ಮರಳಿ ಕೃಷ್ಣಮಠಕ್ಕೆ “ಸುಭದ್ರೆ’
Team Udayavani, Apr 13, 2019, 6:05 AM IST
ಉಡುಪಿ: ಶ್ರೀಕೃಷ್ಣಮಠದಲ್ಲಿ ಹಲವು ದಶಕಗಳಿಂದ ಇದ್ದು ಉತ್ಸವಾದಿಗಳಲ್ಲಿ ಭಾಗಿಯಾಗಿದ್ದ ಆನೆ ಸುಭದ್ರೆ ಬುಧವಾರ ಮರಳಿ ಕೃಷ್ಣಮಠಕ್ಕೆ ಬುಧವಾರ ಆಗಮಿಸಿದೆ.
ಕಾಣಿಯೂರು ಶ್ರೀಗಳ ಪರ್ಯಾಯ ಸಂದರ್ಭ ಸುಭದ್ರೆಯ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲಿಗೆ ಕಳುಹಿಸಲಾಗಿತ್ತು. ಇದೀಗ ಸುಭದ್ರೆಯ ಆರೋಗ್ಯದಲ್ಲಿ ಪೂರ್ಣ ಚೇತರಿಕೆಯಾಗಿದೆ.
ಮುಂದಿನ ತಿಂಗಳು ಶ್ರೀಕೃಷ್ಣ ಮಠದಲ್ಲಿ ಪಲಿಮಾರು ಮಠದ ಕಿರಿಯ ಶ್ರೀಪಾದರ ಪಟ್ಟಾಭಿಷೇಕ ಹಾಗೂ ನಿರಂತರ ಉತ್ಸವಾದಿಗಳು ನೆರವೇರುವುದರಿಂದ ಆನೆಯ ಅವಶ್ಯಕತೆ ಮನಗಂಡು ಪುನಃ ಮಠಕ್ಕೆ ಆನೆಯನ್ನು ಕರೆತರಲಾಗಿದೆ.
ಪ್ರಸ್ತುತ ಸುಭದ್ರೆಯ ಆರೋಗ್ಯ ಸ್ಥಿತಿ ಉತ್ತಮವಾಗಿದೆ. ಕೆಲವು ಕಾಲ ಸಕ್ರೆಬೈಲಿನಲ್ಲಿದ್ದು, ಅಲ್ಲಿನ ವಾತಾವರಣಕ್ಕೆ ಹೊಂದಿಕೊಂಡಿದೆ. ಇಲ್ಲಿನ ವಾತಾವರಣಕ್ಕೂ ಹೊಂದಿಕೊಳ್ಳುವ ವಿಶ್ವಾಸವಿದೆ. ಆದರೆ ಆನೆಗೆ ಆರೋಗ್ಯ ಸಮಸ್ಯೆ ಎದುರಾದರೆ ಚಿಕಿತ್ಸೆ ನೀಡಲು ಇಲ್ಲಿ ಸೂಕ್ತ ಪಶು ವೈದ್ಯರಿಲ್ಲ. ಹಾಗಾಗಿ ಹೆಚ್ಚು ಎಚ್ಚರಿಕೆ ವಹಿಸಲಾಗುತ್ತದೆ. ಅವಶ್ಯ ಬಿದ್ದರೆ ಶಿವಮೊಗ್ಗದಿಂದಲೇ ಪಶುವೈದ್ಯರನ್ನು ಕರೆಸಿಕೊಳ್ಳಬೇಕಾಗುತ್ತದೆ ಎಂದು ಮಠದ ಮ್ಯಾನೇಜರ್ ಪ್ರಹ್ಲಾದ ಆಚಾರ್ಯ ಪ್ರತಿಕ್ರಿಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.