ನಾಗರಾಧನೆಯಿಂದ ಸರ್ವ ಕಷ್ಟ ನಿವಾರಣೆ: ಶ್ರೀ ಲಕ್ಷ್ಮೀಂದ್ರ ತೀರ್ಥ
Team Udayavani, Mar 11, 2017, 11:56 AM IST
ಕೊಲ್ಲೂರು: ಮಧ್ವಾಚಾರ್ಯರ ಮಾರ್ಗದಲ್ಲಿ ಸಾಗಿದರೆ ಜೀವನ ಸಾರ್ಥಕವಾಗುವುದು. ನಾನಾ ರೂಪದಲ್ಲಿರುವ ದೇವರನ್ನು ಭಕ್ತಿಯಿಂದ ಪ್ರಾರ್ಥಿಸಿದಲ್ಲಿ ಕಷ್ಟ, ಕಾರ್ಪಣ್ಯ ದೂರವಾಗಿ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ಕುಂದಾಪುರದ ವ್ಯಾಸರಾಜ ಮಠದ ಮಠಾಧೀಶ ಶ್ರೀ ಲಕ್ಷ್ಮೀಂದ್ರತೀರ್ಥ ಸ್ವಾಮೀಜಿ ಹೇಳಿದರು.
ಕೊಲ್ಲೂರಿನ ಉದ್ಯಮಿ ರಮೇಶ್ ಗಾಣಿಗ ಹಾಗೂ ನಯನಾ ರಮೇಶ್ ಗಾಣಿಗ ಮಕ್ಕಳ ನೇತೃತ್ವದಲ್ಲಿ ಮಾ. 10ರಂದು ಕೊಲ್ಲೂರಿನಲ್ಲಿ ನಡೆದ ಅಷ್ಟಪವಿತ್ರ ನಾಗಮಂಡಲೋತ್ಸವದ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಆಶೀರ್ವಚನ ನೀಡಿದರು.
ಶುಭಾಶಂಸನೆಗೈದ ಕೊಲ್ಲೂರು ದೇಗುಲದ ಅರ್ಚಕ ಡಾ| ಕೆ.ಎನ್. ನರಸಿಂಹ ಅಡಿಗ ಅವರು, ರಮೇಶ್ ಗಾಣಿಗ ಅವರ ಸೇವಾ ಕೈಂಕರ್ಯ ಹಾಗೂ ಆದರ್ಶಪ್ರಾಯ ಜೀವನಕ್ರಮ ವನ್ನು ಗುಣಗಾನ ಮಾಡಿದರು.
ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ, ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರು ಮುಖ್ಯ ಅತಿಥಿ ಗಳಾಗಿ ಭಾಗವಹಿಸಿದರು. ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ನಾಗಮಂಡಲೋತ್ಸವದ ಮಹತ್ವ ವಿವರಿಸಿದರು. ಧಾರ್ಮಿಕ ಮುಂದಾಳು ಬಿ. ಅಪ್ಪಣ್ಣ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ. ಸದಸ್ಯ ಶಂಕರ ಪೂಜಾರಿ, ಕೊಲ್ಲೂರು ಗ್ರಾ.ಪಂ. ಅಧ್ಯಕ್ಷ ಎಚ್. ಜಯಪ್ರಕಾಶ್ ಶೆಟ್ಟಿ, ಕೆಡಿಪಿ ಸದಸ್ಯ ರಾಜು ಪೂಜಾರಿ, ಕೊಲ್ಲೂರು ದೇಗುಲದ ಉಪಕಾರ್ಯ
ನಿರ್ವಹಣಾಧಿಕಾರಿ ಎಚ್. ಕೃಷ್ಣಮೂರ್ತಿ, ತಾ.ಪಂ. ಸದಸ್ಯೆ ಗ್ರಿಷ್ಮಾ ಬಿಡೆ, ಧರ್ಮಸ್ಥಳ ಗ್ರಾ.ಯೋ. ಅಧಿಕಾರಿ ಅಮರಪ್ರಸಾದ್ ಶೆಟ್ಟಿ, ಗೋಪಾಲಕೃಷ್ಣ ವಿ.ಸೇ.ಸ. ಸಂಘದ ಉಪಾಧ್ಯಕ್ಷ ಸುಧೀರ್ ಪಂಡಿತ್, ಡಾ| ಶ್ರೀಪಾದ ಶೆಟ್ಟಿ, ಸುಬ್ಬಯ್ಯ, ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘದ ಅಧ್ಯಕ್ಷ ಶ್ರೀನಿವಾಸ ಗಾಣಿಗ, ಬೆಂಗಳೂರು ಸೋಮಕ್ಷತ್ರಿಯ ಗಾಣಿಗ ಸಮಾಜದ ಅಧ್ಯಕ್ಷ ಎಚ್.ಟಿ. ನರಸಿಂಹ, ಬಾಕೂìರು ಸೋಮ ಕ್ಷತ್ರಿಯ ಗಾಣಿಗ ಸಂಘದ ಅಧ್ಯಕ್ಷ ಕೆ. ಗೋಪಾಲ, ಗಾಣಿಗ ಮಹಿಳಾ ಸಂಘದ ಅಧ್ಯಕ್ಷೆ ಶಶಿಕಲಾ ನಾರಾಯಣ ಗಾಣಿಗ, ಮಮತಾ ಗೋಪಾಲ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.
ಈ ಸಂದರ್ಭ ಲಕ್ಷ್ಮೀಂತೀರ್ಥ ಶ್ರೀಪಾದಂಗಳವರು ರಮೇಶ್ ಗಾಣಿಗ ಮತ್ತು ನಯನಾ ರಮೇಶ್ ಗಾಣಿಗ, ಪವನ ಗಾಣಿಗ, ಪ್ರಸನ್ನ ಗಾಣಿಗ, ಪ್ರತ್ವಿನ್ ಗಾಣಿಗ ಅವರನ್ನು ಆಶೀರ್ವದಿಸಿದರು. ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ವಿಧಾನಪರಿಷತ್ ಸದಸ್ಯ ಕೆ. ಪ್ರತಾಪ್‌ಚಂದ್ರ ಶೆಟ್ಟಿ ಶುಭಹಾರೈಸಿದರು. ಸುಬ್ರಹ್ಮಣ್ಯ ಪಡುಕೋಣೆ ಸ್ವಾಗತಿಸಿದರು, ರಾಜೇಶ್ ಕೆ.ಸಿ. ಕಾರ್ಯಕ್ರಮ ನಿರೂಪಿಸಿದರು, ರಂಗನಾಯಕ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.