು ಹರ ಸಾಹಸಪಟ್ಟರು. ಅದಾಗಲೇ ಬೆಂಕಿಯ ಕೆನ್ನಾಲೆ ಆವರಿಸಿಕೊಂಡು 200ಕ್ಕೂ ಹೆಚ್ಚು ರಬ್ಬರ್ ಮರಗಳನ್ನು ಆಹುತಿ ಪಡೆದಿದೆ. ಘಟನ ಸ್ಥಳಕ್ಕೆ ಕುಂದಾಪುರ ಅಗ್ನಿ ಶಾಮಕದಳ ಆಗಮಿಸಿ, ಬೆಂಕಿ ನಂದಿಸಿದರು. ರಬ್ಬರ್ ತೋಟದ ಮಾಲಕ ಡಾ| ಸುಬ್ರಹ್ಮಣ್ಯ ರಾವ್ ಅವರಿಗೆ ಸಾವಿರಾರು ರೂ. ನಷ್ಟ ಸಂಭವಿಸಿದೆ.
ಎಚ್ಟಿ ಲೈನ್ ಸ್ಥಳಾಂತರಿಸಲು ಆಗ್ರಹ
ಕಳೆದ ವರ್ಷ ಫೆಬ್ರವರಿಯಲ್ಲಿ ಇದೇ ರೀತಿಯ ಘಟನೆ ಸಂಭವಿಸಿತ್ತು. ರಬ್ಬರ್ ತೋಟದ ಸುತ್ತ ಮುತ್ತಲಿನಲ್ಲಿ ಅನೇಕ ಮನೆಗಳಿದ್ದು, ದೊಡ್ಡ ಅನಾಹುತ ತಪ್ಪಿದೆ. ಹೆಚ್ಚಿನ ಸಂಖ್ಯೆಯಲ್ಲಿ ಅಕ್ಕಪಕ್ಕದಲ್ಲಿರುವ ಮನೆಯವರು ರವಿವಾರವಾದ್ದರಿಂದ ಮನೆಯಲ್ಲಿದ್ದರು. ಯಾರೂ ಇಲ್ಲದ ಸಂದರ್ಭದಲ್ಲಿ ಇಂತಹ ಘಟನೆ ನಡೆದರೆ ಯಾರು ಹೊಣೆ. ಪದೇ ಪದೇ ಆಕಸ್ಮಿಕವಾಗಿ ಬೆಂಕಿ ತಗಲುವುದರಿಂದ ವಿದ್ಯುತ್ ಲೈನ್ನ್ನು ಸ್ಥಳಾಂತರಿಸಿ, ಮುಖ್ಯ ರಸ್ತೆಯ ಬದಿಯಲ್ಲಿ ಹಾಕುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಸ್ಥಳೀಯರ ಸಹಕಾರ
ರಬ್ಬರು ತೋಟಕ್ಕೆ ಬೆಂಕಿ ತಗಲಿರುವುದನ್ನು ಗಮನಿಸಿದ ಸ್ಥಳೀಯರು ಬೆಂಕಿ ನಂದಿಸಲು ಹರಸಾಹಸಪಟ್ಟರು. ಸ್ಥಳೀಯವಾಗಿ ಸಿಗುವ ವಸ್ತು ಹಾಗೂ ಮರದ ಸೊಪ್ಪುಗಳಿಂದ ಬಡಿದು ಬೆಂಕಿ ನಂದಿಸಿದರು. ಇನ್ನೂ ಕೆಲವರು ಮನೆಯಿಂದ ನೀರನ್ನು ತಂದು ಬೆಂಕಿ ನಂದಿಸಲು ಪ್ರಯತ್ನಿಸಿದರು. ಅಗ್ನಿ ಶಾಮಕದಳ ಸ್ಥಳಕ್ಕೆ ಆಗಮಿಸುವಾಗಲೇ ಬೆಂಕಿಯನ್ನು ನಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು
Daily Horoscope: ದೀರ್ಘಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ
Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.